Site icon Harithalekhani

ಯಾರಿಗೆ ಸಿಗಲಿದೆ ಮಧ್ಯಪ್ರದೇಶ ಸಿಎಂ ಪಟ್ಟ?

ನವದೆಹಲಿ, (ಡಿ.11); 5 ರಾಜ್ಯಗಳ ಚುನಾವಣೆಯಲ್ಲಿ ಮೂರು ಕಡೆಗಳಲ್ಲಿ ಸ್ಪಷ್ಟ ಬಹುಮತ ಪಡೆದ ಬಿಜೆಪಿ ಆಯಾ ರಾಜ್ಯಗಳಲ್ಲಿ ಸಿಎಂ ನೇಮಕ ಮಾಡುವಲ್ಲಿ ತೀವ ಕಸರತ್ತು ನಡೆಸುತ್ತಿದೆ.

ಮಧ್ಯಪ್ರದೇಶದ ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಇಂದು ಸಂಜೆ 4ಕ್ಕೆ ಶಾಸಕಾಂಗ ಸಭೆ ನಡೆಯಲಿದೆ. ಈ ವೇಳೆ ಮುಖ್ಯಮಂತ್ರಿ ಹೆಸರು ಘೋಷಣೆಯಾಗಲಿದೆಯಂತೆ.

ಸದ್ಯ ಪ್ರಹ್ಲಾದ್‌ ಪಟೇಲ್, ನರೇಂದ್ರ ಸಿಂಗ್ ತೋಮರ್‌, ವಿ.ಡಿ.ಶರ್ಮ, ಜ್ಯೋತಿರಾದಿತ್ಯ ಸಿಂಧಿಯಾ, ಕೈಲಾಶ್ ವಿಜಯವರ್ಗೀಯ ಸೇರಿದಂತೆ ಹಿಂದಿನ ಸಿಎಂ ಶಿವರಾಜ್ ಸಿಂಗ್‌ ಚೌಹಾಣ್ ಅವರೂ ಸಹ ಆಕಾಂಕ್ಷಿಗಳಾಗಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

Exit mobile version