ಆನೇಕಲ್, (ಜ.18); ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು 20 ಜನ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಸಂಭವಿಸಿದೆ.
ಗಾಯಾಳು ಕಾರ್ಮಿಕರನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ. ಕಟ್ಟಡದ ಅವಶೇಷಗಳಡಿ ಇನ್ನೂ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ಇದೆ.
ಎರಡನೇ ಅಂತಸ್ತಿನ ನಿರ್ಮಾಣದ ವೇಳೆ ಕಟ್ಟಡ ಕುಸಿದಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….