ಬೆಂಗಳೂರು, (ಫೆ.20); ಕನ್ನಡಿಗರ ತೆರಿಗೆ ಹಣವನ್ನ ಕೇರಳ ಸಂಸದರಾದ ರಾಹುಲ್ ಗಾಂಧಿ ಹಾಗೂ ಕೆಸಿ ವೇಣುಗೋಪಾಲ್ ಅವರ ಅಣತಿಯಂತೆ ಬಿಡುಗಡೆ ಮಾಡಲು ಕರ್ನಾಟಕವೇನು ಕಾಂಗ್ರೆಸ್ ಪಕ್ಷದ ಆಸ್ತಿ ಅಂದುಕೊಂಡಿದ್ದೀರಾ ಅರಣ್ಯ ಸಚಿವ ಈಶ್ವರ್ ಕಂಡ್ರೆ ಅವರೇ? ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.
ಕರ್ನಾಟಕದ ಆನೆಯ ದಾಳಿಯಿಂದ ಕೇರಳದಲ್ಲಿ ವಯನಾಡು ಜಿಲ್ಲೆಯಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ನೆರವಾಗುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲಹೆ ಮೇರೆಗೆ ಕರ್ನಾಟಕ ಸರ್ಕಾರ ಪರಿಹಾರ ನೀಡಿರುವ ಕುರಿತು ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ನವರೇ, ಇದು ನಮ್ಮ ತೆರಿಗೆ, ನಮ್ಮ ಹಕ್ಕು ಅಂತ ನಿಮ್ಮ ಪಕ್ಷದ ಹೈಕಮಾಂಡ್ ನಾಯಕರ ಬಳಿ ಧೈರ್ಯವಾಗಿ ಪ್ರಶ್ನಿಸಲು ನಿಮ್ಮ ಸಚಿವರಿಗೆ ತಾಕತ್ತಿಲ್ಲವೇ? ಎಂದು ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….