ಬೆಂಗಳೂರು, (ಫೆ.22); ನಾನು ಗೃಹ ಸಚಿವನಾಗಿದ್ದಾಗ ಭಜರಂಗದಳದವರ ಮೇಲೆಯೇ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಅಧಿವೇಶನದಲ್ಲಿ ಹೇಳಿಕೊಂಡ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿರುದ್ದ ಭಜರಂಗದಳ ಕೆರಳಿಕೆಂಡವಾಗಿದೆ.
ಅಶೋಕ್ ಹೇಳಿಕೆ ವಿರುದ್ಧ ಭಜರಂಗದಳ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದು, ಮಂಗಳೂರಿನ ಬಜರಂಗದಳದ ಕಾರ್ಯಕರ್ತರ ಪ್ರತಿರೋಧ ಎದುರಿಸಲು ಸಿದ್ಧರಾಗಿ ಎಂದು ಎಚ್ಚರಿಕೆ ನೀಡಿದ್ದರು.
ಮುಂದುವರಿದು ಈಗ ವಿರೋಧ ಪಕ್ಷದ ನಾಯಕ ಆರ್.ಆಶೋಕ ವಿಧಾನ ಸಭೆಯಲ್ಲಿ ಗೂಂಡಾ ಶಬ್ದ ಪ್ರಯೋಗ ಮಾಡಿ ಗೃಹ ಸಚಿವರಾಗಿದ್ದಾಗ ಬಜರಂಗದಳ ಕಾರ್ಯಕರ್ತರ ಮೇಲೆ ಗೂಂಡಾ ಕೇಸು ದಾಖಲಿಸಿದಲ್ಲದೆ ಈಗ ಗೂಂಡಾ ಕೇಸು ಹಾಕಿದ್ದನ್ನು ಸಮರ್ಥಿಸಿರುವುದನ್ನು ಬಜರಂಗದಳ ವಿರೋಧಿಸುತ್ತದೆ ತಕ್ಷಣ ವಿರೋಧ ಪಕ್ಷದ ನಾಯಕನ ಸ್ಥಾನದಿಂದ ಅಶೋಕ್ ರನ್ನು ಕಿತ್ತುಹಾಕಬೇಕು ಎಂದು ಬಜರಂಗದಳ ಆಗ್ರಹಿಸಿದೆ.
ಕೆಲ ದಿನಗಳ ಹಿಂದೆ ವಿಪಕ್ಷ ನಾಯಕ ಆರ್.ಅಶೋಕ್ಗೆ ಭಜರಂಗದಳ ಮಂಗಳೂರು ವಿಭಾಗ ಸಹಸಂಯೋಜಕ ಪುನೀತ್ ಅತ್ತಾವರ ಅವರು ತನ್ನ ಫೇಸ್ ಬುಕ್ ಖಾತೆಯಲ್ಲಿ ಬಹಿರಂಗ ಎಚ್ಚರಿಕೆ ನೀಡಿದ್ದಾರೆ.
ಪುನೀತ್ ಅತ್ತಾವರ ಅವರ ಫೇಸ್ಬುಕ್ ಬರಹ; ನೀವು ಆರ್ ಅಶೋಕ್ ಅಲ್ಲ..ನಿಮ್ಮ ಹೆಸರನ್ನು ಎ ಅಶೋಕ್ ಅಂತ ಬದಲಾಯಿಸಿ ಬಿಡಿ ಅಡ್ಜಸ್ಟ್ ಮೆಂಟ್ ಅಶೋಕ್ ಅವರೇ..!!
ನಿಮ್ಮ ನಾಲಗೆಯನ್ನು ನಾಲಗೆ ರೀತಿಯನ್ನು ಬಳಸಿ ಎಕ್ಕಡದ ರೀತಿ ಬಳಸಿಕೊಳ್ಳಬೇಡಿ…ಅಡ್ಜಸ್ಟ್ ಮೆಂಟ್ ರಾಜಕಾರಣ ಎಂಬ ಗೊಚ್ಚೆಯಲ್ಲಿ ಹೊರಳಾಡುತ್ತಿರುವ ನಿಮಗೆ ಬಜರಂಗದಳದ ಕಾರ್ಯಕರ್ತರ ಹೆಸರು ಎತ್ತಲೂ ಯೋಗ್ಯತೆಯಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿದ್ಧಾಂತಕ್ಕಾಗಿ ಹೋರಾಡುವ ಬಜರಂಗದಳ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿ ಅವರನ್ನು ಸುಮ್ಮನಿರಿಸುವಷ್ಟು ದೊಡ್ಡವರು ನೀವಾಗಿಲ್ಲ…ಬಜರಂಗದಳ ಕಾರ್ಯಕರ್ತರು ಹೋರಾಡುವುದು ನಿಮ್ಮ ಹಾಗೆ ವೈಯಕ್ತಿಕ ಲಾಭದ ಆಸೆಗಾಗಿ ಅಲ್ಲ..ನಿಮ್ಮ ರಾಜಕೀಯ ತೆವಲಿಗಾಗಿ ಬಜರಂಗದಳ ಕಾರ್ಯಕರ್ತರ ಬಗ್ಗೆ ಆಡಿದ ಮಾತನ್ನು ಹಿಂದೆಗೆದುಕೊಳ್ಳು.
ಪ್ರತಿಪಕ್ಷನಾಯಕನಾಗಿರುವ ನೀವು ಒಂದಲ್ಲ ಒಂದು ದಿನ ಮಂಗಳೂರಿಗೆ ಬಂದೇ ಬರುತ್ತೀರಿ ಎಂಬ ಮಾತು ನೆನಪಿರಲಿ…!! ಹಿಂದೂ ವಿರೋಧಿ ಕೃತ್ಯಕ್ಕೆ ಪ್ರತಿರೋಧ ಒಡ್ಡಿ ಹೋರಾಡುವ ನಮಗೆ ನೀವೊಬ್ಬರು ಹೆಚ್ಚಾಗುವುದಿಲ್ಲ. ಒಂದಾ ಬಜರಂಗದಳದ ಕಾರ್ಯಕರ್ತರ ಬಗ್ಗೆ ಆಡಿದ ಮಾತುಗಳನ್ನು ಹಿಂದೆ ಪಡೆಯಿರಿ ಇಲ್ಲದಿದ್ದರೆ ಬಜರಂಗದಳದ ಕಾರ್ಯಕರ್ತರ ಪ್ರತಿರೋಧವನ್ನು ಎದುರಿಸಲು ಸಿದ್ಧರಾಗಿ ಎಂದು ಬರೆದುಕೊಂಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….