Site icon ಹರಿತಲೇಖನಿ

ಹೈಕೋರ್ಟ್ ಆದೇಶ.. ಸರ್ಕಾರಿ ನೌಕರರಿಗೆ ಶಾಕ್!

ಬೆಂಗಳೂರು, (ಡಿ.27); ಸರ್ಕಾರದ ಯಾವುದೇ ಉದ್ಯೋಗಿ ನಿರ್ದಿಷ್ಟ ಹುದ್ದೆ ಅಥವಾ ನಿರ್ದಿಷ್ಟ ಸ್ಥಳಕ್ಕೆ ನಿಯೋಜನೆ ಮಾಡುವಂತೆ ಹಕ್ಕು ಸಾಧನೆ ಮಾಡಲು ಬರುವುದಿಲ್ಲ. ನೌಕರರನ್ನು ಸೇವಾ ಪರಿಸ್ಥಿತಿ ಆಧಾರದ ಮೇಲೆ ವರ್ಗಾವಣೆ ಮಾಡಲಾಗುತ್ತದೆ. ಮೇಲಾಗಿ, ಒಂದೇ ಹುದ್ದೆ ಅಥವಾ ಸ್ಥಳದಲ್ಲಿ ಸರ್ಕಾರಿ ನೌಕರ ನಿಗದಿತ ಅವಧಿಗಿಂತ ಹೆಚ್ಚು ಕಾಲ ಕರ್ತವ್ಯ ನಿರ್ವಹಿಸಿದ್ದಲ್ಲಿ ಅಲ್ಲಿ ಆತ ಪಟ್ಟಭದ್ರ ಹಿತಾಸಕ್ತಿ ಬೆಳೆಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಹೈಕೋರ್ಟ್‌ ಅಭಿಪ್ರಾಯ ವ್ಯಕ್ತಪಡಿಸಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಸಹಾಯಕ ನಿರ್ದೇಶಕ ಹುದ್ದೆಯಿಂದ ತಮ್ಮನ್ನು ವರ್ಗಾಯಿಸಿದ ಹಾಗೂ ಆ ಹುದ್ದೆಗೆ ಮಂಗಳೂರು ನಗರ ಪಾಲಿಕೆಯಲ್ಲಿ ಸಹಾಯಕ ನಿರ್ದೇಶಕರಾಗಿದ್ದ ಎ.ಬಿ.ಗುರು ಪ್ರಸಾದ್ ಎಂಬುವವರನ್ನು ನಿಯೋಜಿಸಿದ್ದ ಸರ್ಕಾರದ ಆದೇಶ ಪ್ರಶ್ನಿಸಿ ಕೆ.ಎಂ. ಪ್ರಶಾಂತ್ ಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ಸೋಮಶೇಖರ್ ಅವರ ನೇತೃತ್ವದ ವಿಭಾಗೀಯ ಪೀಠ ಈ ಅಭಿಪ್ರಾಯಪಟ್ಟಿದೆ.

ಸರ್ಕಾರಿ ನೌಕರ ತಾನಿರುವ ಪ್ರದೇಶದಲ್ಲಿ ಯಾವುದೇ ಪಟ್ಟಭದ್ರ ಹಿತಾಸಕ್ತಿ ಬೆಳೆಸಿಕೊಳ್ಳಬಾರದು ಎಂಬ ಉದ್ದೇಶದಿಂದ ವರ್ಗಾವಣೆ ಮಾಡಲಾಗುತ್ತದೆ. ವರ್ಗಾವಣೆ ಮಾರ್ಗ ಸೂಚಿಯಲ್ಲಿ ನಿಗದಿಪಡಿಸಿರುವ ಅವಧಿಗಿಂತ ಹೆಚ್ಚುಕಾಲ ಒಂದು ಹುದ್ದೆ/ಪ್ರದೇಶದಲ್ಲಿ ಉದ್ಯೋಗಿ ಕರ್ತವ್ಯ ನಿರ್ವಹಿಸಿದರೆ, ಆತನನ್ನು ಮತ್ತೊಂದೆಡೆಗೆ ವರ್ಗಾಯಿಸಬೇಕು ಆದೇಶದಲ್ಲಿ ಕೋರ್ಟ್ ತಿಳಿಸಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

Exit mobile version