ಚಿಕ್ಕಬಳ್ಳಾಪುರ, (ಡಿ.02); ಪಂಚ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಮತದಾನದ ದಿನ ಸಂಗ್ರಹಿಸಿದ ಸಮೀಕ್ಷೆಗಳು ಯಾವ ರಾಜ್ಯದಲ್ಲಿ ಯಾರಿಗೆ ಎಷ್ಟು ಸ್ಥಾನಗಳು ಬರುತ್ತೆ ಅಂತ ಹೇಳಿವೆ. ಆದರೆ ಕೆಲವು ರಾಜ್ಯಗಳಲ್ಲಿ ಸಮೀಕ್ಷೆಗೆ ತದ್ವಿರುದ್ದವಾಗಿ ಫಲಿತಾಂಶ ಹೊರಬೀಳಲಿದೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ವಿಶ್ಲೇಷಣೆ ಮಾಡಿದರು.
ನಗರ ಹೊರವಲಯದ ಪರಿವೀಕ್ಷಣಾ ಮಂದಿರದಲ್ಲಿ ತಾಲೂಕಿನ ಮಂಡಿಕಲ್ ಹೋಬಳಿಯ ಪಾತೂರು ಮತ್ತು ಅಡಗಲ್ಲು ಗ್ರಾಮಗಳಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ರೊಂದಿಗೆ ಬರ ವೀಕ್ಷಣೆಗೆ ತರಳುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿ, ತಾವೂ ಪಂಚ ರಾಜ್ಯಗಳ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡು ಬಂದಿದ್ದೇನೆ. ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲುವುದಿಲ್ಲ ಎಂದರು.
ಆದರೆ ಅಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆಯುತ್ತದೆ. ಅಲ್ಲಿ ಸಮ್ಮಿಶ್ರ ಸರ್ಕಾರ ಬರಬಹುದು. ಮಧ್ಯ ಪ್ರದೇಶದಲ್ಲಂತೂ ಬಿಜೆಪಿ ಗೆಲುವು ಖಚಿತ ಹಾಗೆ ಹಿಮಾಚಲ ಪ್ರದೇಶ, ಚತ್ತೀಸ್‌ಘಡ, ರಾಜಾಸ್ಥಾನಗಳಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿ ಗೆದ್ದು ಪ್ರಾಬಲ್ಯ ಮೆರೆಯಲಿದೆ ಎಂದರು.
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ, ಶಿಡ್ಲಘಟ್ಟ ಸೀಕಲ್ ರಾಮಚಂದ್ರಗೌಡ, ಮಾಜಿ ಶಾಸಕ ಎಂ. ರಾಜಣ್ಣ, ನಗರಸಭಾ ಮಾಜಿ ಅಧ್ಯಕ್ಷ ಅನಂದಬಾಬುರೆಡ್ಡಿ, ಚಿಕ್ಕಬಳ್ಳಾಪುರ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ, ಮತ್ತಿತರರು ಇದ್ದರು. (ಸಂಗ್ರಹ ಚಿತ್ರ)
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….