Site icon Harithalekhani

ರಾಜ್ಯದಲ್ಲಿನ ನಕಲಿ ವೈದ್ಯರಿಗೆ ಕಾದಿದೆ ಕಂಟಕ; ಸರ್ಕಾರದಿಂದ ದಿಟ್ಟ ಹೆಜ್ಜೆ

ಬೆಂಗಳೂರು, (ಜೂ.08); ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಈ ಸಮಸ್ಯೆ ನೀಗಿಸಲು ಸರ್ಕಾರ ದಿಟ್ಟ ನಿರ್ಧಾರವೊಂದನ್ನು ಕೈಗೊಂಡಿದೆ.

ನಕಲಿ ವೈದ್ಯರ ಹೆಡೆಮುರಿ ಕಟ್ಟಲು ಆರೋಗ್ಯ ಇಲಾಖೆಯು ಆದೇಶವನ್ನು ಹೊರಡಿಸಿದ್ದು ಇದರನ್ವಯ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್‌ಗಳು ತಮ್ಮ KPME ನೋಂದಣಿ ಸಂಖ್ಯೆ, ಆಸ್ಪತ್ರೆಯ ಹೆಸರು ಮತ್ತು ಮಾಲೀಕರ ಹೆಸರನ್ನು ಕಟ್ಟಡದ ಮುಂಭಾಗದಲ್ಲಿ ಪ್ರದರ್ಶಿಸವುದು ಕಡ್ಡಾಯಗೊಳಿಸಿ ಆದೇಶಿಸಿದೆ.

ಇಷ್ಟೇ ಅಲ್ಲದೆ, ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದಿಕ್ ಆಸ್ಪತ್ರೆಗಳು ಹಸಿರು ಬಣ್ಣದ ಬೋರ್ಡ್ ಬಳಸುವ ಮೂಲಕ ಬಣ್ಣ ಸಂಹಿತೆಯನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ಆದೇಶಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಕಲಿ ವೈದ್ಯಕೀಯ ವೃತ್ತಿಯನ್ನು ಬೇರುಸಮೇತ ಕಿತ್ತೊಗೆಯಲು ಆರೋಗ್ಯ ಇಲಾಖೆಯು ಆದೇಶವನ್ನು ಹೊರಡಿಸಿದ್ದು ಇದರನ್ವಯ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್’ಗಳು ತಮ್ಮ KPME ನೋಂದಣಿ ಸಂಖ್ಯೆ, ಆಸ್ಪತ್ರೆಯ ಹೆಸರು ಮತ್ತು ಮಾಲೀಕರ ಹೆಸರನ್ನು ಕಟ್ಟಡದ ಮುಂಭಾಗದಲ್ಲಿ ಪ್ರದರ್ಶಿಸವುದು ಕಡ್ಡಾಯವಾಗಿದೆ. ಇಷ್ಟೇ ಅಲ್ಲದೆ, ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದಿಕ್ ಆಸ್ಪತ್ರೆಗಳು ಹಸಿರು ಬಣ್ಣದ ಬೋರ್ಡ್ ಬಳಸುವ ಮೂಲಕ ಬಣ್ಣ ಸಂಹಿತೆಯನ್ನು ಕಡ್ಡಾಯವಾಗಿ ಅನುಸರಿಸಬೇಕು. 

ಖಾಸಗಿ ವೈದ್ಯಕೀಯ ಆಸ್ಪತ್ರೆಗಳು ಈ ನಿಯಮಗಳನ್ನು ಅನುಸರಿಸುವಲ್ಲಿ ವಿಫಲವಾದಲ್ಲಿ KPME ತಿದ್ದುಪಡಿ ಕಾಯಿದೆ 2017 ರ ಸೆಕ್ಷನ್ 19(5) ರ ಅನ್ವಯ ಕಠಿಣ ಕಾನೂನುಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ವಿವರಗಳಿಗಾಗಿ ದಯವಿಟ್ಟು ಸುತ್ತೋಲೆಯನ್ನು ಪರಾಮರ್ಶಿಸಿ.

ನಕಲಿ ಮತ್ತು ಅರ್ಹತೆ ಹೊಂದಿಲ್ಲದ ವೈದ್ಯರು ಸಮಾಜಕ್ಕೆ ಕಂಟಕರಾಗಿದ್ದು ರೋಗಿಗಳ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದ್ದಾರೆ. ನಮ್ಮ ಸರ್ಕಾರವು ರೋಗಿಗಳ ಸುರಕ್ಷತೆಗೆ ಮತ್ತು ಉತ್ತಮ ಆರೋಗ್ಯ ಸೇವೆ ಒದಗಿಸಲು ಬದ್ಧವಾಗಿದೆ ಎಂದಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

Exit mobile version