ಬೆಂಗಳೂರು, (ಜೂ.02): ವಿಧಾನಸಭೆಯಿಂದ ವಿಧಾನಪರಿಷತ್ ಆಯ್ಕೆಯಾಗುವ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಬಿಜೆಪಿ ಹೈಕಮಾಂಡ್ ಮೂರು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ.
ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆಯ ದಿನವಾಗಿದೆ. ಹೀಗಾಗಿ ಇಂದು ಬಿಜೆಪಿ ಹೈಕಮಾಂಡ್ ಅಂತಿಮವಾಗಿ ತನ್ನ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.
ಬಿಜೆಪಿ ಹೈಕಮಾಂಡ್ ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಮತ್ತು ಎಂ.ಜಿ ಮೂಳೆ ಅವರಿಗೆ ಮಣೆ ಹಾಕಿದೆ. ಮೂರು ಸ್ಥಾನಗಳಿಗೆ 40 ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದರು.
ಬಿಜೆಪಿ ಸಂಖ್ಯಾಬಲದ ಆಧಾರದ ಮೇಲೆ ಮೂರು ಸ್ಥಾನಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಿದೆ. ಹೀಗಾಗಿ ಬಿಜೆಪಿ ಹೈಕಮಾಂಡ್ ಮೂರು ಅಭ್ಯರ್ಥಿಗಳನ್ನು ಘೋಷಿಸಿದ್ದು, ವಿಧಾನ ಪರಿಷತ್ ಹಾಲಿ ಸದಸ್ಯರಾದ ಎನ್ ರವಿ ಕುಮಾರ್ ಅವರಿಗೆ ಮತ್ತೊಮ್ಮೆ ಚಾನ್ಸ್ ಕೊಟ್ಟಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಸಿಟಿ ರವಿ ಅವರಿಗೆ ಹೈಕಮಾಂಡ್ ಬಂಪರ್ ಗಿಫ್ಟ್ ಕೊಟ್ಟಿದೆ.
ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟ್ವಿಟ್ ಮಾಡಿದ್ದು, ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಚುನಾಯಿತರಾಗಲು ಬಿಜೆಪಿ ಅಭ್ಯರ್ಥಿಗಳಾಗಿ ಆಯ್ಕೆಯಾಗಿರುವ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸಿದ್ದ ಮಾನ್ಯ ಸಿ ಟಿ ರವಿ ಹಾಲಿ ಸದಸ್ಯರಾಗಿ ಪಕ್ಷ ಸಂಘಟನೆಗೆ ಸದನದ ಒಳಗೆ ಹಾಗೂ ಹೊರಗೆ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿದ್ದ ಎನ್ ರಮೇಶ್ ಕುಮಾರ್ ಹಾಗೂ ಪಕ್ಷ ಸಂಘಟನೆಗಾಗಿ ತಮ್ಮನ್ನು ಸಮರ್ಪಿಸಿಕೊಂಡಿದ್ದ ಶ್ರೀ ಎಂ.ಜಿ. ಮುಳೆ ಅವರುಗಳನ್ನು ಪಕ್ಷದ ಪರವಾಗಿ ಆತ್ಮೀಯವಾಗಿ ಅಭಿನಂದಿಸುವೆ ಎಂದು ಹೇಳಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….