Site icon ಹರಿತಲೇಖನಿ

ಪುಷ್ಪ ಸಿನಿಮಾ ಸ್ಟೈಲಲ್ಲಿ ರಕ್ತಚಂದನ ಸಾಗಿಸುತಿದ್ದ ಗ್ಯಾಂಗ್ ಸೆರೆ

ಚಿಕ್ಕಬಳ್ಳಾಪುರ, (ಫೆ.08): ನಟ ಅಲ್ಲು ಅರ್ಜುನ್ ನಟನೆಯ ಪುಷ್ಪ ಸಿನಿಮಾ ಸ್ಟೈಲಲ್ಲಿ ರಕ್ತಚಂದನ ಸಾಗಿಸುತಿದ್ದ ಗ್ಯಾಂಗ್ ಅನ್ನು​  ಜಿಲ್ಲೆಯ ಚಿಂತಾಮಣಿ ತಾಲೂಕಿನ ಹಿರೇಕಟ್ಟಿಗೇನಹಳ್ಳಿ ಬಳಿ ಸೆರೆಹಿಡಿದಿದ್ದಾರೆ. ಬೋಲೆರೊ ಪಿಕಪ್ ಗೂಡ್ಸ್ ವಾಹನದಲ್ಲಿ ಸೀಮೆ ಹಸುವಿನೊಂದಿಗೆ ಹುಲ್ಲು ಮುಚ್ಚಿ ರಕ್ತ ಚಂದನ ಸಾಗಿಸುತಿದ್ದಾಗ ಖದೀಮರು ಸಿಕ್ಕಿಬಿದ್ದಿದ್ದಾರೆ. 

ಪೊಲೀಸರು ಎರಡು ಕಿ.ಮೀ ಬೆನ್ನಟ್ಟಿ ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ ಬೋಲೆರೊ ಪಿಕಪ್ ಗೂಡ್ಸ್ ವಾಹನ, ಸೀಮೆ ಹಸು ಮತ್ತು ಲಕ್ಷಾಂತರ ರೂಪಾಯಿ ಮೌಲ್ಯದ ರಕ್ತಚಂದನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಗಳು ಬೋಲೆರೊ ಪಿಕಪ್ ಗೂಡ್ಸ್ ವಾಹನದಲ್ಲಿ  ಆಂಧ್ರದಿಂದ ಬೆಂಗಳೂರಿಗೆ ರಕ್ತಚಂದನ ಸಾಗಿಸುತ್ತಿದ್ದರು. ಲಕ್ಷಾಂತರ ರೂಪಾಯಿ ಬೆಲೆ ಬಾಳುವ ರಕ್ತ ಚಂದನವನ್ನು ವಾಹನದಲ್ಲಿ ಸಾಗಿಸುತ್ತಿರುವ ಮಾಹಿತಿ ಆಧಾರದ ಮೇಲೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ದಾಳಿ ಮಾಡಿದ್ದಾರೆ.

ಇನ್ನು ಪೊಲೀಸರನ್ನು ನೋಡುತ್ತಿದ್ದಂತೆಯೇ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದಾರೆ. ಆದರೆ ಪೊಲೀಸರು ಎರಡು ಕಿಲೋಮೀಟರ್ವರೆಗೂ ಸಿನಿಮೀಯ ರೀತಿ ಚೇಸ್​ ಮಾಡಿ ಆರೋಪಿಗಳನ್ನು ಹಿಡಿದಿದ್ದಾರೆ. ಇಬ್ಬರು ಕಳ್ಳರನ್ನು ಬಂಧಿಸಲಾಗಿದ್ದು.

ಸುಮಾರು 392 ಕೆಜಿ ರಕ್ತ ಚಂದನದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನುಳಿದ ಕಳ್ಳರ ಬಂಧನಕ್ಕೆ ಪೊಲೀಸರು ಗ್ರಾಮಸ್ಥರ ಸಹಕಾರದಿಂದ ಕಾರ್ಯಾಚರಣೆ ನಡೆಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

Exit mobile version