Site icon ಹರಿತಲೇಖನಿ

ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು, (ಜೂ.01): ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಆಯ್ಕೆಯಾಗುವ ಚುನಾವಣೆಗೆ ಕಾಂಗ್ರೆಸ್ ಅಳೆದು ತೂಗಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಇದೇ ಜೂನ್ 13ಕ್ಕೆ ಮತದಾನ ನಡೆಯಲಿದ್ದು, ಎಂಎಲ್‌ಸಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 03 ಅಂದ್ರೆ ನಾಳೆಯೇ ಕೊನೆಯ ದಿನವಾಗಿದೆ.

ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷ ಹೊಂದಿರುವ ಸಂಖ್ಯಾಬಲದ ಆಧಾರದಲ್ಲಿ 7 ಪರಿಷತ್ ಸದಸ್ಯ ಸ್ಥಾನವನ್ನು ಗೆಲ್ಲಬಹುದಾಗಿದೆ. ಹೀಗಾಗಿ ವಿಧಾನಪರಿಷತ್ ಚುನಾವಣೆಗೆ 7 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಇದರ ಜೊತೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ರಾಜೀನಾಮೆ ನೀಡಿದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ. ಕಾಂಗ್ರೆಸ್ ಪಕ್ಷ ಉಪಚುನಾವಣೆಯ ಅಭ್ಯರ್ಥಿಯಾಗಿ ಬಸವನಗೌಡ ಬದರ್ಲಿ ಅವರನ್ನು ಆಯ್ಕೆ ಮಾಡಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

Exit mobile version