Site icon Harithalekhani

ಮೂಲಭೂತ ಹಕ್ಕುಗಳನ್ನು ಅರ್ಥ ಮಾಡಿಕೊಂಡರೆ ಮಾನವ ಹಕ್ಕುಗಳು ಉಲ್ಲಂಘನೆ ತಡೆಗೆ ಸಹಕಾರಿ; ನ್ಯಾ.ಅರವಿಂದ ಸಾಯಿಬಣ್ಣ ಹಾಗರಗಿ

ದೊಡ್ಡಬಳ್ಳಾಪುರ, (ಡಿ.11); ನಮ್ಮ ಸಂವಿಧಾನದಲ್ಲಿನ ಮೂಲಭೂತ ಹಕ್ಕುಗಳನ್ನು ಚೆನ್ನಾಗಿ ಅರ್ಥ ಮಾಡಿಕೊಂಡರೆ ಮಾನವ ಹಕ್ಕುಗಳು ಉಲ್ಲಂಘನೆಯಾಗದಂತೆ ನಡೆದುಕೊಳ್ಳಲು ಸಹಕಾರಿಯಗಲಿದೆ ಎಂದು ನಗರದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಅರವಿಂದ ಸಾಯಿಬಣ್ಣ ಹಾಗರಗಿ ಹೇಳಿದರು.

ಅವರು ನಗರದ ಖಾಸಗಿ ಸೇವಾ ಸಂಸ್ಥೆಯಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಮತ್ತು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ, ಕಾನೂನು ಸೇವಾ ಸಮೀತಿ ವತಿಯಿಂದ ಭಾನುವಾರ ನಡೆದ ‘ಮಾನವ ಹಕ್ಕುಗಳ ದಿನಾಚರಣೆ-2023’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಯಾವುದೇ ರೀತಿಯ ಮಾನವ ಹಕ್ಕುಗಳ ಉಲ್ಲಂಘನೆಯಾದರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸುವ ಮೂಲಕ ನ್ಯಾಯಪಡೆಯಬಹುದಾಗಿದೆ.ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ನಡೆದುಕೊಳ್ಳುವ ಹಾಗೂ ನೋಡಿಕೊಳ್ಳುವ ಜವಾಬ್ದಾರಿ ಎಲ್ಲಾ ಪ್ರಜೆಗಳ ಮೇಲೂ ಇದೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ತಡೆಯಬೇಕಿದೆ ಎಂದರು.

ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಮಾತನಾಡಿ, ನಮ್ಮ ಸಂವಿಧಾನದಲ್ಲಿ ಪ್ರಜೆಗಳಿಗೆ ನೀಡಿರುವ ಎಲ್ಲಾ ರೀತಿಯ ಹಕ್ಕುಗಳ ಸಮಗ್ರತೆಯೇ ಮಾನವ ಹಕ್ಕುಗಳಾಗಿವೆ. ಯಾವುದೇ ವ್ಯಕ್ತಿಯ ಹಕ್ಕುಗಳಿಗೆ ಚುತಿಯಾಗದಂತೆ ನೋಡಿಕೊಳ್ಳಲು ತಾಲ್ಲೂಕು ಮಟ್ಟದಲ್ಲೂ ವಿವಿಧ ಇಲಾಖೆಗಳು ಇವೆ ಎಂದರು.

ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಪ್ರೇಮ್ ಕುಮಾರ್ ಮಾತನಾಡಿ, ನಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದಿದ್ದರೆ ಮಾತ್ರ ನಮ್ಮ ಅಭಿವೃದ್ಧಿ ಸಾಧ್ಯವಾಗಲಿದೆ. ಹಕ್ಕುಗಳನ್ನು ಪಡೆಯುವಷ್ಟೇ ನಮ್ಮ ಕತ್ಯವ್ಯಗಳನ್ನು ಸಮರ್ಥವಾಗಿ ನಿಭಾಯಿಸಬೇಕು. ಶಿಕ್ಷಣ ಪಡೆದರೆ ಮಾತ್ರ ಎಲ್ಲಾ ರೀತಿಯ ಹಕ್ಕುಗಳನ್ನು ಪಡೆಯಲು ಸಹಕಾರಿಯಾಗಲಿದೆ. ಅಲ್ಲದೆ ಸಮಾಜದಲ್ಲಿ ಗೌರವ, ಮನ್ನಣೆಯು ದೊರೆಯಲಿದೆ ಎಂದರು.

ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ರವಿಮಾವಿನಕುಂಟೆ ಮಾತನಾಡಿ, ಸಂವಿಧಾನವೇ ನಮ್ಮ ದೇಶದ ಶ್ರೇಷ್ಠ ಗ್ರಂಥವಾಗಿದೆ. ಕಾರ್ಯಾಂಗದ ವಿಫಲತೆಯಿಂದಾಗಿಯೇ ಸಂವಿಧಾನದ ಆಶಯದಂತೆ ಎಲ್ಲರಿಗೂ ಸಮಾನತೆ ದೊರೆಯಲು ಸಾಧ್ಯವಾಗಿಲ್ಲ ಎಂದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಕೃಷ್ಣಮೂರ್ತಿ, ತಾಲ್ಲೂಕು ಕಾನೂನು ಸೇವಾ ಸಮಿತಿ ಪ್ಯಾನಲ್ ವಕೀಲರಾದ ಡಿ.ಎಂ.ರೇಣುಕಾಮೂರ್ತಿ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ.ಅರುಣ್ ಕುಮಾರ್, ಶಿಕ್ಷಣ ಇಲಾಖೆಯ ಇಸಿಒ ಶಿವಕುಮಾರ್ ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

Exit mobile version