ದೊಡ್ಡಬಳ್ಳಾಪುರ, (ಫೆ.08): ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ನಾಳೆ ನಗರದ ಒಕ್ಕಲಿಗರ ಸಮುದಾಯ ಭವನದ ಸಮೀಪವಿರುವ JDS ಕಚೇರಿಯಲ್ಲಿ ಸಭೆ ಆಯೋಜಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ ತಿಳಿಸಿದ್ದಾರೆ.
ಈ ಕುರಿತಂತೆ ಹರಿತಲೇಖನಿಗೆ ಮಾಹಿತಿ ನೀಡಿದ ಅವರು, ಎನ್ ಡಿಎ ಮೈತ್ರಿಕೂಟದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಎ.ಪಿ.ರಂಗನಾಥ್ ಅವರು ಕಣಕ್ಕೆ ಇಳಿದಿದ್ದು, ಈಗಾಗಲೇ ಜೆಡಿಎಸ್ ಪಕ್ಷದಿಂದ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ.
ಈ ನಿಟ್ಟಿನಲ್ಲಿ ನಾಳೆ ಬೆಳಗ್ಗೆ 11ಗಂಟೆಗೆ ಸಭೆ ನಡೆಯಲಿದ್ದು, ಚಿಕ್ಕಬಳ್ಳಾಪುರ ಕ್ಷೇತ್ರ ಸಹ ಉಸ್ತುವಾರಿ ಇ.ಕೃಷ್ಣಪ್ಪ, ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ರಾಜ್ಯ ಕಾರ್ಯದರ್ಶಿ ಡಾ.ವಿಜಯಕುಮಾರ್, ಉಸ್ತುವಾರಿಗಳಾದ ಹರೀಶ್ ಗೌಡ, ಅಪ್ಪಯಣ್ಣ, ಅಂಜನೇಗೌಡ, ಲಕ್ಷ್ಮೀಪತಿ, ಹಿರಿಯ ಮುಖಂಡರಾದ ನರಸಿಂಹಯ್ಯ ಸೇರಿದಂತೆ ತಾಲೂಕಿನ ಎಲ್ಲಾ ಮುಖಂಡರು, ಹೋಬಳಿ ಮಟ್ಟದ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆಂದು ಮುನೇಗೌಡ ಅವರು ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….