ಬರ ಪರಿಹಾರ; ಕೈಚಳಕ ಮಾಡಿ ದುಡ್ಡು ಹೊಡೆಯದಂತೆ ನಾವು ಕಾವಲು ಕಾಯುತ್ತೇವೆ‌ – ಆರ್.ಅಶೋಕ್

ಬೆಂಗಳೂರು, (ಏ,28); ಬರಗಾಲದಿಂದ ಬಳಲಿದ ರಾಜ್ಯದ ಜನತೆಗೆ 3,454 ಕೋಟಿ ರೂ. ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನೀಡಿದ್ದು, ಇದರಲ್ಲಿ ಕಾಂಗ್ರೆಸ್ ಸರ್ಕಾರದ ಯಾವುದೇ ಪಾತ್ರವಿಲ್ಲ. ಈಗ ರಾಜ್ಯ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರ ನೀಡಿದಂತೆಯೇ ಡಬಲ್ ಪರಿಹಾರ ನೀಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.

ಮಲ್ಲೇಶ್ವರದ ಬಿಜೆಪಿ ‌ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಜಾನೆ ಖಾಲಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ. ಬರಗಾಲದ ಪರಿಹಾರಕ್ಕಾಗಿ ಸರಿಯಾದ ಮಾಹಿತಿ ನೀಡಲು ಕೂಡ ಸರ್ಕಾರ ವಿಳಂಬ ಮಾಡಿತ್ತು. ಕೋರ್ಟ್ ಆದೇಶವಾಗಿದ್ದರೆ ಕರ್ನಾಟಕಕ್ಕೆ ಮಾತ್ರ ಪರಿಹಾರ ಬರಬೇಕಿತ್ತು. ಆದರೆ ಕೇಂದ್ರ ಸರ್ಕಾರವೇ ಕ್ರಮ ವಹಿಸಿ ಪರಿಹಾರ ನೀಡಿದೆ‌‌. ಇದರಲ್ಲಿ ಕಾಂಗ್ರೆಸ್ ನ ಶ್ರಮ ಏನೂ ಇಲ್ಲ. ಚುನಾವಣಾ ಆಯೋಗ ಅನುಮತಿ ನೀಡಿರುವುದರಿಂದ ಮಾತ್ರ ಹಣ ಬಿಡುಗಡೆಯಾಗಿದೆ ಎಂದರು.

ಕಾಂಗ್ರೆಸ್ ಸರ್ಕಾರ ಬರಗಾಲದ ಪರಿಹಾರದ ಹಣವನ್ನು ಲೂಟಿ ಮಾಡಬಾರದು. ಇದರಲ್ಲೂ ಕೈ ಚಳಕ ಮಾಡಿ ದುಡ್ಡು ಹೊಡೆಯದಂತೆ ನಾವು ಕಾವಲು ಕಾಯುತ್ತೇವೆ‌. ಬರದಿಂದ ನೊಂದ ರೈತರ ಖಾತೆಗೆ ನೇರವಾಗಿ ಪರಿಹಾರ ನೀಡಬೇಕು. ಈವರೆಗೆ ಬರ ಪರಿಹಾರ ಬಂದಿಲ್ಲ ಎಂದು ಕಾಂಗ್ರೆಸ್ ಹೇಳುತ್ತಿತ್ತು. ಹಿಂದಿನ ಬಿಜೆಪಿ ಸರ್ಕಾರ ದುಪ್ಪಟ್ಟು ಪ್ರವಾಹ ಪರಿಹಾರ ನೀಡಿತ್ತು. ಈಗಲೂ ಸರ್ಕಾರ ತನ್ನ ಕಡೆಯಿಂದ ಡಬಲ್ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಸರ್ಕಾರಕ್ಕೆ ಪರಿಹಾರದ ಬಗ್ಗೆ ಸಾಮಾನ್ಯ ಪ್ರಜ್ಞೆ ಹಾಗೂ ತಿಳಿವಳಿಕೆ ಇಲ್ಲ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಎಷ್ಟು ಹಣ ಬಿಡುಗಡೆ ಮಾಡಿತ್ತು ಎಂದು ತಿಳಿಸಲಿ‌. ಯಡಿಯೂರಪ್ಪ ಸಿಎಂ ಆಗಿದ್ದಾಗ ಕೇಂದ್ರದಲ್ಲಿ ಮನಮೋಹನ್ ಸಿಂಗ್ ಸರ್ಕಾರವೇ ಇತ್ತು‌‌. ಆಗಿನ ಪರಿಹಾರಕ್ಕೂ ಈಗ ನೀಡಿರುವ ಪರಿಹಾರಕ್ಕೂ ಜನರೇ ಹೋಲಿಕೆ ಮಾಡಲಿ‌‌. ವಿದ್ಯುತ್ ದರ, ಮಾರ್ಗಸೂಚಿ ದರ, ದತ್ತು ಪಡೆಯಲು ದರ ಹೀಗೆ ಎಲ್ಲದರಲ್ಲೂ ಸರ್ಕಾರ ದರ ಏರಿಕೆ ಮಾಡಿದೆ ಎಂದು ದೂರಿದರು.

ಮುಸ್ಲಿಂ ಓಲೈಕೆ: ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕಾಂಗ್ರೆಸ್ ಸರ್ಕಾರ ಮುಸ್ಲಿಮರಿಗೆ ನೀಡಿ ಓಲೈಕೆ ರಾಜಕಾರಣ ಮಾಡಿದೆ. ಮುಸ್ಲಿಮರು ಹಲ್ಲೆ ಮಾಡಿದರೆ, ಪಾಕಿಸ್ತಾನ ಜಿಂದಾಬಾದ್ ಎಂದರೆ ಕ್ರಮ ಕೈಗೊಳ್ಳುವುದಿಲ್ಲ. ದೇಶದ ಸಂಪತ್ತಿನ ಹಕ್ಕು ಮುಸ್ಲಿಮರಿಗಿದೆ ಎಂದು ಮನಮೋಹನ್ ಸಿಂಗ್ ಹೇಳಿದ್ದರು. ಆದ್ದರಿಂದ ಹಿಂದುಳಿದ ವರ್ಗಗಳ ಮತ ಕೇಳುವ ನೈತಿಕತೆ ಕಾಂಗ್ರೆಸ್ ಗೆ ಇಲ್ಲ. ಅಂಬೇಡ್ಕರ್ ಬರೆದ ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲು ನೀಡಬಾರದು ಎಂದು ಹೇಳಲಾಗಿದೆ. ಆದರೆ ಇದನ್ನು ಮೀರಿ ಕಾಂಗ್ರೆಸ್ ಮೀಸಲು ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣೆಯಲ್ಲಿ ಹಲ್ಲೆ: ಸರ್ಜಾಪುರ ನಿವಾಸಿ ಪ್ರಕಾಶ್ ಅವರ ಮೇಲೆ ಕಾಂಗ್ರೆಸ್ ಮುಖಂಡರು ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದವನು ರೌಡಿ ಶೀಟರ್ ಆಗಿದ್ದರೂ ಪೊಲೀಸರು ಯಾರನ್ನೂ ಬಂಧಿಸಿಲ್ಲ. ಕೋಲಾರದಲ್ಲಿ ಜೆಡಿಎಸ್ ಕಾರ್ಯಕರ್ತ ಗೋವರ್ಧನ್ ಅವರ ಮೇಲೂ ಹಲ್ಲೆಯಾಗಿದೆ. ಪೊಲೀಸರು ಕಾಂಗ್ರೆಸ್ ಸರ್ಕಾರದ ಕೈಗೊಂಬೆಯಾಗಿ ವರ್ತಿಸುವುದನ್ನು ಖಂಡಿಸುತ್ತೇನೆ ಎಂದರು.

ಸಹೋದರ ಸೋತಂತೆ ಡಿಕೆ ಶಿವಕುಮಾರ್ ಅವರಿಗೆ ಕನಸು ಬಿದ್ದಿದ್ದು, ಅದಕ್ಕಾಗಿ ತಮಿಳುನಾಡು, ಉಡುಪಿಗೆ ಹೋಗಿ ಪೂಜೆ ಮಾಡಿದ್ದಾರೆ. ಡಿಕೆ ಸುರೇಶ್ ಅವರನ್ನು ಹೇಗೆ ಎಂಎಲ್ಸಿ ಮಾಡಬೇಕೆಂದು ಅವರು ಚಿಂತಿಸಿದ್ದಾರೆ. ಅವರಿಗೆ ಸೋಲಿನ ಭೀತಿ ಉಂಟಾಗಿರುವುದರಿಂದಲೇ ಪ್ರಚಾರಕ್ಕೆ ಪದೇ ಪದೆ ಬೆಂಗಳೂರು ಗ್ರಾಮಾಂತರಕ್ಕೆ ಹೋಗಿದ್ದಾರೆ. ಬಿಜೆಪಿಗೆ ಯಾವುದೇ ಭಯವಿಲ್ಲ. ನಮಗೆ 400 ಸ್ಥಾನ ಗೆಲ್ಲುವ ವಿಶ್ವಾಸವಿದೆ. ಕಾಂಗ್ರೆಸ್ ಮೈತ್ರಿಕೂಟದ ಬಹುತೇಕರು ಜೈಲಲ್ಲಿ, ಬೇಲ್ ನಲ್ಲಿ ಇದ್ದಾರೆ. ಫಲಿತಾಂಶದ ಮೊದಲೇ ನಾವು ಒಂದು ಸ್ಥಾನ ಗೆದ್ದಾಗಿದೆ ಎಂದರು.

ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ ಬರಲು ಸಿಎಂ ಸಿದ್ದರಾಮಯ್ಯನವರೇ ಕಾರಣ. ಡಿ.ಕೆ.ಶಿವಕುಮಾರ್ ಸೋದರರನ್ನು ಮುಗಿಸಲು ಸಿಎಂ ಸಿದ್ದರಾಮಯ್ಯ ತಂತ್ರ ಮಾಡಿದ್ದಾರೆ. ಕಾಂಗ್ರೆಸ್ ನವರೇ ಅವರ ಕಾಲ ಮೇಲೆ ಚಪ್ಪಡಿ ಎಳೆದುಕೊಳ್ಳುತ್ತಾರೆ. ಸಿದ್ದರಾಮಯ್ಯನವರಿಗೆ ವಿರೋಧಿಗಳನ್ನು ಹೇಗೆ ಮುಗಿಸಬೇಕೆಂದು ಗೊತ್ತಿದೆ. ಅದಕ್ಕೆ ಉದಾಹರಣೆಯಾಗಿ ಡಾ.ಜಿ.ಪರಮೇಶ್ವರ್ ಇದ್ದಾರೆ ಎಂದರು.

14 ಕ್ಷೇತ್ರಗಳಲ್ಲಿ ಉತ್ತಮ ಮತದಾನವಾಗಿದ್ದು, 12 ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ಬಿಸಿಲಿದ್ದರೂ ಜನರು ಬಂದು ಮತದಾನ ಮಾಡಿರುವುದಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದು ತಿಳಿಸಿದರು. ಎರಡನೇ ಹಂತದಲ್ಲಿ 14 ಸ್ಥಾನ ಗೆಲ್ಲಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಡಿಬಿಟಿ ಮೂಲಕವೇ ನೀಡಿ: ರಾಜ್ಯ ಸರ್ಕಾರ ದುಡ್ಡು ಹೊಡೆಯಲು ಚೆಕ್ ಮೂಲಕ ಪರಿಹಾರ ನೀಡಬಾರದು‌. ಡಿಬಿಟಿ ಮೂಲಕವೇ ನೇರವಾಗಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುರಿತು ಸಿಟಿ ರವಿ ಅಶ್ಲೀಲ ಹೇಳಿಕೆ: ಮಹಿಳಾ ಕಾಂಗ್ರೆಸ್ ಪ್ರತಿಭಟನೆ| CT Ravi

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುರಿತು ಸಿಟಿ ರವಿ ಅಶ್ಲೀಲ ಹೇಳಿಕೆ: ಮಹಿಳಾ ಕಾಂಗ್ರೆಸ್

ಬಿಜೆಪಿ ನಾಯಕರು ಬಾಯಿ ಬಿಟ್ಟರೆ ಸಾಕು, ಅವರ ಸಂಸ್ಕೃತಿ ತಿಳಿಯುತ್ತದೆ. CT Ravi

[ccc_my_favorite_select_button post_id="99100"]
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮನೆ ನಿರ್ಮಾಣ..!| House construction

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮನೆ ನಿರ್ಮಾಣ..!| House construction

ವಾಸಿಸಲು ಮನೆ ಇಲ್ಲದ ಕಾರಣ ಧರ್ಮಸ್ಥಳದಿಂದ ಮನೆ ನಿರ್ಮಿಸಿಕೊಡಲಾಗುತ್ತಿದೆ House construction

[ccc_my_favorite_select_button post_id="99191"]
ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್ – VIDEO ನೋಡಿ

ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್

ಇತ್ತೀಚೆಗೆ ನೀತಾ ಅಂಬಾನಿ ಅವರು ತಮ್ಮ ಮರ್ಸಿಡೀಸ್ ಬೆಂಜ್ ಬುಲೆಟ್ ಪ್ರೊಫ್ ಕಾರ್‌ನಲ್ಲಿ ಹೈ ಸೆಕ್ಯೂರಿಯಲ್ಲಿ ಆಗಮಿಸಿದ್ದರು. Video

[ccc_my_favorite_select_button post_id="99152"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World Chess Championship

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World

18 ವರ್ಷ ವಯಸ್ಸಿನ ಗ್ರಾ ಟ್ರ್ಯಂಡ್ ಮಾಸ್ಟರ್ ಗುಕೇಶ್ World Chess Championship

[ccc_my_favorite_select_button post_id="98503"]
ನಂದಿನಿ ಲೇಔಟ್ ನಿಂದ ಬಂದು ಮಧುರೆ ಕೆರೆಯಲ್ಲಿ ಆತ್ಮಹತ್ಯೆ..!| Suicide

ನಂದಿನಿ ಲೇಔಟ್ ನಿಂದ ಬಂದು ಮಧುರೆ ಕೆರೆಯಲ್ಲಿ ಆತ್ಮಹತ್ಯೆ..!| Suicide

ಭದ್ರಾಪುರ ಗ್ರಾಮದ ಸಂಬಂಧಿಕರ‌ ಮನೆಗೆ ಬರುತ್ತಿದ್ದ ಯುವಕನ ಮಧುರೆ ಕೆರೆ ಬಳಿ ಚೆಪ್ಪಲಿ, ಬನಿಯನ್ ಹಾಗೂ ಟೆತ್ ನೋಟ್ Suicide

[ccc_my_favorite_select_button post_id="99178"]
Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಈ ಸರಣಿ ಅಪಘಾತ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. Accident

[ccc_my_favorite_select_button post_id="99186"]

ಆರೋಗ್ಯ

ಸಿನಿಮಾ

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಬಂಧನಕ್ಕೊಳಗಾಗಿದ್ದ ಅಲ್ಲು ಅರ್ಜುನ್ ಅವರು ಇಂದು ಬೆಳಿಗ್ಗೆಯಷ್ಟೇ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. Allu arjun

[ccc_my_favorite_select_button post_id="98682"]