ಬೆಂಗಳೂರು, (ಫೆ.24); ಜನ ಜಾನುವಾರುಗಳಿಗೆ ನೀರು, ಮೇವಿಗೆ ಆಹಾಕಾರ ಉಂಟಾಗಿ ನಾಡಿನೆಲ್ಲೆಡೆ ತೀವ್ರ ಬರ ಎದುರಿಸುತ್ತಿರುವ ಹೊತ್ತಲ್ಲಿ ತಮ್ಮ ಮನೆಯ ಶೃಂಗಾರಕ್ಕೆ ಬರೊಬ್ಬರಿ 9 ಕೋಟಿ ದುಂದು ವೆಚ್ಚ ಮಾಡುವ ಜರೂರು ಮುಖ್ಯಮಂತ್ರಿಗಳಿಗಿತ್ತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ನಿವಾಸ ಕಾವೇರಿ ನವೀಕರಣಕ್ಕೆ 09 ಕೋಟಿ ರೂ. ವೆಚ್ಚದ ಕುರಿತಂತೆ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟ್ವಿಟ್ ಮೂಲಕ ಸಿಎಂ ಸಿದ್ದರಾಮಯ್ಯರ ಪ್ರಶ್ನಿಸಿರುವ ಅವರು, ಹೀನಾಯ ಆರ್ಥಿಕ ಪರಿಸ್ಥಿತಿಯ ಕಾರಣಕ್ಕೆ ಅಭಿವೃದ್ಧಿ ಕಾರ್ಯಗಳು ನಿಂತ ನೀರಾಗಿದೆ, ಸಂಕಷ್ಟದ ಕಾಲದ ಪರಿಹಾರ ಕಾರ್ಯವೂ ಸ್ಥಗಿತಗೊಂಡಿದೆ, ಇಂಥಾ ಪರಿಸ್ಥಿತಿಯಲ್ಲೂ ಮನೆ ಶೃಂಗಾರದ ಆದ್ಯತೆ ಪಡೆದು 9 ಕೋಟಿ ನುಂಗಿದರೆ “ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ ಹೂವು”…ಎಂಬ ಗಾದೆ ಮಾತು ನೆನಪಿಗೆ ಬರುತ್ತದೆ ಎಂದು ಲೇವಡಿ ಮಾಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….