Site icon ಹರಿತಲೇಖನಿ

ಕಾಂಗ್ರೆಸ್ ನವರಿಗೆ ಬದ್ದತೆ ಇದ್ದರೆ, ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಮಾಡಲಿ: ಬಸವರಾಜ ಬೊಮ್ಮಾಯಿ ಸವಾಲು

ಬೆಂಗಳೂರು, (ಜ.19): ಕಾಂಗ್ರೆಸ್ ನವರು 2013 ರಿಂದ ನ್ಯಾ. ಸದಾಶಿವ ಆಯೊಗದ ವರದಿಯನ್ನು ಜಾರಿ ಮಾಡುತ್ತೇವೆ ಎಂದು ಹೇಳುತ್ತ ಬಂದಿದ್ದಾರೆ. ಇವರಿಗೆ ಬದ್ದತೆ ಇದ್ದರೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲೆಸೆದಿದ್ದಾರೆ.

ಬೆಂಗಳೂರಿನ ಉತ್ತರಾದಿ ಮಠದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಡಾ.ಜಯಶ್ರೀ ಅರವಿಂದ ಅವರು ಸಂಗೀತ ಸಂಯೋಜನೆ ಮಾಡಿರುವ ಶ್ರೀರಾಮನ ಕುರಿತ ಗೀತೆಗಳ ಧ್ವನಿ ಸುರಳಿಯನ್ನು ಬಿಡುಗಡೆ ಮಾಡಿ ನಂತರ ಮಾಧ್ಯಮಗಳೊಂದಿಗೆ ನಂತರ ಮಾತನಾಡಿದರು.

ಸದಾಶಿವ ಆಯೋಗದ ವರದಿ ಜಾರಿ ಮಾಡುವ ವಿಚಾರದಲ್ಲಿ ಮೊದಲಿನಿಂದಲೂ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ.  ಸಂವಿಧಾನ ತಿದ್ದುಪಡಿ ಮಾಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವುದಾಗಿ ಹೇಳುತ್ತಾರೆ. ಇನ್ನೊಂದೆಡೆ ಸದಾಶಿವ ಆಯೋಗದ ವರದಿಯನ್ನು ತಾವೇ ಜಾರಿ ಮಾಡುವುದಾಗಿ ಹೇಳುತ್ತಾರೆ. ಇವರಿಗೆ ಬದ್ದತೆ ಇದ್ದರೆ. ಸದಾಶಿವ ಆಯೋಗದ ವರದಿ ಜಾರಿ ಮಾಡಿ, ಒಳಮೀಸಲಾತಿ ಆಧಾರದಲ್ಲಿ ನೇಮಕಾತಿ ಹಾಗೂ ಭಡ್ತಿ ನೀಡಲಿ ಎಂದು ಆಗ್ರಹಿಸಿದರು. 

ಕೇಂದ್ರದಿಂದ ಅನುದಾನದ ಬರುತ್ತಿಲ್ಲ ಎಂದು ಆರೋಪಿಸಿರುವ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಕೇಂದ್ರದಿಂದ ಅನುದಾನ ಕುರಿತು ರಾಜ್ಯದ ವಿಚಾರಗಳಿಗೆ ಕಾಂಗ್ರೆಸ್ ತಿರುಚುವ ಕೆಲಸ ಮಾಡುತ್ತಿದೆ. ಅವರು ಬಹಿರಂಗ ಚರ್ಚೆಗೆ ಪ್ರಧಾನಿಗೆ ಆಹ್ವಾನ ಕೊಟ್ಟಿರುವುದಕ್ಕೆ ನಾವು ಉತ್ತರ ಕೊಟ್ಟಿದ್ದೇವೆ.

ಮೊದಿಯವರು ಬಹಳ ದೊಡ್ಡ ಕೆಲಸ ಮಾಡಿದ್ದಾರೆ. 14 ನೇ ಹಣಕಾಸಿಗಿಂತ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ರಾಜ್ಯಕ್ಕೆ 1 ಲಕ್ಷ ಕೊಟಿ ರೂ. ಹೆಚ್ಚಿಗೆ ಬಂದಿದೆ. ಕೇವಲ ಆಯುಷ್ಮಾನ್ ಭಾರತ ಯೊಜನೆ ಅಡಿಯಲ್ಲಿ 62 ಲಕ್ಷ ಜನರಿಗೆ ಪ್ರಯೋಜನವಾಗಿದೆ. ಕಾಂಗ್ರೆಸ್  ಅವಧಿಯಲ್ಲಿ ಆ ಯೋಜನೆಯನ್ನು ಅಳವಡಿಸಿಕೊಳ್ಳಲು ಹಿಂದೇಟು ಹಾಕಿದ್ದರು. ನಂತರ ಯೋಜನೆ ಒಳ್ಳೆಯದಿದೆ ಅಂತ ಒಪ್ಪಿಕೊಂಡರು. 

ಇವರು ಮೊದಲು ಕೇಂದ್ರದ ಯೋಜನೆಗಳಿಗೆ ರಾಜ್ಯದ ಪಾಲು ಬಿಡುಗಡೆ ಮಾಡಬೇಕು. ಕೆಲವು ಯೋಜನೆಗಳು ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಹೀಗಾಗಿ ಇವರು ರಾಜ್ಯಕ್ಕೆ ಕಡಿಮೆ ಅನುದಾನ ಬರುತ್ತಿದೆ ಎಂದು ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

Exit mobile version