ಚಿತ್ರದುರ್ಗ, (ಜ.28): ಭಾರತ ದೇಶದ ಧ್ವಜ ಹಾರಿಸುವುದು ಬಿಟ್ಟು ಭಾಗವಧ್ವಜ ಹಾರಿಸಿದ್ದು ಸರಿಯಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಧ್ವಜ ಕಿತ್ತುಹಾಕಿರುವುದಕ್ಕೆ ವಿರೋಧಪಕ್ಷದ ನಾಯಕ ಆರ್.ಅಶೋಕ್ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿ ನಮ್ಮ ದೇಶದ ಬಾವುಟ ಹಾರಿಸಬೇಕು ಎಂದರು.
ಶ್ಯಾಮನೂರು ಶಿವಶಂಕರಪ್ಪನವರು ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ ಅವರೇ ಗೆಲ್ಲಲಿ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ನನಗೆ ಗೊತ್ತಿಲ್ಲ, ಅವರೊಂದಿಗೆ ಮಾತನಾಡುತ್ತೇನೆ ಎಂದರು.
ಲೋಕಸಭಾ ಚುನಾವಣೆಯಲ್ಲಿ 15- 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ: ಲೋಕಸಭಾ ಚುನಾವಣೆಯಲ್ಲಿ 15- 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದರು. ಬಿಜೆಪಿಯವರಂತೆ 28 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಸುಳ್ಳು ಹೇಳುವುದಿಲ್ಲ ಎಂದರು. ಚುನಾವಣಾ ಸಮೀಕ್ಷೆಯನ್ನು ಮಾಡಿಸಿರುವುದಾಗಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸಚಿವ ಸಂಪುಟದಲ್ಲಿ ಚರ್ಚೆ; ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಜಾರಿ ಮಾಡುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸುವುದಾಗಿ ಹೇಳಿದರು.
ವರಿಷ್ಠರು ತೀರ್ಮಾನಿಸುತ್ತಾರೆ: ಇಂಡಿಯಾ ಒಕ್ಕೂಟದಿಂದ ಹಲವು ಪಕ್ಷಗಳು ಬಿಟ್ಟು ಹೋಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮಲ್ಲಿಕಾರ್ಜುನ ಖರ್ಗೆ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಯವರು ಈ ಬಗ್ಗೆ ನಿರ್ಧಾರ ಮಾಡುತ್ತಾರೆ ಎಂದರು. ನಾನು ಈ ಬಗ್ಗೆ ಮಾತನಾಡುವುದಿಲ್ಲ ಎಂದರು.
ಜಾತಿವಾರು ಜನಗಣತಿ ವರದಿಯನ್ನು ಸಲ್ಲಿಸಿದರೆ ವರದಿಯನ್ನು ಸ್ವೀಕಾರ ಮಾಡುವುದಾಗಿ ತಿಳಿಸಿದರು. ವರದಿಯಲ್ಲಿ ಏನಿದೆ ಎಂದು ಸಲ್ಲಿಕೆಯಾದ ಮೇಲೆ ಚರ್ಚೆ ಮಾಡುವುದಾಗಿ ತಿಳಿಸಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….