ದೊಡ್ಡಬಳ್ಳಾಪುರ, (ಫೆ.08); ಪರೀಕ್ಷೆಯಲ್ಲಿ ಹಿನ್ನಡೆಯಾದ ಕಾರಣ, ಪ್ರಖ್ಯಾತ ಕಾಲೇಜಿನ ವಿದ್ಯಾರ್ಥಿ ರೈಲಿನ ಸಿಲುಕಿ ಸಾವನಪ್ಪಿರುವ ಘಟನೆ ರೈಲ್ವೆ ಸ್ಟೇಷನ್ ಸಮೀಪದ ಖಾಸಗಿ ಸಿಮೆಂಟ್ ಕಾರ್ಖಾನೆ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಮೃತ ಯುವಕನನ್ನು ಅನಂತಪುರ ಜಿಲ್ಲೆಯ ಕೊತ್ತಚೆರುವು ಗ್ರಾಮದ ಮಣಿದೀಪ್ (19 ವರ್ಷ) ಎಂದು ಗುರುತಿಸಲಾಗಿದೆ.
ಈತ ನಗರದ ಹೊರವಲಯದಲ್ಲಿರುವ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದು, ಪರೀಕ್ಷೆಯಲ್ಲಿ ಹಿನ್ನಡೆಯಾದ ಕಾರಣ ಬೇಸತ್ತು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ.
ಈ ಕುರಿತಂತೆ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….