ನವದೆಹಲಿ, (ಡಿ.11); 370ನೇ ವಿಧಿಯು ಜಮ್ಮು ಮತ್ತು ಕಾಶ್ಮೀರವನ್ನು ಒಕ್ಕೂಟದೊಂದಿಗೆ ಸಾಂವಿಧಾನಿಕ ಏಕೀಕರಣಕ್ಕಾಗಿ ಉದ್ದೇಶಿಸಲಾಗಿತ್ತು. ಅದು ವಿಘಟನೆಗಾಗಿ ಅಲ್ಲ. ಆರ್ಟಿಕಲ್ 370 ಅಸ್ತಿತ್ವದಲ್ಲಿಲ್ಲ ಎಂದು ರಾಷ್ಟ್ರಪತಿಗಳು ಘೋಷಿಸಬಹುದು ಎಂದು ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ.
2024ರ ಸೆ.30ರೊಳಗೆ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಗೆ ಚುನಾವಣೆ ನಡೆಸಲು ಭಾರತದ ಚುನಾವಣಾ ಆಯೋಗವು ಕ್ರಮ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
ಇಂದು ವಿಧಿ 370 ರದ್ದತಿ ಕುರಿತು ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ಮಾಡಿ ಅಂತಿಮ ತೀರ್ಪು ನೀಡಿದೆ 5 ಜನ ನ್ಯಾಯಧೀಶರ ವಿಭಾಗೀಯ ಪೀಠ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….