ತಮ್ಮ ಮನೆ ದೋಸೆ ತೂತು ಮುಚ್ಚಿಕೊಳ್ಳಲು ಸರ್ಕಸ್..!; ಸಿದ್ದು ಅಚ್ಚರಿ ಹೇಳಿಕೆ

ಬೆಳಗಾವಿ, (ಡಿ.11); ತಮ್ಮ ಪಕ್ಷದೊಳಗಿನ ಒಳಜಗಳ ಮತ್ತು ಬರಗಾಲ  ಪರಿಹಾರಕ್ಕೆ ಹಣ ನೀಡದ ಕೇಂದ್ರ ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕಿ ಜನರ ಗಮನ ಬೇರೆ ಕಡೆ ಸೆಳೆಯುವ ದುರುದ್ದೇಶದಿಂದ ರಾಜ್ಯದ ಬಿಜೆಪಿ ಶಾಸಕರು ವಿಧಾನಸಭೆಯಲ್ಲಿ ಧರಣಿ ನಡೆಸಿ ಕಲಾಪಕ್ಕೆ ತಡೆಯೊಡ್ಡುತ್ತಿದ್ದಾರೆ. ಇವರಿಗೆ ರಾಜ್ಯದ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ,  ಜನತೆ ರಾಜಕೀಯ ಪಕ್ಷಗಳು ಮತ್ತು ರಾಜಕೀಯ ನಾಯಕರಿಗೆ ಜನತೆ ಛೀಮಾರಿ ಹಾಕುತ್ತಿರುವುದಕ್ಕೆ ಚುನಾಯಿತ ಪ್ರತಿನಿಧಿಗಳ ಇಂತಹ ಬೇಜವಾಬ್ದಾರಿ ನಡವಳಿಕೆಗಳೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಮಾದ್ಯಮ ಹೇಳಿ ಬಿಡುಗಡೆ ಮಾಡಿರುವ ಜನರ ತೆರಿಗೆ ಹಣದಿಂದ ಬೆಳಗಾವಿಯಲ್ಲಿ ಸುವರ್ಣ ಸೌಧ ನಿರ್ಮಿಸಿ ವರ್ಷಕ್ಕೊಂದು ಬಾರಿ ವಿಧಾನಮಂಡಲದ ಅಧಿವೇಶನ ನಡೆಸುತ್ತಿರುವುದರ ಮುಖ್ಯ ಉದ್ದೇಶವೇ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳುವುದಾಗಿದೆ. ಇಂತಹ ಚರ್ಚೆಗೆ ಅವಕಾಶವನ್ನೇ ಕೊಡದೆ ಇರುವ  ರಾಜ್ಯದ ಬಿಜೆಪಿ ಶಾಸಕರು ತಾವು ಉತ್ತರ ಕರ್ನಾಟಕದ ವಿರೋಧಿಗಳು ಎನ್ನುವುದನ್ನು ಸಾಬೀತು ಪಡಿಸಿದ್ದಾರೆ.

ರಾಜ್ಯದಲ್ಲಿ ತೀವ್ರ ಬರಗಾಲ ಇದೆ. ರಾಜ್ಯ ಸರ್ಕಾರ ಶಕ್ತಿ ಮೀರಿ ಪರಿಹಾರ ಕಾರ್ಯವನ್ನು ನಡೆಸುತ್ತಿದೆ. ರಾಜ್ಯದ 223 ತಾಲ್ಲೂಕುಗಳಲ್ಲಿ ಬರಪರಿಸ್ಥಿತಿ ಇದೆ. ಬರಪರಿಹಾರಕ್ಕಾಗಿ. ರೂ.18,171 ಕೋಟಿ ನೆರವನ್ನು ಕೇಂದ್ರ ಸರ್ಕಾರದಿಂದ ಕೇಳಿದ್ದೇವೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ.  ಈ ನಷ್ಟಕ್ಕೆ ಪರಿಹಾರ ನೀಡಲು ರೂ.4,663 ಕೋಟಿ ಕೇಳಿದ್ದೇವೆ. ಸೆಪ್ಟಂಬರ್ 21 ರಂದು ಬರಪರಿಹಾರಕ್ಕಾಗಿ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೆವು.  ಕೇಂದ್ರದ ತಂಡ ಬಂದು ಸಮೀಕ್ಷೆ ನಡೆಸಿ, ವರದಿಯನ್ನೂ ಕೂಡಾ ನೀಡಿದೆ. ರಾಜ್ಯ ಸರ್ಕಾರದ ಮನವಿಗೆ ಇಲ್ಲಿಯ ವರೆಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ನಾವು ಬರೆದ ಪತ್ರಗಳಿಗೆ ಪ್ರತಿಕ್ರಿಯೆ ಇಲ್ಲ. ಪ್ರಧಾನಮಂತ್ರಿಯವರನ್ನು ಭೇಟಿ ಮಾಡಲು ಅವಕಾಶ ಕೇಳಿದರೂ ಕೊಟ್ಟಿಲ್ಲ. 

 ಡಬಲ್ ಎಂಜಿನ ಸರ್ಕಾರ ಬಂದರೆ ರಾಜ್ಯದಲ್ಲಿ ಹಾಲು-ತುಪ್ಪದ ಹೊಳೆ ಹರಿಯುತ್ತದೆ ಎಂಬ ಬಿಜೆಪಿ ನಾಯಕರ ಹಸಿ ಸುಳ್ಳುಗಳನ್ನು ನಂಬಿ ಕನ್ನಡಿಗರು 25 ಮಂದಿ ಬಿಜೆಪಿ ಸದಸ್ಯರನ್ನು ಲೋಕಸಭೆಗೆ ಕಳಿಸಿದ್ದರು. ಅವರು ಇಲ್ಲಿಯ ವರೆಗೆ ಲೋಕಸಭೆಯಲ್ಲಿ ತುಟಿ ಬಿಚ್ಚಿಲ್ಲ.

ವಿಧಾನಮಂಡಲದಲ್ಲಿ ಬರಗಾಲದ ಚರ್ಚೆ ನಡೆದರೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಈ ಅನ್ಯಾಯದ ವಿವರಗಳೆಲ್ಲವೂ ಹೊರ ಬಂದು ರಾಜ್ಯದ ಜನರ ಎದುರು ತಲೆತಗ್ಗಿಸುವಂತಾಗುತ್ತದೆ ಎನ್ನುವ ಕಾರಣಕ್ಕಾಗಿಯೇ ಪಿಳ್ಳೆ ನೆಪಗಳನ್ನು ಮುಂದಿಟ್ಟು ರಾಜ್ಯದ ಬಿಜೆಪಿ ಶಾಸಕರು ಧರಣಿ ನಡೆಸಿ ಕಲಾಪ ನಡೆಯದಂತೆ ತಡೆಯೊಡ್ಡುವ ಪ್ರಯತ್ನ ಮಾಡುತ್ತಿದ್ದಾರೆ. ರಾಜ್ಯದ ಪ್ರಜ್ಞಾವಂತ ಜನತೆ ಇದನ್ನೆಲ್ಲ ಗಮನಿಸುತ್ತಿದ್ದಾರೆ.

ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಆರ್ ಅಶೋಕ್ ಅವರಿಗೆ  ಅವರ ಪಕ್ಷದ ಬಹುಸಂಖ್ಯಾತ ಶಾಸಕರ ಬೆಂಬಲವೇ ಇಲ್ಲ. ಪ್ರತಿದಿನ ಅವರದ್ದೇ ಪಕ್ಷದ ಶಾಸಕರು ಒಬ್ಬೊಬ್ಬರಾಗಿ ಅಶೋಕ್ ಅವರ ಮುಖಕ್ಕೆ ಮಂಗಳಾರತಿ ಎತ್ತುತ್ತಿದ್ದಾರೆ. ಯಾವ ಕುರ್ಚಿಯೂ ಸಿಕ್ಕಿಲ್ಲ ಎಂಬ ವೇದನೆಯಿಂದ ಕುದಿಯುತ್ತಿರುವ  ಬಸವನಗೌಡ ಪಾಟೀಲ್ ಯತ್ನಾಳ್ ಅವರಂತಹವರು ಬಹಿರಂಗವಾಗಿ ಬಿ.ಎಸ್. ಯಡಿಯೂರಪ್ಪನವರಿಂದ ಹಿಡಿದು ಆರ್ .ಅಶೋಕ್ ವರೆಗೆ ಎಲ್ಲರ ವಿರುದ್ದ ಹರಿಹಾಯುತ್ತಿದ್ದಾರೆ. ಇದನ್ನೆಲ್ಲ ಗಮನಿಸುತ್ತಿರುವ ರಾಜ್ಯದ ಜನತೆ ಬಿಜೆಪಿ ಶಾಸಕರಿಗೆ ಬೀದಿ ಬೀದಿಯಲ್ಲಿ ಛೀಮಾರಿ ಹಾಕುತ್ತಿದ್ದಾರೆ. ಇದರಿಂದ ಮುಖ ಎತ್ತಿಕೊಂಡು ಹೋಗಲಾಗದ ಬಿಜೆಪಿ ಶಾಸಕರು ರಾಜ್ಯದ ಜನರ ಗಮನ ಬೇರೆ ಕಡೆ ಸೆಳೆಯುವ ಉದ್ದೇಶದಿಂದ ಕಲಾಪಕ್ಕೆ ಅಡ್ಡಿ ಉಂಟು ಮಾಡುತ್ತಿದ್ದಾರೆ.

ಮಾತೆತ್ತಿದರೆ ದಮ್ಮು ತಾಖತ್ ಬಗ್ಗೆ ಮಾತನಾಡುವ ಬಿಜೆಪಿ ನಾಯಕರು ವಿಧಾನಮಂಡಲದ ಕಲಾಪದಲ್ಲಿ ಭಾಗವಹಿಸುವ ಧೈರ ತೋರಬೇಕು. ವಿಧಾನಸಭಾ ಅಧಿವೇಶನವನ್ನು ಕರೆದಿರುವುದೇ ರಾಜ್ಯ ಸರ್ಕಾರದ ಆಡಳಿತದ ವಿಮರ್ಶೆಗೆ. ಸರ್ಕಾರ ತನ್ನ ಕರ್ತವ್ಯದಲ್ಲಿ ಎಡವಿದ್ದರೆ, ತಪ್ಪುಗಳನ್ನು ಮಾಡಿದ್ದರೆ ಅದನ್ನು ಎತ್ತಿ ತೋರಿಸುವ ಕೆಲಸವನ್ನು ವಿರೋಧ ಪಕ್ಷಗಳು ಮಾಡಬೇಕಾಗಿದೆ. ಆ ದಮ್ಮು ತಾಖತ್ ಬಿಜೆಪಿ ಶಾಸಕರಿಗೆ ಇಲ್ಲ. 

ಸಾಮಾನ್ಯವಾಗಿ ಆಡಳಿತ ಪಕ್ಷಗಳು ವಿರೋಧ ಪಕ್ಷಗಳನ್ನು ಎದುರು ಹಾಕಿಕೊಳ್ಳಲು ಹಿಂದೇಟು ಹಾಕುತ್ತದೆ. ನಮ್ಮ ರಾಜ್ಯದಲ್ಲಿ ವಿರೋಧಪಕ್ಷಗಳಿಗೆ ಆಡಳಿತ ಪಕ್ಷವನ್ನು ಎದುರಿಸುವ ಧೈರ್ಯವೇ ಇಲ್ಲ. ಪ್ರಧಾನಿ ನರೇಂದ್ರ ಮೋದಿಯವರಂತೆ ನಾವೇನು ವಿರೋಧಪಕ್ಷವನ್ನೇ ನಿರ್ನಾಮ ಮಾಡುವ ಬಗ್ಗೆ ಮಾತನಾಡುವುದಿಲ್ಲ. ಒಂದು ಸಮರ್ಥ ವಿರೋಧ ಪಕ್ಷ ಇರಬೇಕು ಎಂದು ಬಯಸುವವರು ನಾವು. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರು ಅನಗತ್ಯವಾದ ಧರಣಿಯನ್ನು ಕೈಬಿಟ್ಟು ಕಲಾಪದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡುತ್ತೇನೆ ಎಂದಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: Cmsiddaramaiah

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: Cmsiddaramaiah

ಬೆಂಗಳೂರು: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cmsiddaramaiah ) ನುಡಿದರು. ಗ್ಯಾರಂಟಿ ಸಮಿತಿಯಿಂದ ಶಾಸಕರ ಘನತೆಗೆ ದಕ್ಕೆಯಾಗಿದೆ ಎಂಬ ಕುರಿತು ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು.

[ccc_my_favorite_select_button post_id="104074"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
Doddaballapura: ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕ ಆತ್ಮಹತ್ಯೆ..!

Doddaballapura: ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಸುಮಾರು 15 ವರ್ಷದ ಅಪ್ರಾಪ್ತ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ ಪಿಂಡಕೂರುತಿಮ್ಮನಹಳ್ಳಿ ಹೊರವಲಯದಲ್ಲಿ ಸಂಭವಿಸಿದೆ. ಮೃತನನು ಪಿಂಡಕೂರುತಿಮ್ಮನಹಳ್ಳಿ ನಿವಾಸಿಗಳಾದ ಮಂಜಮ್ಮ, ಸುಬ್ಬರಾಯಪ್ಪ ದಂಪತಿಗಳ ಪುತ್ರ 15 ವರ್ಷ ರವಿಕುಮಾರ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು

[ccc_my_favorite_select_button post_id="104085"]

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

[ccc_my_favorite_select_button post_id="104008"]

ರೌಡಿಶೀಟರ್ ಬರ್ಬರ ಹತ್ಯೆ; ಐವರ ಬಂಧನ

[ccc_my_favorite_select_button post_id="103919"]

Suicide: ಬಸ್ ನಲ್ಲೇ ನೇಣಿಗೆ ಶರಣಾದ ಸಾರಿಗೆ

[ccc_my_favorite_select_button post_id="103856"]

ಮದುವೆ ಹಿಂದಿನ ದಿನ ವರ ಪರಾರಿ: FIR

[ccc_my_favorite_select_button post_id="103742"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!