ಬೆಂಗಳೂರು, (ಏ.22): ಇತ್ತೀಚೆಗೆ ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರೂ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ.
ಮೈಸೂರಿನಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ಕಿಚ್ಚು ಜೋರಾಗಿತ್ತು. ಗಾಂಧಿವೃತ್ತದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯ ಸರ್ಕಾರ ಹಾಗು ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಬಿಡಿ ನಾಡಿನ ಮಹಿಳೆಯರಿಗೆ ರಕ್ಷಣೆ ನೀಡುವ ವಿಚಾರದಲ್ಲಿ ನಾಲಾಯಕ್ ತನವನ್ನು ಪ್ರದರ್ಶಿಸುತ್ತಿದ್ದಾರೆ.
ಇಂತ ನಾಲಾಯಕ್ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರವನ್ನು ನೀಡಲಿದ್ದಾರೆ. ನೇಹಾ ಹತ್ಯೆ ಪ್ರಕರಣದಲ್ಲಿ ಈ ನಾಲಾಯಕ್ ಸರ್ಕಾರಕ್ಕೆ ನಾಚಿಯಾಗಬೇಕಿತ್ತು. ಒಂದು ಜವಬ್ದಾರಿಯುತ ಸರ್ಕಾರ ಆ ಹೆಣ್ಣು ಮಗಳ ಹತ್ಯೆಯಾದಾಗ ರಾಜ್ಯದ ಮುಖ್ಯಮಂತ್ರಿ ಆದಿಯಾಗಿ ಯಾವುದೇ ಸಚಿವ ಆಕುಟುಂಬದ ಮನೆಗ ಹೋಗಿ ಸಾಂತ್ವಾನ ನೀಡದೆ, ಆ ಕುಟುಂಬಕ್ಕೆ ಧೈರ್ಯ ಕೊಡುವ ಕೆಲಸ ಮಾಡಲ್ಲ, ಅದಕ್ಕೆ ಬದಲಾಗಿ ತೇಜೋವಧೆ ಮಾಡುವಂತಹ ದುಸ್ಸಾಹಸಕ್ಕೆ ಕೈಹಾಕಿದ್ದಾರೆ. ದುಷ್ಯಾಸನ ಪ್ರವೃತ್ತಿ ರಾಜ್ಯದ ಮುಖ್ಯಮಂತ್ರಿ ಮಾಡ್ತಾ ಇದ್ದಾರೆ.
ಮುಖ್ಯಮಂತ್ರಿ, ಗೃಹ ಸಚಿವರು ಪೊಲೀಸರ ಬಳಸಿಕೊಂಡಿಕು ಆ ಕುಟುಂಬವನ್ನು ತೇಜೋವಧೆ ಮಾಡ್ತಾ ಇದ್ದಾರೆ. ಇಂತಹ ನಾಲಾಯಕ್ ಮುಖ್ಯಮಂತ್ರಿಗೆ ನಾಡಿನ ಜನ ಶಾಪ ಹಾಕ್ತಾ ಇದ್ದಾರೆ ಎಂದರು.
ಪ್ರತಿಭಟನೆಯಲ್ಲಿ ನೂರಾರು ಮಹಿಳಾ ಕಾರ್ಯಕರ್ತರು ಭಾಗಿಯಾದರು. ಇಷ್ಟೇ ಅಲ್ಲದೆ ತುಮಕೂರು, ಹಾವೇರಿ, ಬಳ್ಳಾರಿ, ಬಾಗಲಕೋಟೆ, ಕಲಬುರಗಿ ಮತ್ತಿತರ ಕಡೆ ಪ್ರತಿಭಟನೆ ನಡೆಸಲಾಗಿದೆ.
ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟೇ ಅಲ್ಲದೆ, ‘ಸಿದ್ರಾಮುಲ್ಲಾಖಾನ್, ಡಿಕೆ ಬ್ರದರ್ಸ್ಗೆ ಧಿಕ್ಕಾರ’ ಎಂದು ಘೋಷಣೆ ಕೂಗಿದ್ದಾರೆ.
ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….