ಬೆಂಗಳೂರು, (ಮಾ.21): ತಮಿಳುನಾಡಿನ ಡಿಎಂಕೆ ಪಕ್ಷ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆ ಜಾರಿ ಮಾಡುವುದಿಲ್ಲ ಎಂದು ಘೋಷಣೆ ಮಾಡಿದ ಬೆನ್ನಲ್ಲೇ ಬಿಜೆಪಿ ನಾಯಕ ಆರ್. ಅಶೋಕ್ ಸಾಮಾಜಿಕ ಜಾಲತಾಣ ಟ್ವಿನ್ ನಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಟ್ಯಾಗ್ ಮಾಡಿರುವ ಅಶೋಕ್, ‘ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಲು ಬಿಡುವುದಿಲ್ಲ ಎಂದು ತಮ್ಮ I.N.D.I. ಮಿತ್ರಪಕ್ಷ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆಯಲ್ಲ ಡಿಸಿಎಂ ಶಿವಕುಮಾರ್ ಅವರೇ.
ಈಗ ‘ನಮ್ಮ ನೀರು, ನಮ್ಮ ಹಕ್ಕು’ ಎಂದು ತಮ್ಮ ಶಾಸಕರನ್ನು ಚೆನ್ನೈಗೆ ಕರೆದುಕೊಂಡು ಹೋಗಿ ಪ್ರತಿಭಟನೆ ಮಾಡುತ್ತೀರಾ ಅಥವಾ ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ರಾಜಿ ಮಾಡಿಕೊಳ್ಳುತ್ತೀರಾ? ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರಿಗೆ ನೀರು ತರುತ್ತೇವೆ ಎಂದು ಮೇಕೆದಾಟು ಪಾದಯಾತ್ರೆ ಮಾಡಿ ಕನ್ನಡಿಗರ ಮೂಗಿಗೆ ತುಪ್ಪ ಸವರಿ ಅಧಿಕಾರಕ್ಕೇರಿದ ನಾಡದ್ರೋಹಿ ಕಾಂಗ್ರೆಸ್ ಸರ್ಕಾರ ಈಗ ಕನ್ನಡಿಗರ ಬೆನ್ನಿಗೆ ಚೂರಿ ಹಾಕುತ್ತಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….