Site icon ಹರಿತಲೇಖನಿ

ನೆಲಮಂಗಲದ ಬಳಿ ಖಾಸಗಿ ಬಸ್‌ಗಳ ನಡುವೆ ಸರಣಿ ಅಪಘಾತ; 30‌ಜನರಿಗೆ ಪೆಟ್ಟು..!

ನೆಲಮಂಗಲ, (ಡಿ.27): ತುಮಕೂರು – ಬೆಂಗಳೂರು ನಡುವಣ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಭೀಕರ ಅಪಘಾತ ಸಂಭವಿಸಿದೆ.

ನೆಲಮಂಗಲ ತಾಲೂಕಿನ ತೊಣಚಿನಗುಪ್ಪೆ ಬಳಿ ಭೀಕರ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಡಿಕ್ಕಿಹೊಡೆದ ಪರಿಣಾಮ ಮೂರು ಖಾಸಗಿ ಬಸ್ ಗಳ ನಡುವೆ ಸರಣಿ ಅಪಘಾತವಾಗಿದೆ.

ಸಂಪೂರ್ಣವಾಗಿ ಆವರಿಸಿರುವ ಮಂಜಿನಿಂದ ರಸ್ತೆ ಕಾಣದೆ ಅಪಘಾತ ಶಂಕೆ ವ್ಯಕ್ತವಾಗಿದ್ದು, ಬಸ್ನಲ್ಲಿದ್ದ 30 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಖಾಸಗಿ ಅಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸರಣಿ ಅಪಘಾತದಿಂದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದುರ್ಗಾಂಬಾ, ಶಿವಗಂಗಾ, ದ್ಯಾನ್ ಹೆಸರಿನ ಖಾಸಗಿ ಬಸ್ಸುಗಳು ತುಮಕೂರು ಮಾರ್ಗವಾಗಿ ಬೆಂಗಳೂರು ಬರುತ್ತಿದ್ದ ವೇಳೆ  ಅಪಘಾತ ಸಂಭವಿಸಿದೆ. ಲಾರಿಗೆ ಮೊದಲು ದ್ಯಾನ್ ಬಸ್ ಡಿಕ್ಕಿ ಹೊಡೆದಿದೆ. ದ್ಯಾನ್ ಬಸ್ ಹಿಂದೆಯೇ ದುರ್ಗಾಂಬಾ ಬಸ್ ಬರುತ್ತಿತ್ತು. ಈ ಅಪಘಾತವನ್ನು ಕಂಡ ದುರ್ಗಾಂಬಾ ಬಸ್ ಚಾಲಕ ಬಸ್ ಅನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿದ್ದರು. ಆದರೆ ಹಿಂದೆ ಬರುತ್ತಿದ್ದ ಶಿವಗಂಗಾ ಬಸ್ ಡಿಕ್ಕಿ ಹೊಡೆದಿದೆ.

ಗಾಯಗೊಂಡ ಜನರನ್ನು ಏಳು ಆಂಬ್ಯುಲೆನ್ಸ್ಗಳ ಮುಖಾಂತರ ಅಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಬಳಿಕ ಬಸ್ಗಳನ್ನು ಕ್ರೈನ್ ಬಳಸಿ ತೆರವು ಮಾಡಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

Exit mobile version