ದೆಹಲಿ, (ಜೂ.08); ನಾಳೆ (ಭಾನುವಾರ) ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಸಮಾರಂಭಕ್ಕೆ 8,000 ವಿಶೇಷ ಅತಿಥಿಗಳನ್ನು ಆಹ್ವಾನ ನೀಡಲಾಗಿದ್ದು, ಈ ಪೈಕಿ ದಕ್ಷಿಣ ರೈಲ್ವೇಯ ಚೆನ್ನೈ ವಿಭಾಗದ ಹಿರಿಯ ಸಹಾಯಕ ಲೋಕೋ ಪೈಲಟ್ ಐಶ್ವರ್ಯ ಮೆನನ್ ಅವರಿಗೂ ಆಹ್ವಾನ ನೀಡಲಾಗಿದೆ.
ಪ್ರಸ್ತುತ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಲ್ಲಿ ಲೋಕೋ ಪೈಲಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಐಶ್ವರ್ಯ ಅವರು, ವಿವಿಧ ರೈಲುಗಳನ್ನು ಪ್ರಾಯೋಗಿಕವಾಗಿ ಸುಮಾರು 2 ಲಕ್ಷಕ್ಕೂ ಹೆಚ್ಚು ಫುಟ್‍ಪ್ಲೇಟ್ ಗಂಟೆಗಳನ್ನು ಪೂರ್ಣಗೊಳಿಸಿದ್ದಾರೆ. ಸದ್ಯ ಅವರು ಚೆನ್ನೈ-ವಿಜಯವಾಡ ಹಾಗೂ ಚೆನ್ನೈ-ಕೊಯಮ್ಮತ್ತೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಆಗಿರುವ ಸುರೇಖಾ ಯಾದವ್ ಕೂಡ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್-ಸೋಲಾಪುರ ವಂದೇ ಭಾರತ್ ರೈಲನ್ನು ಸುರೇಖಾ ಪೈಲಟ್ ಮಾಡುತ್ತಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….