ಗ್ಯಾರಂಟಿ ಪಡೆಯುವ ಫಲಾನುಭವಿಗಳನ್ನು ಅವಮಾನಿಸಬೇಡಿ. ಅವು ನಾಡಿನ ಜನತೆಯ ಹಕ್ಕು; ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು, (ಫೆ 17): ನಿಮ್ಮನ್ನು ಮಂಗಳೂರು, ಉಡುಪಿ ಜನ ಯಾಕೆ ಗೆಲ್ಲಿಸಬೇಕು ಕಟೀಲ್ ಅವರೇ, ಕರಂದ್ಲಾಜೆ ಅವರೇ, ಬನ್ನಿ ಜಿಲ್ಲೆಯ ಸ್ವಾಭಿಮಾನಿ ಜನತೆಗೆ ಉತ್ತರ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. 

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಳಿನ್ ಕುಮಾರ್ ಕಟೀಲ್ ಅವರೇ ಒಂದೇ ಒಂದು ದಿನ ರಾಜ್ಯದ ಪರವಾಗಿ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿದಿಯೇನಪ್ಪಾ? ತಾಯಿ ಶೋಭಾ ಕರಂದ್ಲಾಜೆ ನೀನಾದ್ರೂ ರಾಜ್ಯದ ಪರವಾಗಿ ಒಂದೇ ಒಂದು ಮಾತಾಡಿದ್ದೀಯೇನಮ್ಮಾ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ನಿಮ್ಮನ್ನು ಮಂಗಳೂರು, ಉಡುಪಿ ಜಿಲ್ಲೆಯ ಸ್ವಾಭಿಮಾನಿ ಜನತೆ ಏಕೆ ಗೆಲ್ಲಿಸಬೇಕು ಎಂದು ಕೇಳಿದರು. 

ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ. ಮೋದಿಯವರು ಇದುವರೆಗೂ ಹೇಳಿದ್ದರಲ್ಲಿ ಯಾವುದನ್ನಾದರೂ ಈಡೇರಿಸಿದ್ದಾರಾ? ಜನರ ಬದುಕಿಗೆ ನೆರವಾಗು, ದೇಶದ ಮಕ್ಕಳು-ಯುವಜನರ ಬದುಕು-ಭವಿಷ್ಯಕ್ಕೆ ಅನುಕೂಲ ಆಗುವ ಒಂದೇ ಒಂದನ್ನಾದರೂ ಈಡೇರಿಸಿದ್ದಾರಾ? ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಜನಸ್ತೋಮದ ಎದುರು ಪ್ರಶ್ನಿಸಿದರು. 

ದಕ್ಷಿಣಕನ್ನಡದ ಜನತೆಗೆ ರಾಜಕೀಯ ಪ್ರಜ್ಞಾವಂತಿಕೆ ಹೆಚ್ಚಾಗಿದೆ. ಸತ್ಯ ಹೇಳುವವರು ಮತ್ತು ಸುಳ್ಳು ಹೇಳುವವರು ಯಾರು ಎನ್ನುವುದನ್ನು ಅರ್ಥ ಮಾಡಿಕೊಳ್ಳುವ ಪ್ರಜ್ಞಾವಂತಿಕೆಯೂ ಇದೆ. ಈ ಕಾರಣಕ್ಕೆ ಮಂಗಳೂರಿನಲ್ಲೇ ಮೊದಲ ಸಭೆ ಮಾಡುವ ಮೂಲಕ ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸಿದ್ದೇವೆ ಎಂದರು.‌

ಜಾತಿ-ಜಾತಿಗಳ ಮಧ್ಯೆ, ಧರ್ಮ-ಧರ್ಮಗಳ ಮಧ್ಯೆ ಕಿತ್ತಾಟ, ಜಗಳ ತಂದಿಟ್ಟಿರುವುದು ಬಿಟ್ಟರೆ ಜನ ಸಾಮಾನ್ಯರ ಬದುಕಿಗೆ ಅನುಕೂಲ ಆಗುವ ಒಂದೇ ಒಂದು ಕಾರ್ಯಕ್ರಮವನ್ನು ಕಳೆದ ಹತ್ತು ವರ್ಷಗಳಲ್ಲಿ ಜಾರಿ ಆಗಿದೆಯಾ? ಡೀಸೆಲ್-ಪೆಟ್ರೋಲ್ ಬೆಲೆ ಕಡಿಮೆ ಆಯ್ತಾ? ಅಡುಗೆ ಗ್ಯಾಸ್ ಬೆಲೆ ಕಡಿಮೆ ಆಗಿದೆಯಾ? ಕಪ್ಪು ಹಣ ವಾಪಾಸ್ ಬಂದಿದೆಯಾ? ಅಚ್ಛೆ ದಿನ್ ಯಾರಿಗಾದರೂ ಬಂದಿದೆಯಾ?  ಹೇಳಿ ಎಂದು ನೆರೆದಿದ್ದ ಜನಸ್ತೋಮಕ್ಕೆ ಮುಖ್ಯಮಂತ್ರಿಗಳು ಕೇಳಿದರು. ಜನರು ಇಲ್ಲ, ಇಲ್ಲ, ಏನಿಲ್ಲ ಎಂದು ಕೂಗಿದರು. 

2013-18 ರ ವರೆಗೂ ನಾವು ಕೊಟ್ಟ ಭರವಸೆಗಳಲ್ಲಿ ಶೇ98 ರಷ್ಟನ್ನು ಈಡೇರಿಸಿದೆವು. ಈ ಬಾರಿ ಚುನಾವಣೆ ವೇಳೆ 5 ಗ್ಯಾರಂಟಿಗಳ ಜತೆಗೆ ಹಲವು ಭರವಸೆ ನೀಡಿದ್ದೆವು. ಕೇವಲ 8 ತಿಂಗಳಲ್ಲಿ ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನೂ ಜಾರಿ ಮಾಡಿ ಇಡೀ ದೇಶಕ್ಕೆ ಕರ್ನಾಟಕ ಮಾದರಿ ಅಭಿವೃದ್ಧಿಯನ್ನು ಕೊಟ್ಟಿದ್ದೇವೆ. ನಾವು ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ನಾವು ಕೊಟ್ಟ ಭರವಸೆಗಳನ್ನು ಈಡೇರಿಸಲು ಶುರು ಮಾಡಿದೆವು. 

ನಮ್ಮ ಮೊದಲ ಗ್ಯಾರಂಟಿ ಶಕ್ತಿ ಯೋಜನೆಯಿಂದ 155 ಕೋಟಿ ಮಹಿಳೆಯರು ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಿದರು. ಬಿಜೆಪಿ ತನ್ನ ಇತಿಹಾಸದಲ್ಲಾಗಲೀ, ವರ್ತಮಾನದಲ್ಲಾಗಲೀ ಇಷ್ಟೊಂದು ಜನೋಪಯೋಗಿ ಕೆಲಸ ಮಾಡಿದ್ದರೆ ಒಂದೇ ಒಂದು ಉದಾಹರಣೆ ಕೊಡಿ ಎಂದು ಮುಖ್ಯಮಂತ್ರಿಗಳು ಜನರಿಗೆ ಕೇಳಿದರು. ಜನರು ಇಲ್ಲಾ ಇಲ್ಲಾ ಏನಿಲ್ಲ, ಯಾವುದೂ ಇಲ್ಲ ಎಂದು ಕೂಗಿದರು. 

ಅದೇ ರೀತಿ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗಳಲ್ಲೂ ಕೋಟಿ ಕೋಟಿ ಮಹಿಳೆಯರು ಗ್ಯಾರಂಟಿಗಳ ಲಾಭವನ್ನು ಪ್ರತೀ ತಿಂಗಳು ಪಡೆಯುತ್ತಿದ್ದಾರೆ. ನಿಮಗೆಲ್ಲಾ ಈ ಯೋಜನೆಯ ಅನುಕೂಲ ಸಿಗುತ್ತಿದೆಯಾ ಎಂದು ಮುಖ್ಯಮಂತ್ರಿಗಳು ಕೇಳಿದ್ದಕ್ಕೆ ಸಿಗುತ್ತಿದೆ , ಸಿಗುತ್ತಿದೆ ಎಂದು ಕೂಗಿ ಮುಖ್ಯಮಂತ್ರಿಗಳಿಗೆ, ಸರ್ಕಾರಕ್ಕೆ ಜಯಕಾರ ಹಾಕಿದರು. 

ಬಡವರು, ಮಧ್ಯಮ ವರ್ಗದವರಿಗೆ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿ ಮಾಡಿದ ಬಳಿಕವೂ ರಾಜ್ಯದ ಆರ್ಥಿಕತೆಯನ್ನು ಸದೃಡವಾಗಿ ಪ್ರಗತಿ ಪಥದಲ್ಲಿ ಮುನ್ನಡೆಸುತ್ತಿದ್ದೇವೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು. 

ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗಿಬಿಡುತ್ತದೆ ಎಂದಿದ್ದ ಮೋದಿಯವರೇ ಈಗ ನಮ್ಮ ಗ್ಯಾರಂಟಿಯನ್ನು ಕದ್ದು ಈಗ “ಮೋದಿ ಗ್ಯಾರಂಟಿ-ಮೋದಿ ಗ್ಯಾರಂಟಿ” ಎಂದು ಭಜನೆ ಆರಂಭಿಸಿದ್ದಾರೆ ಎಂದು ಸಿಎಂ ವ್ಯಂಗ್ಯವಾಡಿದರು. 

ನಮ್ಮ ಗ್ಯಾರಂಟಿ ಪಡೆಯುವ ಫಲಾನುಭವಿಗಳನ್ನು ಅವಮಾನಿಸಬೇಡಿ ಎಂದರು. 

AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ನಮ್ಮ ರಾಜ್ಯಕ್ಕೆ ದುಡ್ಡು ಎಷ್ಟು ಬರಬೇಕು ಅದು ಬರುತ್ತಿಲ್ಲ. ನಮ್ಮ‌ ಪಾಲಿನ ಹಣ ಸಿಗುತ್ತಿಲ್ಲ. ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದರೆ ನಮ್ಮ ಮೊದಲ ಗ್ಯಾರಂಟಿ ಎಂಎಸ್‌ಪಿ ಖಾತರಿ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ  ಕಾನೂನು ಜಾರಿಗೆ ತರುತ್ತೇವೆ. ಮುಂದೆಯೂ ಬಿಜೆಪಿ(BJP) ಅಧಿಕಾರಕ್ಕೆ ಬಂದ್ರೆ ದೇಶದಲ್ಲಿ ಚುನಾವಣೆಯೇ ನಡೆಯಲ್ಲ. ಸರ್ವಾಧಿಕಾರ ಬರುತ್ತೆ. ಮೋದಿಯನ್ನು‌ ಶಕ್ತಿಶಾಲಿಯಾಗಿ ಮಾಡಬೇಡಿ ಎಂದರು.

KPCC ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, AICC ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್, ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಸಚಿವರುಗಳಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ,  ಕೆ.ವೆಂಕಟೇಶ್, ನಾಗೇಂದ್ರ, ಬೈರತಿ ಸುರೇಶ್, ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಮುಖ್ಯಮಂತ್ರಿ ವೀರಪ್ಪಮೋಯ್ಲಿ, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಮೋಟಮ್ಮ, ಆರ್.ವಿ.ದೇಶಪಾಂಡೆ, ಕಿಮ್ಮನೆ ರತ್ನಾಕರ್, ರಮಾನಾಥ ರೈ,  ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್  ಬಂಡಾರಿ, ಕೆಪಿಸಿಸಿ ಸಂವಹನ ವಿಭಾಗದ ಲಾವಣ್ಯ ಬಲ್ಲಾಳ್  ಸೇರಿ ಹಲವು ಮುಖಂಡರು ವೇದಿಕೆಯಲ್ಲಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುರಿತು ಸಿಟಿ ರವಿ ಅಶ್ಲೀಲ ಹೇಳಿಕೆ: ಮಹಿಳಾ ಕಾಂಗ್ರೆಸ್ ಪ್ರತಿಭಟನೆ| CT Ravi

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುರಿತು ಸಿಟಿ ರವಿ ಅಶ್ಲೀಲ ಹೇಳಿಕೆ: ಮಹಿಳಾ ಕಾಂಗ್ರೆಸ್

ಬಿಜೆಪಿ ನಾಯಕರು ಬಾಯಿ ಬಿಟ್ಟರೆ ಸಾಕು, ಅವರ ಸಂಸ್ಕೃತಿ ತಿಳಿಯುತ್ತದೆ. CT Ravi

[ccc_my_favorite_select_button post_id="99100"]
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮನೆ ನಿರ್ಮಾಣ..!| House construction

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮನೆ ನಿರ್ಮಾಣ..!| House construction

ವಾಸಿಸಲು ಮನೆ ಇಲ್ಲದ ಕಾರಣ ಧರ್ಮಸ್ಥಳದಿಂದ ಮನೆ ನಿರ್ಮಿಸಿಕೊಡಲಾಗುತ್ತಿದೆ House construction

[ccc_my_favorite_select_button post_id="99191"]
ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್ – VIDEO ನೋಡಿ

ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್

ಇತ್ತೀಚೆಗೆ ನೀತಾ ಅಂಬಾನಿ ಅವರು ತಮ್ಮ ಮರ್ಸಿಡೀಸ್ ಬೆಂಜ್ ಬುಲೆಟ್ ಪ್ರೊಫ್ ಕಾರ್‌ನಲ್ಲಿ ಹೈ ಸೆಕ್ಯೂರಿಯಲ್ಲಿ ಆಗಮಿಸಿದ್ದರು. Video

[ccc_my_favorite_select_button post_id="99152"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World Chess Championship

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World

18 ವರ್ಷ ವಯಸ್ಸಿನ ಗ್ರಾ ಟ್ರ್ಯಂಡ್ ಮಾಸ್ಟರ್ ಗುಕೇಶ್ World Chess Championship

[ccc_my_favorite_select_button post_id="98503"]
ನಂದಿನಿ ಲೇಔಟ್ ನಿಂದ ಬಂದು ಮಧುರೆ ಕೆರೆಯಲ್ಲಿ ಆತ್ಮಹತ್ಯೆ..!| Suicide

ನಂದಿನಿ ಲೇಔಟ್ ನಿಂದ ಬಂದು ಮಧುರೆ ಕೆರೆಯಲ್ಲಿ ಆತ್ಮಹತ್ಯೆ..!| Suicide

ಭದ್ರಾಪುರ ಗ್ರಾಮದ ಸಂಬಂಧಿಕರ‌ ಮನೆಗೆ ಬರುತ್ತಿದ್ದ ಯುವಕನ ಮಧುರೆ ಕೆರೆ ಬಳಿ ಚೆಪ್ಪಲಿ, ಬನಿಯನ್ ಹಾಗೂ ಟೆತ್ ನೋಟ್ Suicide

[ccc_my_favorite_select_button post_id="99178"]
Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಈ ಸರಣಿ ಅಪಘಾತ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. Accident

[ccc_my_favorite_select_button post_id="99186"]

ಆರೋಗ್ಯ

ಸಿನಿಮಾ

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಬಂಧನಕ್ಕೊಳಗಾಗಿದ್ದ ಅಲ್ಲು ಅರ್ಜುನ್ ಅವರು ಇಂದು ಬೆಳಿಗ್ಗೆಯಷ್ಟೇ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. Allu arjun

[ccc_my_favorite_select_button post_id="98682"]