ಕೇಂದ್ರದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರಾಜ್ಯ ಸರ್ಕಾರ; ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್.ಅಶೋಕ ವಾಗ್ದಾಳಿ

ಬೆಂಗಳೂರು, (ಮಾ.23); ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಕಾನೂನು ಹೋರಾಟ ಮಾಡಲು ಹೊರಟಿರುವ ಸಿಎಂ ಸಿದ್ದರಾಮಯ್ಯ ನಡೆ ರಾಜಕೀಯ ಪ್ರೇರಿತವಾಗಿದ್ದು, ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ, ಕರ್ನಾಟಕದ ಇತಿಹಾಸದಲ್ಲಿ ಇದೊಂದು ಕರಾಳ ದಿನ ಎಂದರೆ ತಪ್ಪಾಗಲಾರದು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ಕೈಲಾಗದವನು ಮೈಪರಚಿಕೊಂಡ ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ತಮ್ಮ ಎಲ್ಲ ಎಡವಟ್ಟುಗಳಿಗೂ ಕೇಂದ್ರ ಸರ್ಕಾರದತ್ತ ಬೊಟ್ಟು ತೋರಿಸುವುದೇ ತಮ್ಮ ಏಕೈಕ ಕೆಲಸ ಎಂದು ಭಾವಿಸಿದಂತಿದೆ. 

ಹಿಂದಿನ ಬಿಜೆಪಿ ಸರ್ಕಾರ ಬರ, ಪ್ರವಾಹ ಮುಂತಾದ ನೈಸರ್ಗಿಕ ವಿಕೋಪ ಎದುರಾದಾಗ ಕೇಂದ್ರ ಸರ್ಕಾರದ ನೆರವಿಗೆ ಕಾಯದೆ ರಾಜ್ಯ ಸರ್ಕಾರದ ಹಣದಿಂದಲೇ ಪರಿಹಾರ ನೀಡಿತ್ತು. ಆದರೆ ರೈತರ ಮೇಲೆ ಕಿಂಚಿತ್ತೂ ಕಾಳಜಿ ಇಲ್ಲದ ಸಿಎಂ ಸಿದ್ದರಾಮಯ್ಯ ಸರ್ಕಾರ ಬರ ಪರಿಹಾರದಲ್ಲೂ ರಾಜಕೀಯ ಮಾಡಿ ರೈತರಿಗೆ ದ್ರೋಹ ಮಾಡುತ್ತಿದೆ. 

2019ರಲ್ಲಿ 9,72,517 ಹೆಕ್ಟೇರ್‌ ಬೆಳೆಹಾನಿಯಾಗಿತ್ತು. ಆಗ 6,71,314 ಫಲಾನುಭವಿಗಳಿಗೆ 1232.20 ಕೋಟಿ ರೂ. ಪರಿಹಾರ ನೀಡಲಾಗಿತ್ತು. 2020ರಲ್ಲಿ 19,68,247 ಹೆಕ್ಟೇರ್‌ ಬೆಳೆಹಾನಿಯಾಗಿತ್ತು. ಆಗ 12,00,346 ಫಲಾನುಭವಿಗಳಿಗೆ 941.70 ಕೋಟಿ ರೂ. ಪರಿಹಾರ ನೀಡಲಾಗಿತ್ತು.

2021ರಲ್ಲಿ 14,93,811 ಹೆಕ್ಟೇರ್‌ ಬೆಳೆಹಾನಿಯಾಗಿತ್ತು. ಆಗ 18,56,083 ಫಲಾನುಭವಿಗಳಿಗೆ 2446.10 ಕೋಟಿ ರೂ. ಪರಿಹಾರ ನೀಡಲಾಗಿತ್ತು. 2022 ರಲ್ಲಿ 13,09,421, ಹೆಕ್ಟೇರ್‌ ಬೆಳೆಹಾನಿ ಆಗಿತ್ತು. ಆಗ 14,62,841 ಫಲಾನುಭವಿಗಳಿಗೆ 2031.15 ಕೋಟಿ ರೂ. ಪರಿಹಾರ ನೀಡಲಾಗಿತ್ತು.

ಸಿದ್ದರಾಮಯ್ಯನವರ ಈ ನಾಟಕ ಹೊಸದೇನಲ್ಲ. ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲ ರೈತರಿಗೆ ಬರ ಪರಿಹಾರ ವಿಷಯದಲ್ಲಿ ಇದೇ ರೀತಿ ನಾಟಕವಾಡುತ್ತದೆ.  2013-14ರಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ ಜುಲೈ-ಆಗಸ್ಟ್‌ ಅವಧಿಯ ಮುಂಗಾರಿನ ಬರಗಾಲಕ್ಕೆ 2014 ರ ಏಪ್ರಿಲ್‌ನಿಂದ ಇನ್‌ಪುಟ್‌ ಸಬ್ಸಿಡಿ ಪಾವತಿ ಮಾಡಲು ಶುರು ಮಾಡಿತ್ತು. ಅಂದರೆ ಅದಕ್ಕೆ ತೆಗೆದುಕೊಂಡ ಅವಧಿ 9 ತಿಂಗಳು!

2014-15ರ ಸಾಲಿನಲ್ಲಿ ಇದೇ ಸಿದ್ದರಾಮಯ್ಯನವರ ಸರ್ಕಾರ 2014ರ ಜುಲೈ-ಆಗಸ್ಟ್‌ ಅವಧಿಯ ಬರಗಾಲಕ್ಕೆ ಪರಿಹಾರ ನೀಡಲು, 2015 ಮಾರ್ಚ್‌ನಿಂದ ಇನ್‌ಪುಟ್‌ ಸಬ್ಸಿಡಿ ಪಾವತಿ ಶುರು ಮಾಡಿತ್ತು. ಅಂದರೆ ಇದಕ್ಕೆ ತೆಗೆದುಕೊಂಡ ಅವಧಿ 8 ತಿಂಗಳು! 

2019-20 ನೇ ಸಾಲಿನಲ್ಲಿ ಬಿಜೆಪಿ ಸರ್ಕಾರವಿದ್ದಾಗ, 2019ರ ಆಗಸ್ಟ್‌-ಸೆಪ್ಟೆಂಬರ್‌ನಲ್ಲಿ ಪ್ರವಾಹ ವಿಕೋಪ ಉಂಟಾಗಿತ್ತು. ಆಗ 2019ರ ಅಕ್ಟೋಬರ್‌ನಿಂದ ಇನ್‌ಪುಟ್‌ ಸಬ್ಸಿಡಿ ಪಾವತಿ ಶುರು ಮಾಡಲಾಗಿತ್ತು. ಅಂದರೆ ಬರ ಪರಿಹಾರ ನೀಡಲು ಬಿಜೆಪಿ ಸರ್ಕಾರ ತೆಗೆದುಕೊಂಡ ಅವಧಿ ಕೇವಲ 2 ತಿಂಗಳು.

2020-21 ರ ಸಾಲಿನಲ್ಲಿ, 2020ರ ಆಗಸ್ಟ್‌-ಅಕ್ಟೋಬರ್‌ನಲ್ಲಿ ಪ್ರವಾಹ ಉಂಟಾಗಿತ್ತು. ಆಗ ಅಕ್ಟೋಬರ್‌ನಿಂದಲೇ ಪರಿಹಾರ ವಿತರಣೆ ಶುರುವಾಗಿತ್ತು. ಅಂದರೆ ಬಿಜೆಪಿ ಸರ್ಕಾರ ತೆಗೆದುಕೊಂಡ ಅವಧಿ 2 ತಿಂಗಳು. 

2021-22 ನೇ ಸಾಲಿನಲ್ಲಿ, 2021ರ ಆಗಸ್ಟ್‌ನಲ್ಲಿ ಪ್ರವಾಹವಾದಾಗ, ಸೆಪ್ಟೆಂಬರ್‌ನಿಂದಲೇ ಪರಿಹಾರ ವಿತರಣೆ ಶುರುವಾಯಿತು. ಅದಕ್ಕೆ ತೆಗೆದುಕೊಂಡ ಅವಧಿ 2 ತಿಂಗಳು. ಇದೇ ಸಾಲಿನಲ್ಲಿ, ಮತ್ತೊಮ್ಮೆ ಅಕ್ಟೋಬರ್‌-ನವೆಂಬರ್‌ ನಲ್ಲಿ ಪ್ರವಾಹ ಉಂಟಾಗಿ, ಆಗ ನವೆಂಬರ್‌ ನಿಂದಲೇ ಪರಿಹಾರ ವಿತರಣೆ ಮಾಡಲಾಯಿತು. ಅದಕ್ಕೆ ತೆಗೆದುಕೊಂಡ ಅವಧಿ 1 ತಿಂಗಳು.

2022-23 ನೇ ಸಾಲಿನಲ್ಲಿ, 2022ರ ಮೇ-ಜೂನ್‌-ಜುಲೈ ತಿಂಗಳಲ್ಲಿ ಪ್ರವಾಹವಾದಾಗ ಜುಲೈನಿಂದ ಪರಿಹಾರ ವಿತರಣೆ ಶುರು ಮಾಡಲಾಯಿತು. ಅದಕ್ಕೆ ತೆಗೆದುಕೊಂಡ ಅವಧಿ 1 ತಿಂಗಳು. ಮತ್ತೆ ಇದೇ ಸಾಲಿನಲ್ಲಿ, 2022 ರ ಆಗಸ್ಟ್‌-ಸೆಪ್ಟೆಂಬರ್‌ನಲ್ಲಿ ಪ್ರವಾಹ ಉಂಟಾಯಿತು. ಆಗ 2 ತಿಂಗಳಲ್ಲಿ ಪರಿಹಾರ ವಿತರಣೆ ಶುರು ಮಾಡಲಾಯಿತು. 

ಈ ಎಲ್ಲ ಉದಾಹರಣೆಗಳನ್ನು ನೋಡಿದರೆ, ಒಂದಂತೂ ಸ್ಪಷ್ಟವಾಗುತ್ತದೆ. ಕಷ್ಟ ಕಾಲದಲ್ಲಿ ರೈತರ ನೆರವಿಗೆ ಬರುವುದಕ್ಕಿಂತ ರೈತರ ಕಣ್ಣೀರಿನಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದೇ ಕಾಂಗ್ರೆಸ್ ಸರ್ಕಾರಕ್ಕೆ ಹೆಚ್ಚು ಮುಖ್ಯ ಅನ್ನಿಸುತ್ತಿದೆ.

ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದ ಜೊತೆ ಹೇಗೆ ವ್ಯವಹರಿಸಬೇಕು ಎನ್ನುವುದನ್ನು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ನೋಡಿ ಸಿದ್ದರಾಮಯ್ಯನವರು ಪಾಠ ಕಲಿಯಬೇಕು. 

ಚುನಾವಣೆ ಇದ್ದಾಗ ರಾಜಕೀಯ ಮಾಡಿ. ಆದರೆ ಚುನಾವಣೆ ಮುಗಿದ ಮೇಲೆ ರಾಜಕೀಯ ಪಕ್ಕಕ್ಕಿಟ್ಟು ಆಡಳಿತದ ಕಡೆ ಗಮನ ಹರಿಸಿ, ಜನರ ಹಿತಾಸಕ್ತಿ ಕಾಪಾಡಲು ಆದ್ಯತೆ ನೀಡಿ. ಅದು ಬಿಟ್ಟು ರಾಜಕೀಯ ತಂತ್ರ ಸೃಷ್ಟಿಸಲು ಪದೇ ಪದೇ ಜನರ ಹಿತಾಸಕ್ತಿಯನ್ನೇ ಬಲಿಕೊಡುವುದು ಸಿಎಂ ಸಿದ್ದರಾಮಯ್ಯ ನವರಿಗೆ ಶೋಭೆ ತರುವುದಿಲ್ಲ. ಇತಿಹಾಸ ನಿಮ್ಮನ್ನು ಖಂಡಿತ ಕ್ಷಮಿಸುವುದಿಲ್ಲ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುರಿತು ಸಿಟಿ ರವಿ ಅಶ್ಲೀಲ ಹೇಳಿಕೆ: ಮಹಿಳಾ ಕಾಂಗ್ರೆಸ್ ಪ್ರತಿಭಟನೆ| CT Ravi

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುರಿತು ಸಿಟಿ ರವಿ ಅಶ್ಲೀಲ ಹೇಳಿಕೆ: ಮಹಿಳಾ ಕಾಂಗ್ರೆಸ್

ಬಿಜೆಪಿ ನಾಯಕರು ಬಾಯಿ ಬಿಟ್ಟರೆ ಸಾಕು, ಅವರ ಸಂಸ್ಕೃತಿ ತಿಳಿಯುತ್ತದೆ. CT Ravi

[ccc_my_favorite_select_button post_id="99100"]
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮನೆ ನಿರ್ಮಾಣ..!| House construction

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮನೆ ನಿರ್ಮಾಣ..!| House construction

ವಾಸಿಸಲು ಮನೆ ಇಲ್ಲದ ಕಾರಣ ಧರ್ಮಸ್ಥಳದಿಂದ ಮನೆ ನಿರ್ಮಿಸಿಕೊಡಲಾಗುತ್ತಿದೆ House construction

[ccc_my_favorite_select_button post_id="99191"]
ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್ – VIDEO ನೋಡಿ

ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್

ಇತ್ತೀಚೆಗೆ ನೀತಾ ಅಂಬಾನಿ ಅವರು ತಮ್ಮ ಮರ್ಸಿಡೀಸ್ ಬೆಂಜ್ ಬುಲೆಟ್ ಪ್ರೊಫ್ ಕಾರ್‌ನಲ್ಲಿ ಹೈ ಸೆಕ್ಯೂರಿಯಲ್ಲಿ ಆಗಮಿಸಿದ್ದರು. Video

[ccc_my_favorite_select_button post_id="99152"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World Chess Championship

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World

18 ವರ್ಷ ವಯಸ್ಸಿನ ಗ್ರಾ ಟ್ರ್ಯಂಡ್ ಮಾಸ್ಟರ್ ಗುಕೇಶ್ World Chess Championship

[ccc_my_favorite_select_button post_id="98503"]
ನಂದಿನಿ ಲೇಔಟ್ ನಿಂದ ಬಂದು ಮಧುರೆ ಕೆರೆಯಲ್ಲಿ ಆತ್ಮಹತ್ಯೆ..!| Suicide

ನಂದಿನಿ ಲೇಔಟ್ ನಿಂದ ಬಂದು ಮಧುರೆ ಕೆರೆಯಲ್ಲಿ ಆತ್ಮಹತ್ಯೆ..!| Suicide

ಭದ್ರಾಪುರ ಗ್ರಾಮದ ಸಂಬಂಧಿಕರ‌ ಮನೆಗೆ ಬರುತ್ತಿದ್ದ ಯುವಕನ ಮಧುರೆ ಕೆರೆ ಬಳಿ ಚೆಪ್ಪಲಿ, ಬನಿಯನ್ ಹಾಗೂ ಟೆತ್ ನೋಟ್ Suicide

[ccc_my_favorite_select_button post_id="99178"]
Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಈ ಸರಣಿ ಅಪಘಾತ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. Accident

[ccc_my_favorite_select_button post_id="99186"]

ಆರೋಗ್ಯ

ಸಿನಿಮಾ

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಬಂಧನಕ್ಕೊಳಗಾಗಿದ್ದ ಅಲ್ಲು ಅರ್ಜುನ್ ಅವರು ಇಂದು ಬೆಳಿಗ್ಗೆಯಷ್ಟೇ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. Allu arjun

[ccc_my_favorite_select_button post_id="98682"]