ಮಂಗಳೂರು, (ಫೆ.17); ಕಂಬಳ ಕೇವಲ ಕ್ರೀಡೆಯಾಗಿ ಮಾತ್ರ ಇರದೇ, ತುಳುನಾಡಿನ ಕೃಷಿ ಬದುಕು ಮತ್ತು ಐತಿಹಾಸಿಕ ಪರಂಪರೆಯ ಹಿನ್ನೆಲೆಯನ್ನು ಹೊಂದಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟರು.
ಮಂಗಳೂರಿನ ವಾಮಂಜೂರಿನಲ್ಲಿ ತಿರುವೈಲುಗುತ್ತು ಸಂಕುಪೂಂಜ-ದೇವುಪೂಂಜ ಜೋಡುಕರೆ ಕಂಬಳ ಟ್ರಸ್ಟ್ ವತಿಯಿಂದ ಇಂದು ಹಮ್ಮಿಕೊಂಡಿದ್ದ 12ನೇ ವರ್ಷದ ತಿರುವೈಲೋತ್ಸವ ಹಾಗೂ ಜೋಡುಕರೆ ಕಂಬಳ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕಂಬಳ ಕೇವಲ ಕ್ರೀಡೆಯಾಗಿ ಮಾತ್ರ ಇರದೇ, ತುಳುನಾಡಿನ ಕೃಷಿ ಬದುಕು ಮತ್ತು ಐತಿಹಾಸಿಕ ಪರಂಪರೆಯ ಹಿನ್ನೆಲೆಯನ್ನು ಹೊಂದಿದೆ. ಸರ್ವ ಜನಾಂಗದ ಶಾಂತಿಯ ತೋಟದಂತಿರುವ ತುಳುನಾಡು ಕರ್ನಾಟಕದ ಹೆಗ್ಗಳಿಕೆ. ಇಂದು ಕಂಬಳ ಕ್ರೀಡೆಯಲ್ಲಿ ಭಾಗವಹಿಸುವ ಎಲ್ಲರಿಗೂ ಶುಭ ಕೋರುತ್ತಾ, ನಮ್ಮ ಸರ್ಕಾರ ಕಂಬಳಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಲು ಬದ್ಧವಾಗಿದೆ ಎಂದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….