Site icon ಹರಿತಲೇಖನಿ

ಕರವೇ ಹೋರಾಟ; ಕಾನೂನು ಬಾಹಿರವಾಗಿ ನಡೆದುಕೊಂಡಿರುವವರ ವಿರುದ್ಧ ಕ್ರಮವೆಂದ ಸಿಎಂ

ಕೋಲಾರ, (ಡಿ.27); ರಾಜ್ಯ ಸರ್ಕಾರವು ಕೋವಿಡ್-19 ನಿರ್ವಹಣೆಗಾಗಿ ಆರೋಗ್ಯ ಸಚಿವರ ನೇತೃತ್ವದ ನಾಲ್ಕು ಸದಸ್ಯರ ಸಂಪುಟ ಉಪಸಮಿತಿಯನ್ನು ರಚಿಸಿದ್ದು, ಈ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಮಾಡಿರುವ ಶಿಫಾರಸುಗಳ ಕುರಿತು ಚರ್ಚಿಸಲು ಸಭೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಕರ್ನಾಟಕ ರಕ್ಷಣಾ ವೇದಿಕೆಯವರು ಬೆಂಗಳೂರಿನಲ್ಲಿ ಕನ್ನಡ ನಾಮಫಲಕಗಳನ್ನು ಹಾಕಬೇಕೆಂದು ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಮಾಹಿತಿ ಬಂದಿದ್ದು, ಕಾನೂನು ಬಾಹಿರವಾಗಿ ನಡೆದುಕೊಂಡಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

Exit mobile version