ಬೆಂಗಳೂರು, (ಡಿ.03): 4 ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಠುಸ್ ಪಟಾಕಿ ಆಗಿದೆ. ಅಲ್ಲಿ ಮೋದಿ ಅವರ ಪ್ರಭಾವ ಎದ್ದು ಕಾಣುತ್ತಿದೆ. ಮಧ್ಯಪ್ರದೇಶ ರಾಜಸ್ಥಾನಗಳಲ್ಲಿ ಬಿಜೆಪಿ ಸ್ವೀಪ್ ಆಗಲಿದೆ ಎಂದು ವಿರೋಧ ಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಆರ್.ಅಶೋಕ್, ಮಧ್ಯಪ್ರದೇಶ, ರಾಜಸ್ಥಾನಗಳಲ್ಲಿ ಬಿಜೆಪಿ ಸ್ವೀಪ್ ಆಗಲಿದೆ. ತೆಲಂಗಾಣದಲ್ಲೂ ಬಿಜೆಪಿಗೆ 11 ಸ್ಥಾನ ಈಗ ಬಂದಿದೆ. ಎಲ್ಲ ಕಡೆ ಬಿಜೆಪಿ ತನ್ನ ಸ್ಥಾನ ಹೆಚ್ಚಿಸಿಕೊಳ್ಳುತ್ತಿದೆ. ಮೋದಿಯವರ ಪ್ರಭಾವ ಎಲ್ಲ ಕಡೆ ಎದ್ದು ಕಾಣುತ್ತಿದೆ. ಛತ್ತಿಸ್ ಗಡದಲ್ಲೂ ಬಿಜೆಪಿ ಗೆಲ್ಲುವ ಪ್ರಯತ್ನ ಮುಂದುವರಿದಿದೆ ಎಂದು ಹೇಳಿದ್ದಾರೆ.
ರೆಸಾರ್ಟ್ ರಾಜಕಾರಣ; ಕಾಂಗ್ರೆಸ್ ನವರು ರೆಸಾರ್ಟ್ ರಾಜಕಾರಣ ಮಾಡಲು ಹೊರಟಿದೆ. ದೊಡ್ಡ ಶೋ ಕೊಡಲು ಡಿಕೆ ಶಿವಕುಮಾರ್ ತೆಲಂಗಾಣಕ್ಕೆ ಹೋಗಿದ್ದಾರೆ. ಜನರ ಕಷ್ಟ ಮರೆತು ತೆಲಂಗಾಣ ಶಾಸಕರಿಗಾಗಿ ಹೋಗಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ ಎಂದು ಕಿಡಿ ಕಾರಿದ್ದಾರೆ.
ಬಿಆರ್ ಎಸ್ ಕುಟುಂಬ ರಾಜಕಾರಣದಿಂದಾಗಿ ತೆಲಂಗಾಣ ಕಳೆದುಕೊಂಡಿದೆ. ತೆಲಂಗಾಣದಲ್ಲಿ 11 ಬಂದಿರೋದು ಬಿಜೆಪಿಯ ದೊಡ್ಡ ಸಾಧನೆಯೇ ಆಗಿದೆ. ಬಿಜೆಪಿಗೆ ಮುಂದಿನ ದಿನಗಳಲ್ಲಿ ಇನ್ನೂ ಒಳ್ಳೆಯ ಭವಿಷ್ಯವಿದೆ.
ಕಾಂಗ್ರೆಸ್ ಎರಡು ರಾಜ್ಯ ಕಳೆದುಕೊಂಡಿದೆ, ಬಿಜೆಪಿ ಸೊನ್ನೆಯಿಂದ 2 ರಾಜ್ಯ ಗಳಿಸಿದೆ. ಚುನಾವಣಾ ಫಲಿತಾಂಶದ ಬಳಿಕ ನಮ್ಮ ಪಕ್ಷದಿಂದ ಯಾರೂ ಕಾಂಗ್ರೆಸ್‌ಗೆ ಹೋಗಲ್ಲ ಇನ್ನುಂದೆ ಬಿಜೆಪಿಗೆ ಬರುವವರ ಸಂಖ್ಯೆ ಹೆಚ್ಚಾಗುತ್ತೆ. ಕಾಂಗ್ರೆಸ್‌ನ ಭಿನ್ನಮತೀಯರು ಬಿಜೆಪಿಗೆ ಬರ್ತಾರೆ. ಮುಖ್ಯವಾಗಿ ಈ ರಾಜ್ಯಗಳ ಫಲಿತಾಂಶದಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೇ ಗೆಲುವು ಸಾಧಿಸಲಿದೆ ಎಂಬುದು ಜನರಿಗೆ ಅರ್ಥವಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….