ನವದೆಹಲಿ, (ಜೂ.08): ಬಿಜೆಪಿಯ ನೂತನ ಸಂಸದೆ, ನಟಿ ಕಂಗನಾ ರನೌತ್‌ಗೆ ಸಿಐಎಸ್‌ಎಫ್ ಸಿಬ್ಬಂದಿ ಕಪಾಳ ಮೋಕ್ಷ ಮಾಡಿದ ಘಟನೆ ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ.
ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿಯ ನೂತನ ಸಂಸದೆ ಹಾಗೂ ನಟಿ ಕಂಗನಾ ರನೌತ್‌ಗೆ ಕಪಾಳ ಮೋಕ್ಷ ಮಾಡಿದ ಬಗ್ಗೆ ಯಾವುದೇ ಅಳುಕು ತೋರದ ಮಹಿಳಾ ಸಿಐಎಸ್‌ಎಫ್ ಜವಾನ ಕುಲ್ವಿಂದರ್ ಕೌರ್ ತಾನು ಮಾಡಿದ ಕೃತ್ಯದ ಬಗ್ಗೆ ಸಮರ್ಥನೆ ನೀಡಿದ್ದು, ರೈತ ಚಳವಳಿಯಲ್ಲಿ ತೊಡಗಿರುವ ಮಹಿಳೆಯರ ಬಗ್ಗೆ ಕಂಗನಾ ರನೌತ್ ಅವಹೇಳನಕಾರಿಯಾಗಿ ಮಾತನಾಡಿದ್ದರು.
ಕೇಂದ್ರ ಸರ್ಕಾರ ಜಾರಿ ತರಲು ಹೊರಟಿದ್ದ ರೈತ ವಿರೋಧಿ ಕಾಯ್ದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ನಡೆದಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರೈತ ಮಹಿಳೆಯರನ್ನು ಅವರು 100 ರೂಪಾಯಿಗೆ ಇಂತಹ ಚಳವಳಿಗಳಲ್ಲಿ ಕುಳಿತುಕೊಳ್ಳುತ್ತಾರೆ ಎಂದು ಹೇಳಿದ್ದರು.
ಆ ಹೋರಾಟದಲ್ಲಿ ನನ್ನ ತಾಯಿಯೂ ಇದ್ದರು. ಹೀಗೆ ರೈತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಕ್ಕೆ ನನ್ನೊಳಗೆ ಆಕ್ರೋಶ ಇತ್ತು ಎಂದು ತಾನು ಕಪಾಳಮೋಕ್ಷ ಮಾಡಿದ್ದನ್ನು ಸಮರ್ಥಿಸಿಕೊಂಡಿದ್ದಾರೆ.
ದೆಹಲಿಗೆ ಹೋಗಲು ಚಂಡೀಗಢ ವಿಮಾನ ನಿಲ್ದಾಣಕ್ಕೆ ಬಂದಿದ್ದ ಕಂಗನಾಗೆ ಭದ್ರತಾ ತಪಾಸಣೆ ವೇಳೆ ಮಹಿಳಾ ಸಿಐಎಸ್‌ಎಫ್ ಸಿಬ್ಬಂದಿ ಕುಲ್ವಿಂದರ್ ಕೌರ್ ಕಪಾಳಮೋಕ್ಷ ಮಾಡಿದ್ದರು.
ಈ ಆರೋಪದ ಮೇಲೆ ಮಹಿಳಾ ಸಿಐಎಸ್‌ಎಫ್ ಜವಾನ ಕುಲ್ವಿಂದರ್ ಕೌರ್ ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿದ್ದು, ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿಯ ನೂತನ ಸಂಸದೆ ಹಾಗೂ ನಟಿ ಕಂಗನಾ ರನೌತ್ ಜೊತೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ದುರ್ವರ್ತನೆ ತೋರಿದ ಆರೋಪದ ಮೇಲೆ ಆಕೆಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಆದರೆ. ರೈತ ಪರ ಸಂಘಟನೆಗಳು ಯುವತಿ ಪರ ಬೆಂಬಲಕ್ಕೆ ನಿಂತಿದ್ದು, ಪ್ರತಿಭಟನೆ ನಡೆಸಲು ಮುಂದಾಗಿವೆ.
ದೇಶದಾದ್ಯಂತ ಕಂಗನಾಗೆ ಕಪಾಳಮೋಕ್ಷ ಮಾಡಿದ ಘಟನೆಯ ಕುರಿತು ಪರ ವಿರೋಧ ಚರ್ಚೆಯೂ ನಡೆಯುತ್ತಿದೆ. ಒಂದಷ್ಟು ಜನ ಕಂಗನಾಗೆ ಹೊಡೆದಿದ್ದು ಸರಿ ಅಂದ್ರೆ, ಮತ್ತೊಂದಷ್ಟು ಜನ ಕಾನೂನು ಕೈಗೆತ್ತಿಕೊಂಡಿದ್ದು ತಪ್ಪು ಅಂತಾ ಹೇಳ್ತಿದ್ದಾರೆ.
ಈ ಎಲ್ಲದರ ನಡುವೆ, ಕಂಗಾನಾಗೆ ಕಪಾಳ ಮೋಕ್ಷ ಮಾಡಿದ್ದ ಯುವತಿ ಕುಲ್ವಿಂದರ್ ಕೌರ್ ಟ್ವಿಟ್ ಮಾಡಿದ್ದು, ನನ್ನ ತಾಯಿಯ ಗೌರವಕ್ಕಾಗಿ ಅಂತಹ ಸಾವಿರಾರು ಉದ್ಯೋಗಗಳನ್ನು ಕಳೆದುಕೊಳ್ಳಲು ನಾನು ಸಿದ್ಧಳಿದ್ದೇನೆ ಎಂದು ಹೇಳಿದ್ದಾರೆ.
ಅಲ್ಲದೆ, ಅಲ್ಲದೆ ಮತ್ತೊಂದು ಟ್ವಿಟ್‌ನಲ್ಲಿ ನನಗೆ ಕೆಲಸದ ಬೆದರಿಕೆ ಹಾಕಬೇಡಿ. ನಾನು ರೈತನ ಮಗಳು, ನನ್ನ ಜೀವನದಲ್ಲಿ ಹೇಗೆ ಚೆನ್ನಾಗಿ ಸಂಪಾದಿಸಬೇಕು ಎಂದು ನನಗೆ ತಿಳಿದಿದೆ.
ನನ್ನಲ್ಲಿ ಎಷ್ಟು ಸಾಮರ್ಥ್ಯವಿದೆ ಎಂದರೆ ನಾನು ಕಷ್ಟಪಟ್ಟು ಮತ್ತೆ ಉದ್ಯೋಗವನ್ನು ಪಡೆಯಬಹುದು ಎಂದು ಹೇಳಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….