ಬೆಂಗಳೂರು, (ಜೂ.08); ಸ್ಯಾಂಡಲ್ ವುಡ್ ಸ್ಟಾರ್ ಜೋಡಿ, ಚಂದನವನದ ಚಂದದ ಗೊಂಬೆಗಳಂತ ಜೋಡಿ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಕಾನೂನು ಬದ್ಧವಾಗಿ ವಿಚ್ಛೇದನ ಪಡೆದುಕೊಂಡಿದ್ದಾರೆ. ಆ ಬಳಿಕ ಅವರಿಬ್ಬರೂ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ.
“ಈ ದಿನ, ನಿವೇದಿತಾ ಗೌಡ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನು ಕಾನೂನು ಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೊಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನ ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲೂ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು.ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ.ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ ಪರಸ್ಪರ ಒಬ್ಬರನೊಬ್ಬರು ಗೌರವಿಸುತ್ತೆವೆ. ಸೂಕ್ಷ್ಮ ಪರಿಗಣನೆಗಾಗಿ ಎಲ್ಲರಿಗೂ ಧನ್ಯವಾದಗಳು” ಎಂದು ಚಂದನ್ ಶೆಟ್ಟಿ ಬರೆದುಕೊಂಡಿದ್ದಾರೆ.
ಅದೇ ರೀತಿಯಲ್ಲಿ ನಿವೇದಿತಾ ಗೌಡ ಸಹ.. “ಈ ದಿನ, ಚಂದನ್ ಶೆಟ್ಟಿ – ನಾನು, ನಮ್ಮ ದಾಂಪತ್ಯ ಜೀವನವನ್ನು ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೊಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನ ಗೌರವಿಸಲು ಕೋರುತ್ತೇವೆ.
ಪ್ರತಿ ಸಂದರ್ಭದಲ್ಲೂ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು. ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ, ಪರಸ್ಪರ ಒಬ್ಬರನೊಬ್ಬರು ಗೌರವಿಸುತ್ತೆವೆ. ಸೂಕ್ಷ್ಮಪರಿಗಣನೆಗಾಗಿ ಎಲ್ಲರಿಗೂ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
ಚಂದನ್ ಶೆಟ್ಟಿ, ನಿವೇದಿತಾ ಗೌಡ ಡಿವೋರ್ಸ್: ಸ್ಯಾಂಡಲ್ ವುಡ್ ನ ಕ್ಯೂಟ್ ಕಪಲ್ಸ್ ಎಂದೇ ಖ್ಯಾತಿ ಪಡೆದಿರುವ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ದಂಪತಿ ಬಗ್ಗೆ ಸಿನಿಮಾ ವಲಯದಲ್ಲಿ ಹೊಸದೊಂದು ಸುದ್ದಿ ಸದ್ದು ಮಾಡುತ್ತಿದೆ.
ಬಿಗ್ಬಾಸ್ ಸೀಸನ್ 5ರ ಸ್ಪರ್ಧಿಗಳಾದ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ 2020 ಫೆಬ್ರವರಿ 26 ರಂದು ಹಸೆಮಣೆ ಏರಿದ್ದರು. ಆದರೆ ಇದೀಗ ದಿಢೀರ್ ಎಂದು ಡಿವೋರ್ಸ್ ಮೊರೆ ಹೋಗಿದ್ದಾರೆ.
ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಪುರಸ್ಕರಿಸಿದ್ದು, ಚಂದನ್ ಶೆಟ್ಟಿ, ನಿವೇದಿತಾ ಗೌಡ ವಿಚ್ಛೇದನ ಮಂಜೂರು ಮಾಡಿ ಬೆಂಗಳೂರು ಕೌಟುಂಬಿಕ ನ್ಯಾಯಾಲಯ ಆದೇಶ ಹೊರಡಿಸಿದೆ.
ಈ ಮೂಲಕ ರ್‍ಯಾಪರ್ ಚಂದನ್ ಶೆಟ್ಟಿ- ನಿವೇದಿತಾ ಗೌಡ ಅವರ ನಾಲ್ಕು ವರ್ಷದ ದಾಂಪತ್ಯ ಅಂತ್ಯವಾಗಿದೆ.
ಚಂದನ್ ಹಾಗೂ ನಿವೇದಿತಾ ವಿಚ್ಛೇದನ ಅರ್ಜಿ ಇಂದು (ಜೂನ್ 07) ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್ ಜ್ಯೋತಿ ಶ್ರೀ ಅವರು ಬೆಂಚ್ ಮುಂದೆ ಬಂದಿತ್ತು. ಆದ್ರೆ, ಅರ್ಜಿಯನ್ನು ವಿಚಾರಣೆ ಮಾಡುವ ಮೊದಲು ಕಾನೂನು ಪ್ರಕ್ರಿಯೆಯಂತೆ ಮಿಡಿಯೇಷನ್ ಪ್ರಕ್ರಿಯೆ ಒಳಪಡಬೇಕು. ಅದರಂತೆ ಚಂದನ್ ಹಾಗೂ ನಿವೇದಿತಾ ಅವರಿಗೆ ಕೌಟುಂಬಿಕ ಕೋರ್ಟ್‌ನ ಮಿಡಿಯೇಷನ್ ಸೆಂಟರ್ನಲ್ಲಿ ಮಾತುಕತೆ ನಡೆಸಲಾಯಿತು. ವಿಚ್ಛೇದನ ಪ್ರಕ್ರಿಯೆ ಮೊದಲು ಈ ಸಂಧಾನ ನಡೆಯಲೇಬೇಕು. ಅಂತೆಯೇ ಸಂಧಾನಕಾರರು ಮಾತುಕತೆ ನಡೆಸಿದಾಗ ಇಬ್ಬರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿಲ್ಲ. ಹೀಗಾಗಿ ಅಂತಿಮವಾಗಿ ಕೋರ್ಟ್, ವಿಚ್ಛೇದನ ನೀಡಿ ಆದೇಶಿಸಿದೆ.
ಈ ದಂಪತಿಯ ವಿಚ್ಛೇದನ ಅಚ್ಚರಿಗೆ ಕಾರಣವಾಗಿದೆ. ಯಾಕಂದ್ರೆ ಯಾವುದೇ ದಂಪತಿ ವಿಚ್ಛೇದನ ಅರ್ಜಿ ಸಲ್ಲಿಸಿದ್ದರೆ ತಿಂಗಳಾನುಗಟ್ಟಲೇ, ವರ್ಷಗಟ್ಟಲೇ ವಿಚಾರಣೆ ಕೋರ್ಟ್ನಲ್ಲಿ ನಡೆಯುತ್ತೆ. ಆದರೆ ಚಂದನ್ ಶೆಟ್ಟಿ ದಂಪತಿ ವಿಚ್ಛೇದನ ಮಾತ್ರ ಒಂದೇ ದಿನದಲ್ಲಿ ಆಗಿದೆ.
ಕಾರಣ ಇವರಿಬ್ಬರು ನಗು ನಗುತ್ತಲೇ, ಒಪ್ಪಂದದ ಮೇರೆಗೆಯಿಂದಲೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ಕೋರ್ಟ್ಗೆ ಹಾಜರಾದ ವೇಳೆ ಈ ಜೋಡಿ ಅಕ್ಕಪಕ್ಕದಲ್ಲೇ ಇತ್ತು. ಹೀಗಾಗಿ ಬೇಗನೇ ವಿಚ್ಛೇದನ ಮಂಜೂರಾಗಲು ಪ್ರಮುಖ ಕಾರಣ ಎನ್ನಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….