ಬೆಂಗಳೂರು, (ಡಿ.27); ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಅಕ್ರಮದ ಕುರಿತು ಶಾಸಕ ಯತ್ನಾಳ್ ಅವರು ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ್ ಬಂತಿ ವೆಂಕಟೇಶ್ ಹೇಳಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರದ ಅವಧಿಯ ವೇಳೆ ಕೋವಿಡ್ ಕಾರಣ ಚಿಕಿತ್ಸೆ ನೆಪದಲ್ಲಿ 40 ಸಾವಿರ ಕೋಟಿ ರೂ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ವಯಕ್ತಿಕ ವಿಚಾರದ ಹಿನ್ನಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪದೇ ಪದೇ ನಮ್ಮದೇ ಪಕ್ಷದ ವರಿಷ್ಠರಾದ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಅನವಶ್ಯಕ ಹೇಳಿಕೆಗಳನ್ನು ನೀಡಿ ಮುಜುಗರ ತರುತ್ತಾರೆ. ಈ ಕುರಿತಂತೆ ಪಕ್ಷದ ವರಿಷ್ಠರು ಸೂಕ್ತ ನಿರ್ಣಯಕೈಗೊಳ್ಳುತ್ತಾರೆ.
ಇನ್ನು ಏಕಾಏಕಿ ಎದುರಾದ ಕೋವಿಡ್ ಸಂದರ್ಭವನ್ನು ಎದುರಿಸಲು ಆಗಿನ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುನ್ನೆಚ್ಚರಿಕಾ ಕ್ರಮಕೈಗೊಂಡ ಪರಿಣಾಮ ಇತರೆ ದೇಶಗಳಲ್ಲಿ ಆದಂತೆ ಮಾರಣಹೋಮ ನಮ್ಮ ದೇಶದಲ್ಲಿ ನಡೆಯಲಿಲ್ಲ.
ಆ ಸಂದರ್ಭದಲ್ಲಿ ಕೈಗೊಂಡ ಕ್ರಮಗಳು ಮಾದರಿಯಾಗಿದೆಯೇ ಹೊರತು ಯಾವುದೇ ಅಕ್ರಮ ನಡೆದಿಲ್ಲವೆಂದು ಬಂತಿ ವೆಂಕಟೇಶ್ ಅವರು ಯತ್ನಾಳ್ ಆರೋಪವನ್ನು ತಳ್ಳಿಹಾಕಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….