ಅಮರಾವತಿ, (ಜೂ.14): ಆಂಧ್ರಪ್ರದೇಶದ ಉಪಮುಖ್ಯಮಂತ್ರಿಯಾಗಿ ಜನಸೇನಾ ಪಕ್ಷದ ಮುಖ್ಯಸ್ಥ ಹಾಗೂ ಖ್ಯಾತ ನಟ ಪವನ್ ಕಲ್ಯಾಣ್ ಆಯ್ಕೆಯಾಗಿದ್ದಾರೆ.
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಚಂದ್ರಬಾಬು ನಾಯ್ಡು ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಪವನ್ ಕಲ್ಯಾಣ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನದ ಜೊತೆಗೆ ಪಂಚಾಯತ್‌ರಾಜ್, ಗ್ರಾಮೀಣಾಭಿವೃದ್ಧಿ, ಪರಿಸರ ಮತ್ತು ಅರಣ್ಯ ಖಾತೆಗಳನ್ನು ನೀಡಲಾಗಿದೆ.
ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ಜೆಪಿ ನಡ್ಡಾ, ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂದೆ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….