ಬೆಳಗಾವಿ, (ಡಿ.15); ಚಳಿಗಾಲದ ಅಧಿವೇಶನದ ಕೊನೆಯ ದಿನವಾದ ಇಂದು ಜಿಲ್ಲೆಯಲ್ಲಿ ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ಚೆನ್ನಮ್ಮ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಪ್ರತಿಭಟನೆ. ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಚಿವ ಸುನೀಲ್ ಕುಮಾರ್ ಸೇರಿದಂತೆ ಅನೇಕ ಮುಖಂಡರು ಇದ್ದರು.
ಈ ವೇಳೆ ಮಾತನಾಡಿದ ವಿಜಯೇಂದ್ರ, ಸಿಎಂ, ಆಡಳಿತ ಪಕ್ಷ ಬೆಳಗಾವಿಯಲ್ಲಿ ಇರುವಾಗಲೇ ಇಂತಹ ಹೀನ ಕೃತ್ಯ ನಡೆದಿದೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಮುಂದೆಂದೂ ಇಂತಹ ಘಟನೆ ಮರುಕಳಿಸದಂತೆ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದರ ಜೊತೆಗೆ ನಾಳೆ(ಡಿ.16) ರಾಜ್ಯಾದ್ಯಂತ ಬೆಳಗಾವಿ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸುವುದಾಗಿ ಕರೆ ನೀಡಿದರು.
ಪ್ರಕರಣ ಸಂಬಂಧ 8 ಮಂದಿಯನ್ನು ಬಂಧಿಸಲಾಗಿದ್ದು ಇನ್ನೂ ಇಬ್ಬರು ತಲೆಮರೆಸಿಕೊಂಡಿದ್ದಾರೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಬಿಜೆಪಿ ಮುಖಂಡರು ಆರೋಪಿಸಿದರು.
ಮುಖ್ಯಮಂತ್ರಿ ಬೆಳಗಾವಿಯಲ್ಲಿ ಇದ್ದಾಗಿಯೂ ಸಂತ್ರಸ್ತ ಮಹಿಳೆಯನ್ನು ಭೇಟಿಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯದಲ್ಲಿ ಅಪರಾಧಿಗಳಲ್ಲಿ ಕಾನೂನಿನ ಭಯ ಇಲ್ಲದಂತಾಗಿದೆ ಎಂದು ಹೇಳಿದರು. ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸುವುದಾಗಿ ವಿಜಯೇಂದ್ರ ಹೇಳಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….