ಬೆಂಗಳೂರು, (ಡಿ.27): ಅನ್ನದಾತರ ಬಗ್ಗೆ ಎಚ್ಚರಿಕೆ ಹಾಗೂ ಗೌರವದಿಂದ ಮಾತನಾಡಬೇಕು. ಹಗುರ ಮಾತುಗಳ ಮೂಲಕ ರೈತರಿಗೆ ಅವಮಾನವಾಗುವಂತೆ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬರಗಾಲವನ್ನು ರೈತರೇ ಬಯಸುತ್ತಾರೆ ಎಂಬ ಸಚಿವ ಶಿವಾನಂದ ಪಾಟೀಲ್ ಹೇಳಿಕೆ ಹಿನ್ನೆಲೆಯಲ್ಲಿ ಪ್ರಕಟಣೆ ನೀಡಿರುವ ಸಿದ್ದರಾಮಯ್ಯ ಅವರು, ಸಚಿವರು ಆಡಿರುವ ಮಾತುಗಳನ್ನು ಸಮಸ್ತ ರೈತ ಸಮುದಾಯಕ್ಕೆ ಅನ್ವಯ ಮಾಡುವಾಗ ವಿಪರೀತ ಅರ್ಥಕ್ಕೆ ಕಾರಣವಾಗುತ್ತದೆ, ಇದು ಸಲ್ಲದು ಎಂದಿದ್ದಾರೆ.
ಜತೆಗೆ, ರೈತರ ಕುರಿತು ಕೃಷಿ ಸಚಿವ ಶಿವಾನಂದ ಪಾಟೀಲ್ ಅವರು ಆಡಿರುವ ಮಾತು ರೈತರನ್ನು ಅವಮಾನಿಸಬೇಕೆಂಬ ದುರುದ್ದೇಶದಿಂದ ಖಂಡಿತ ಇಲ್ಲ, ಜೊತೆಗಿದ್ದ ರೈತರೊಂದಿಗೆ ಇರುವ ಸಲುಗೆಯಿಂದ ಕೆಲವು ಮಾತುಗಳನ್ನು ಆಡಿದ್ದಾರೆ ಎಂದೂ ಹೇಳಿದ್ದಾರೆ.
ಇದೇ ವೇಳೆ ಶಿವಾನಂದ ಪಾಟೀಲ್ ಹೇಳಿಕೆಯನ್ನು ತೀವ್ರವಾಗಿ ಟೀಕಿಸುತ್ತಿರುವ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ರೈತರ ಕಲ್ಯಾಣಕ್ಕೆ ಕಿಂಚಿತ್ತೂ ಕೆಲಸ ಮಾಡದ, ಮೂಲತಃ ರೈತ ವಿರೋಧಿಯಾಗಿರುವ ಬಿಜೆಪಿ ನಾಯಕರು ಶಿವಾನಂದ ಪಾಟೀಲ್ ಅವರ ಮಾತುಗಳನ್ನು ವಿವಾದವನ್ನಾಗಿ ಮಾಡಿದ್ದಾರೆ.
ಗೊಬ್ಬರ ಕೊಡಿ ಎಂದು ಕೇಳಿದ ರೈತರನ್ನು ಗುಂಡಿಕ್ಕಿ ಸಾಯಿಸಿದ, ರೈತರ ಸಾಲ ಮನ್ನಾ ಮಾಡಿ ಎಂದು ಕೇಳಿದರೆ ನೋಟ್ ಪ್ರಿಂಟಿಂಗ್ ಮಷಿನ್ ಇದೆಯೇ ಎಂದು ಕೇಳಿದ ಬಿಜೆಪಿಗರಿಗೆ ಕಾಂಗ್ರೆಸ್ ವಿರುದ್ಧ ಮಾತನಾಡುವ ಯಾವ ನೈತಿಕತೆ ಇದೆ ಎಂದಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….