Site icon ಹರಿತಲೇಖನಿ

ದೇವನಹಳ್ಳಿಗೆ ಇಂದು ಪ್ರಧಾನಿ ಮೋದಿ: ಬೋಯಿಂಗ್ ಕೇಂದ್ರ ಉದ್ಘಾಟನೆ

ಬೆಂ.ಗ್ರಾ.ಜಿಲ್ಲೆ, (ಜ.19): ಪ್ರಧಾನಿ ಮೋದಿ ಶುಕ್ರವಾರ ರಾಜ್ಯಕ್ಕೆ ಆಗಮಿಸುತ್ತಿದ್ದು, ದೇವನಹಳ್ಳಿ ಬಳಿಯ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್‌ ಮತ್ತು ತಂತ್ರಜ್ಞಾನ ಕೇಂದ್ರದ (ಬಿಐಇಟಿಸಿ) ಉದ್ಘಾಟನೆ ಹಾಗೂ ವಿಮಾನಯಾನ ಕ್ಷೇತ್ರದಲ್ಲಿ ಮಹಿಳೆಯರಿಗೆ ಉತ್ತೇಜನ ನೀಡುವ ‘ಬೋಯಿಂಗ್ ಸುಕನ್ಯಾ’ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. 

ಬೆಳಗ್ಗೆ 9.35ಕ್ಕೆ ದೆಹಲಿಯಿಂದ ಕಲಬುರಗಿ ಏರ್ಪೋಟ್‌ಗೆ ಆಗಮಿಸುವ ಮೋದಿ ಅವರು, ಹೆಲಿಕಾಪ್ಟ‌ರ್ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ತೆರಳಲಿದ್ದಾರೆ. 

ಅಲ್ಲಿಂದ ವಾಪಸಾಗಿ ಮಧ್ಯಾಹ್ನ 1ಕ್ಕೆ ವಿಶೇಷ ವಿಮಾನ ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ. ಮಧ್ಯಾಹ್ನ 2.10ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ದೇವನಹಳಿಯ ಭಟ್ಟರಮಾರನಹಳ್ಳಿಗೆ ತೆರಳಿ ಅಲ್ಲಿ ಬಿಐಇಟಿಸಿ ಉದ್ಘಾಟನೆ ಮಾಡಲಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

Exit mobile version