ಚಿಕ್ಕಬಳ್ಳಾಪುರ, (ಜೂ,8); ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತಗಳು ಬಂದಿದ್ದರೂ ಸಹ ನಾನಾ ಕಾರಣಗಳಿಂದಾಗಿ ಅದನ್ನು ಗೆಲುವಾಗಿ ಪರಿವರ್ತನೆ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲಾ ಪತ್ರಕರ್ತರ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಸಿ.ಸುಧಾಕರ್, ಮಾಜಿ ಸಚಿವರು ಮತ್ತು ವಿಧಾನಪರಿಷತ್ ಸದಸ್ಯರಾದ ಡಾ. ಎಂ.ಆರ್. ಸೀತಾರಾಂ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಹಿಂದಿನ ಚುನಾವಣೆಗಳಿಗೆ ಹೋಲಿಸಿದರೆ ಕಾಂಗ್ರೆಸ್ ಗೆ ಶೇ 3 ರಷ್ಟು ಮತಗಳು ಹೆಚ್ಚಿನ ಪ್ರಮಾಣದಲ್ಲಿ ಬಂದಿತ್ತು. ಆದರೆ ಅದನ್ನು ಗೆಲುವಾಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ. ತಮಗೆ 6.60 ಲಕ್ಷ ಮತಗಳು ದೊರೆತಿದ್ದು, 1.60 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿರುವ ತಮ್ಮ ಪ್ರತಿಸ್ಪರ್ಧಿ ಸುಧಾಕರ್ ಅವರಿಗೆ ಶುಭ ಕೋರುತ್ತೇನೆ. ಜನರ ನಿರೀಕ್ಷೆಯಂತೆ ಅವರು ಕೆಲಸ ಮಾಡುತ್ತಾರೆ. ಕ್ಷೇತ್ರದ ಜನರ ಧ್ವನಿಯಾಗುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ 11 ಕ್ಷೇತ್ರದಲ್ಲಿ 40ಕ್ಕಿಂತ ಕಡಿಮೆ ವಯಸ್ಸಿನವರಿಗೆ ಸ್ಪರ್ಧಿಸಲು ಅವಕಾಶ ದೊರೆತ್ತಿತ್ತು. ನಾಲ್ವರು ಯುವಕರು ಗೆಲುವು ಸಾಧಿಸಿರುವುದು ಉತ್ತಮ ಬೆಳವಣಿಗೆ. ಜನಪರ ಕಾರ್ಯಕ್ರಮಗಳ ಮೂಲಕ ಚುನಾವಣೆ ಎದುರಿಸಿದೆವು. ಮನೆ ಮನೆಗಳಿಗೆ ನಮ್ಮ ಕಾರ್ಯಕ್ರಮಗಳು ತಲುಪಿವೆ.
ಈ ಚುನಾವಣೆಯಲ್ಲಿ ಸ್ಪರ್ಧಿಸಲು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕಾಂಗ್ರೆಸ್ ವರಿಷ್ಠರಾದ ರಾಹುಲ್ ಗಾಂಧಿ ಅವರು ಯುವ ಜನಾಂಗಕ್ಕೆ ಆದ್ಯತೆ ಕಲ್ಪಿಸಿದ್ದರು. ಅವರಿಗೆ ನಾನು ಆಭಾರಿಯಾಗಿದ್ದೇನೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಜನರಿಗೆ ಧನ್ಯವಾದಗಳು. ಚಿಕ್ಕಬಳ್ಳಾಪುರದಲ್ಲಿ ಕಳೆದ ಐದಾರು ವರ್ಷಗಳಿಂದ ಯುವ ಕಾಂಗ್ರೆಸ್ ಜೊತೆಗೂಡಿ ಕೆಲಸ ಮಾಡುತ್ತಿದ್ದೆ. ಅತಿ ಹೆಚ್ಚು ಮತಗಳನ್ನು ಪಡೆಯಲು ಪ್ರಯತ್ನಿಸಿದ್ದೇವೆ. ಮುಂಬರುವ ದಿನಗಳಲ್ಲಿ ಚಿಕ್ಕಬಳ್ಳಾಪುರದಲ್ಲಿ ಹೂವಿನ ಮಾರುಕಟ್ಟೆ ಸ್ಥಾಪಿಸುವುದು ಸೇರಿದಂತೆ ರೈತರು, ಮಹಿಳೆಯರ ಪರವಾಗಿ ಕೆಲಸ ಮಾಡುತ್ತೇವೆ ಎಂದರು.
ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿ, ಜೆಡಿಎಸ್ ಮೈತ್ರಿ ಬಿಜೆಪಿಗೆ ಲಾಭ ತಂದಿದೆ. ಆದರೆ ಮತಗಳಿಕೆಯಲ್ಲಿ ನಾವೇ ಮುಂದಿದ್ದೇವೆ. ನಮ್ಮ ಅಭ್ಯರ್ಥಿ ಸೋತರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ನಾವಿರುತ್ತೇವೆ ಎಂದು ಹೇಳಿದರು.
ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಎಂ.ಎಸ್.ರಕ್ಷಾ ರಾಮಯ್ಯ ಸೋತು ಎನ್ ಡಿ ಎ ಅಭ್ಯರ್ಥಿ ಡಾ ಕೆ.ಸುಧಾಕರ್ ಗೆದ್ದಿದ್ದಾರೆ. ಸೋತಿದ್ದಕ್ಕೆ ಕಾರ್ಯಕರ್ತರು ದೃತಿಗೆಡಬೇಡಿ ನಿಮ್ಮೊಂದಿಗೆ ನಾವಿದ್ದೇವೆ. ಗೆದ್ದ ಡಾ.ಕೆ.ಸುಧಾಕರ್ ಜನರ ನಿರೀಕ್ಷೆಯಂತೆ ಕೆಲಸ ಮಾಡಲಿ ಅವರಿಗೆ ಶುಭಕೋರೋಣ.
ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ನಾವು ಸೋತರೂ ಐದು ವರ್ಷಗಳ ಹಿಂದಿನ ಚುನಾವಣೆಗೆ ಹೋಲಿಸಿದರೆ ಶೇಕಡಾವಾರು ಹೆಚ್ಚಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ಮತ ಈ ಬಾರಿ ಬಂದಿದೆ. ದೇಶದಲ್ಲಿ ನರೇಂದ್ರ ಮೋದಿ ನಾಗಾಲೋಟಕ್ಕೆ ಇಂಡಿಯಾ ಕೂಟವು ಬ್ರೇಕ್ ಹಾಕಿದೆ. ಅವರು ನಿರೀಕ್ಷಿಸಿದ್ದ ನಾನೂರು ಸೀಟು ಗೆಲ್ಲಲಾಗಿಲ್ಲ ಮಿತ್ರ ಪಕ್ಷಗಳು ಸೇರಿಕೊಂಡಂತೆ 292 ಸೀಟುಗಳು ಮಾತ್ರವೇ ಸಿಕ್ಕಿದೆ ಇದು ಎಚ್ಚರಿಕೆಯ ಗಂಟೆಯಾಗಿದೆ ನಿಮ್ಮ ಕುರ್ಚಿ ಶಾಶ್ವತವಲ್ಲ ಎಂದು ಮೈತ್ರಿ ಪಕ್ಷಕ್ಕೆ ಎಚ್ಚರಿಕೆ ನೀಡಿದರು.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾರನ ತೀರ್ಪಿಗೆ ತಲೆಬಾಗುತ್ತೇವೆ. ಮುಂದೆ ಬರೋ ಸ್ಥಳೀಯ ಚುನಾವಣೆಗಳು ಬಹಳಷ್ಟು ಬದಲಾಗಲಿದೆ. ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರು ದೃತಿಗೆಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.
ಪರಾಜಿತ ಅಭ್ಯರ್ಥಿ ಎಂ.ಎಸ್. ರಕ್ಷಾರಾಮಯ್ಯರ ತಂದೆ ಹಾಗೂ ವಿಧಾನಪರಿಷತ್ತಿನ ಸದಸ್ಯ ಎಂ.ಆರ್.ಸೀತಾರಾಮ್ ಮಾತನಾಡಿ, ಗೆಲ್ಲುವ ನಿರೀಕ್ಷೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಹಾಕಲಾಗಿತ್ತು. ಸಂಘಟನೆಯೂ ಉತ್ತಮವಾಗಿಯೇ ನಡೆದಿತ್ತು ಆದರೆ ನಮ್ಮ ಸೋಲಿಗೆ ಎಲ್ಲಿ ಏನು ಕಾರಣವಾಗಿದೆ ಅನ್ನೊದನ್ನ ಪರಾಮರ್ಷೆ ಮಾಡುತಿದ್ದೇವೆ ನಾವು ಸೋಲಿಗೆ ಯಾರನ್ನೂ ದೂಷಿಸುವುದಿಲ್ಲ. ನಮ್ಮ ರಕ್ಷಾ ರಾಮಯ್ಯಗೆ ಮತನೀಡಿದ ಮತದಾರರಿಗೆ, ಮತ ಕೊಡಿಸಿದ ಕಾರ್ಯಕರ್ತರು ಮುಖಂಡರುಗಳಿಗೆ ದನ್ಯವಾದಗಳನ್ನ ತಿಳಿಸುತ್ತೇನೆ ಎಂದರು.
ಈ ಪೈಕಿ ನಾಲ್ವರು ಯುವಕರು ಗೆಲುವು ಸಾಧಿಸಿದ್ದಾರೆ.ನಮ್ಮ ಜನಪರ ಕಾರ್ಯಕ್ರಮಗಳು ನಮ್ಮ ಕೈ ಹಿಡಿದಿದೆ.ಅಭಿವೃದ್ಧಿ ಯೋಜನೆಗಳನ್ನು ಇಟ್ಟುಕೊಂಡು ಚುನಾವಣೆ ಎದುರಿಸಿದ್ದೇವೆ. ಆದರೆ ನಾನು ಸೋತಿದ್ದಕ್ಕೆ ಕಾರ್ಯಕರ್ತರು ದೃತಿಗೆಡಬೇಕಾಗಿಲ್ಲ ದೈರ್ಯವಾಗಿರಿ ನಾನು ಯವಾಗಲು ನಿಮ್ಮೊಂದಿಗಿರುತ್ತೇನೆ ಮುಂದಿನ ಹೋರಾಟ ಇದ್ದೆ ಇರುತ್ತೆ . ನನಗೆ ಮತನೀಡಿದ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದರು
ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಮಾತನಾಡಿ, ಡಾ.ಕೆ.ಸುಧಾಕರ್ ಕಣ್ಣೀರಿಗೆ ಮಾರು ಹೋಗಿ ಜನ ಮತ ನೀಡಿದ್ದಾರೆ.ಒಂದು ವರ್ಷ ಅಜ್ಞಾತವಾಸದಿಂದ ಬಂದ ಸುಧಾಕರ್ ಗೆ ಕನಿಕರ ತೋರಿದ್ದಾರೆ.ಉತ್ತರ ಭಾರತದಲ್ಲಿ ನೋಡಿದ್ರೆ ಗೊತ್ತಾಗುತ್ತೆ ಬಿಜೆಪಿ ಬಗ್ಗೆ ಜನರ ವಿರೋಧ.ಬಿಜೆಪಿಯ ಬಗ್ಗೆ ಜನರಿಗೆ ಒಲವಿಲ್ಲ.
ಚುನಾವಣೆ ನಂತರ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಧ್ವೇಷ ರಾಜಕೀಯ ಶುರುವಾಗಿದೆ ಇದು ಬೇಡ. ಚುನಾವಣೆ ಮುಗಿದಿದೆ. ಜನರನ್ನು ರಾಜಕೀಯ ದ್ವೇಶಗಳಿಗೆ ಬಲಿ ಕೊಡ ಬೇಡಿ ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಕೇಶವರೆಡ್ಡಿ, ಮಾಜಿ ಶಾಸಕರಾದ ಕೆ.ಪಿ. ಬಚ್ಚೇಗೌಡರು, ಅನುಸೂಯಮ್ಮ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….