ರಾಮನಗರ, (ಫೆ.20); ವಕೀಲರು ಮತ್ತು ಪೊಲೀಸರ ನಡುವಿ ನಡುವಿನ ಮುಸುಕಿನ ಗುದ್ದಾಟ ತಾರಕಕ್ಕೇರಿದ್ದು, ಕಳೆದೊಂದು ವಾರದಿಂದ ಶಾಂತಿಯುತವಾಗಿ ನಡೆಯುತ್ತಿದ್ದ ವಕೀಲರ ಹೋರಾಟ ಸೋಮವಾರ ತೀವ್ರ ಸ್ವರೂಪ ಪಡೆದುಕೊಂಡಿದೆ.
ವಕೀಲರ ವಿರುದ್ಧ ಐಜೂರು ಠಾಣೆ ಸಬ್ ಇನ್ಸ್‌ಪೆಕ್ಟರ್ ತಸ್ವೀರ್ ಹುಸೇನ್ ಸುಳ್ಳು ಪ್ರಕರಣ ದಾಖಲಿಸಿದ್ದು, ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ನಡೆಸುತ್ತಿರುವ ಅಹೋರಾತ್ರಿ ಹೋರಾಟದಿಂದಾಗಿ ಡೀಸಿ ಅವಿನಾಶ್, ಎಸ್‌ಪಿ ಕಾರ್ತಿಕ್ ರೆಡ್ಡಿ, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸೋಮವಾರ ರಾತ್ರಿ ಕಚೇರಿಯಲ್ಲೇ ದಿಗ್ವಂಧನಕ್ಕೊಳಗಾದರು.
ಎಸ್ಸೈ ಅಮಾನತಿಗೆ ಆಗ್ರಹಿಸಿ ವಕೀಲರು ಸಂಜೆ 5 ಗಂಟೆವರೆಗೆ ಜಿಲ್ಲಾಧಿಕಾರಿಗಳಿಗೆ ಗಡುವು ನೀಡಿದ್ದರು. ಆದರೂ ಜಿಲ್ಲಾಡಳಿತದಿಂದ ಸೂಕ್ತ ಸ್ಪಂದನೆ ದೊರಕದ ಹಿನ್ನೆಲೆಯಲ್ಲಿ ವಕೀಲರು ಡಿಸಿ ಕಚೇರಿ ಗೇಟ್‌ಗಳನ್ನು ಬಂದ್ ಮಾಡಿ ಪ್ರತಿಭಟನೆ ಆರಂಭಿಸಿದರು.
ವಕೀಲರ ಪ್ರತಿಭಟನಾ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ಸೋಮವಾರ ರಾತ್ರಿ ಭೇಟಿ ನೀಡಿ ವಕೀಲರೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು. ಸಬ್ ಇನ್‌ಸ್ಪೆಕ್ಟರ್‌ಮಾತ್ರವಲ್ಲ, ಎಸ್ಪಿ ಅವರನ್ನೂ ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….