4ನೇ ತರಗತಿಯ ಮಕ್ಕಳ ನಡುವೆ ಜಗಳ; ಕಾಂಪಾಸ್‌ನಿಂದ ಗೆಳೆಯನಿಗೆ 108 ಬಾರಿ ಚುಚ್ಚಿದ ಬಾಲಕರು.!!

ಇಂದೋರ್, (ನ.27): ಖಾಸಗಿ ಶಾಲೆಯೊಂದರಲ್ಲಿ ನಾಲ್ಕನೇ ತರಗತಿಯ ಮಕ್ಕಳ ನಡುವೆ ನಡೆದ ಜಗಳದಲ್ಲಿ ವಿದ್ಯಾರ್ಥಿಯೊಬ್ಬನ ಮೇಲೆ ಮೂವರು ಸಹಪಾಠಿಗಳು ಜ್ಯಾಮಿತಿ ಕಂಪಾಸ್‌ನಿಂದ 108 ಬಾರಿ ಚುಚ್ಚಿ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ.

ಏರೋಡೋಮ್ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ನಡೆದ ಜಗಳದಲ್ಲಿ ವಿದ್ಯಾರ್ಥಿಯ ಮೇಲೆ ಸಹಪಾಠಿಗಳು ಜ್ಯಾಮಿತಿ ಕಂಪಾಸ್‌ನಿಂದ 108 ಬಾರಿ ಹಲ್ಲೆ ನಡೆಸಿದ್ದಾರೆ ಎಂದು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಪಲ್ಲವಿ ಪೋರ್ವಾಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಪ್ರಕರಣ ಆಘಾತಕಾರಿಯಾಗಿದೆ. ಚಿಕ್ಕ ವಯಸ್ಸಿನ ಮಕ್ಕಳ ಹಿಂಸಾತ್ಮಕ ವರ್ತನೆಗೆ ಕಾರಣವನ್ನು ಕಂಡುಹಿಡಿಯಲು ನಾವು ಪೊಲೀಸರಿಂದ ತನಿಖಾ ವರದಿಯನ್ನು ಕೇಳಿದ್ದೇವೆ ಎಂದು ಅವರು ಹೇಳಿದರು.

ಘಟನೆಗೆ ಸಂಬಂಧಿಸಿದಂತೆ ಸಿಡಬ್ಲ್ಯೂಸಿ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಲಹೆ ನೀಡಲಿದೆ. ಮಕ್ಕಳು ಹಿಂಸಾತ್ಮಕ ದೃಶ್ಯಗಳನ್ನು ಒಳಗೊಂಡಿರುವ ವಿಡಿಯೋ ಗೇಮ್‌ಗಳನ್ನು ಆಡುತ್ತಾರೆಯೇ ಎಂದು ಕಂಡುಹಿಡಿಯಲಾಗುವುದು ಎಂದು ಅವರು ತಿಳಿಸಿದರು.

ನವೆಂಬರ್ 24 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಶಾಲೆಯಲ್ಲಿ ನಡೆದ ದಾಳಿಯಲ್ಲಿ ಮಗನಿಗೆ ಗಾಯವಾಗಿರುವುದಾಗಿ ಸಂತ್ರಸ್ತ ಬಾಲಕನ ತಂದೆ ಆರೋಪಿಸಿದ್ದಾರೆ.

ಮಗ ಮನೆಗೆ ಹಿಂದಿರುಗಿದ ಬಳಿಕ ಈ ಕುರಿತು ಮಾಹಿತಿ ನೀಡಿದ್ದಾನೆ. ಅವನ ಸಹಪಾಠಿಗಳು ಏಕೆ ಹಿಂಸಾತ್ಮಕವಾಗಿ ನಡೆಸಿಕೊಂಡರು ಎಂದು ನನಗೆ ಇನ್ನೂ ತಿಳಿದಿಲ್ಲ ಶಾಲಾ ಆಡಳಿತ ಮಂಡಳಿಯು ತರಗತಿಯ ಸಿಸಿಟಿವಿ ದೃಶ್ಯಗಳನ್ನು ನನಗೆ ನೀಡುತ್ತಿಲ್ಲ ಎಂದು ಅವರು ಹೇಳಿದರು.

ಈ ಕುರಿತು ಏರೋಡೋಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರು ನೀಡಿದ ನಂತರ ಸಂತ್ರಸ್ತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ವಿವೇಕ್ ಸಿಂಗ್‌ ಚೌಹಾಣ್ ತಿಳಿಸಿದ್ದಾರೆ.

ಘಟನೆಯಲ್ಲಿ ಭಾಗಿಯಾಗಿರುವ ಎಲ್ಲಾ ಮಕ್ಕಳು 10 ವರ್ಷದೊಳಗಿನವರಾಗಿದ್ದು ಕಾನೂನು ನಿಬಂಧನೆಗಳ ಪ್ರಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಗ್ರೇಟರ್ ಬೆಂಗಳೂರು; ಟೌನ್ ಶಿಪ್ ನಿರ್ಮಾಣಕ್ಕೆ ಭೂಸ್ವಾಧೀನಕ್ಕೆ ಹೆಚ್.ಡಿ.ದೇವೇಗೌಡರ ತೀವ್ರ ವಿರೋಧ

ಗ್ರೇಟರ್ ಬೆಂಗಳೂರು; ಟೌನ್ ಶಿಪ್ ನಿರ್ಮಾಣಕ್ಕೆ ಭೂಸ್ವಾಧೀನಕ್ಕೆ ಹೆಚ್.ಡಿ.ದೇವೇಗೌಡರ ತೀವ್ರ ವಿರೋಧ

ಟೌನ್ ಶಿಪ್ ನಿರ್ಮಾಣಕ್ಕೆ ರೈತರ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ತೀವ್ರ ವಿರೋಧ

[ccc_my_favorite_select_button post_id="105751"]
ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ

ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ

[ccc_my_favorite_select_button post_id="105775"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 2025ರ ಐಪಿಎಲ್ ಪಂದ್ಯದಲ್ಲಿ ಕೊನೆಗೂ ತವರು ನೆಲದಲ್ಲಿ ಉಸಿರು ಗಟ್ಟಿಸಿ, ಅಂತಿಮವಾಗಿ ಗೆದ್ದು ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.

[ccc_my_favorite_select_button post_id="105755"]
ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಚಿಕ್ಕಬಳ್ಳಾಪುರ: ಕಲ್ಲು ಕ್ವಾರಿ ಮತ್ತು ಸರ್ಕಾರಿ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಪ್ರತಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಕಲ್ಲು ತೂರಾಟ ನಡೆಸಿದ್ದರಿಂದ ಕುಪಿತನಾದ ಕಲ್ಲು ಕ್ವಾರಿ ಮಾಲೀಕ ಸಕಲೇಶಕುಮಾ‌ರ್ ಎಂಬುವರು ಗುಂಡು ಹಾರಿಸಿದ್ದು, ಚಿಕನ್ ರವಿ ಎಂಬುವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ,

[ccc_my_favorite_select_button post_id="105705"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!