ಬೆಳಗಾವಿ, (ಮೇ.22); ದಿಟ್ಟ ರೈತ ಹೋರಾಟಗಾರ್ತಿ ಎಂದೇ ಗುರುತಿಸಿಕೊಂಡಿದ್ದ ಜಿಲ್ಲೆಯ ಖಾನಾಪುರದ ತೋಲಗಿ ಗ್ರಾಮದ ಜಯಶ್ರೀ ಗುರಣ್ಣವರ ಅವರು ಇಂದು ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಹೀಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ತೀವ್ರ ನಿಗಾ ಘಟಕದಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ರೈತ, ಬಡವರು, ದಲಿತಪರ ಹೋರಾಟದಲ್ಲಿ ನಿರಂತರವಾಗಿ ತೊಡಗಿದ್ದ ಜಯಶ್ರೀ ಅವರ ಅಗಲಿಕೆಯಿಂದ ಜಿಲ್ಲೆಯ ಹೋರಾಟಗಾರರ ವರ್ಗವು ಇದೀಗ ಶೋಕದಲ್ಲಿ ಮುಳುಗಿದೆ.
ಇನ್ನು ಅನಾರೋಗ್ಯಕ್ಕೆ ತುತ್ತಾಗಿದ್ದ ಜಯಶ್ರೀ ಅವರನ್ನು ಈ ಹಿಂದೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ತಮ್ಮ ಆಪ್ತ ಸಹಾಯಕನ ಮೂಲಕ ಆರ್ಥಿಕ ನೆರವು ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದರು.
ಜಯಶ್ರೀ ಗುರಣ್ಣನವರ ಅಗಲಿಕೆ ರಾಜ್ಯದ ವಿವಿಧೆಡೆಗಳಿಂದ ರೈತ ಸಂಘಗಳ ಪ್ರಮುಖರು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….