ಬೆಂಗಳೂರು, (ಮಾ.25): ಕುಂಕುಮ ಎಂದರೆ ಅಲರ್ಜಿಯೇ, ಅಸಹ್ಯವೇ? ಎಂದು ಕಾಂಗ್ರೆಸ್ ವಿಪಕ್ಷ ನಾಯಕ ಆರ್ ಅಶೋಕ ವಿರುದ್ಧ ಕಿಡಿಕಾರಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೆಪೇಟ್‌ನಲ್ಲಿ ಭಾನುವಾರ ಬಿಜೆಪಿ ಕಚೇರಿಗೆ ಆಗಮಿಸಿದ್ದ ಆರ್ ಅಶೋಕ್‌ಗೆ ಹಿರಿಯ ಮುಖಂಡರೊಬ್ಬರು ಕುಂಕುಮ ಹಚ್ಚಲು ಮುಂದಾಗಿದ್ದರು. ಈ ವೇಳೆ ಅಶೋಕ್ ಕುಂಕುಮ ಹಚ್ಚದಂತೆ ಬೇಡ ಎಂದು ತಡೆದಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಕಾಂಗ್ರೆಸ್ ಅಶೋಕ್ ಅವರನ್ನು ತರಾಟೆಗೆ ತೆಗೆದುಕೊಂಡಿದೆ.
ಈ ಬಗ್ಗೆ ಎಕ್ಸ್ ಪೋಸ್ಟ್‌ನಲ್ಲಿ ವಿಡಿಯೋ ಹಂಚಿಕೊಂಡು ಕಿಡಿಕಾರಿರುವ ಕಾಂಗ್ರೆಸ್, ಕುಂಕುಮ ಎಂದರೆ ಅಲರ್ಜಿಯೇ, ಅಸಹ್ಯವೇ? ಕುಂಕುಮ ಹಚ್ಚಲು ಬಂದರೆ ಹೌಹಾರಿ ನಿರಾಕರಿಸುವ ಅಶೋಕ್ ಅವರ ಮೂಲಕ ಬಿಜೆಪಿಯವರ ಬೂಟಾಟಿಕೆಯ ಹುಸಿ ಧಾರ್ಮಿಕತೆ ನಾಟಕ ಬಯಲಾಗಿದೆ.
ಕೇಸರಿ ಶಾಲು, ಕುಂಕುಮ ಮುಂತಾದವುಗಳು ಬಿಜೆಪಿಗರ ಯುವ ಸಮುದಾಯವನ್ನು ದಿಕ್ಕು ತಪ್ಪಿಸುವ ಟೂಲ್ ಕಿಟ್ ಹೊರತು ಬಿಜೆಪಿಗರ ಅಸಲಿ ಆಚರಣೆಯಲ್ಲ. ಬೊಮ್ಮಾಯಿಯವರು ಕುಂಕುಮವನ್ನು ಉಜ್ಜಿ ಉಜ್ಜಿ ಅಳಿಸಿಕೊಂಡರೆ, ಅಶೋಕ್ ಅವರು ಹಚ್ಚಿಕೊಳ್ಳಲು ನಿರಾಕರಿಸುತ್ತಾರೆ.
ಕರ್ನಾಟಕ ಬಿಜೆಪಿ ನಾಯಕರಿಗೆ ಕುಂಕುಮಕ್ಕಿಂತ ಮೇಕಪ್ ಮುಖ್ಯವೇ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….