ಲೂಟಿಕೋರ, ಭ್ರಷ್ಟ, ಜನವಿರೋಧಿ ಬಿಜೆಪಿ ನಾಯಕರಿಗೆ ಪ್ರಶ್ನಿಸುವ ಯೋಗ್ಯತೆ ಎಲ್ಲಿದೆ: ಸಿಎಂ ಸಿದ್ದರಾಮಯ್ಯ ಗರಂ

ಬೆಂಗಳೂರು, (ಜೂ 17): ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ ಸಮೇತ ವಿವರಿಸಿದರು. 

ಗೃಹ ಕಚೇರಿ ಕೃಷ್ಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ತೆರಿಗೆ ಹೆಚ್ಚಳದ ಅನಿವಾರ್ಯತೆಯನ್ನು ಕೇಂದ್ರದ ಮೋದಿ ಸರ್ಕಾರ ಹೇಗೆ ಸೃಷ್ಟಿಸಿತು, ರಾಜ್ಯದ ಪಾಲಿನ ಹಣವನ್ನು ಕೊಡದೇ ಇರುವುದರಿಂದ ಸೃಷ್ಟಿ ಆಗಿರುವ ಪರಿಸ್ಥಿತಿಯನ್ನು ವಿವರಿಸಿದರು. 

2015 ರ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಅರ್ಧಕ್ಕರ್ಧ ಕಡಿಮೆ ಆದಾಗಲೂ ಅವರ ಲಾಭವನ್ನು ದೇಶದ ಜನರಿಗೆ ನೀಡದೆ ಮೋದಿ ಸರ್ಕಾರ ಇಂಧನ ಬೆಲೆಯನ್ನು ನಿರಂತರವಾಗಿ ಏರಿಸುತ್ತಾ ಹೋಗಿದ್ದರ ಅಂಕಿ ಅಂಶಗಳನ್ನು ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು. 

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ ಹೆಚ್ಚಳದಿಂದ ಸಂಗ್ರಹವಾಗುವ ಅಂದಾಜು ಮೂರು ಸಾವಿರ ಕೋಟಿ ರೂಪಾಯಿಗಳು ರಾಜ್ಯದ ಜಾನೆಗೆ ಸಂದಾಯವಾಗುತ್ತದೆ, ಆ ಹಣ ಜನರ ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗವಾಗುತ್ತದೆ ಅದು ನಮ್ಮ ಜೇಬಿಗೆ ಹೋಗುವುದಿಲ್ಲ ಎಂದರು. 

ಹಿಂದಿನ ಬಿಜೆಪಿ ಸರ್ಕಾರದಲ್ಲಿ ರಾಜ್ಯದ ಪ್ರತಿಯೊಂದು ಯೋಜನೆಗಳಲ್ಲಿಯೂ 40% ತೆರಿಗೆ ಹಣ ಬಿಜೆಪಿ ನಾಯಕರ ಜೇಬಿಗೆ ಹೋಗುತ್ತಿತ್ತು. ಈ ರೀತಿ ಅಂದಾಜು ಒಂದುವರೆ ಲಕ್ಷ ಕೋಟಿ ರೂಪಾಯಿಗಳಷ್ಟು  ರಾಜ್ಯದ ಜನರ ಬೆವರಗಳಿಕೆಯ ತೆರಿಗೆ ಹಣವನ್ನು ಈ ಬಿಜೆಪಿ ನಾಯಕರ ತಮ್ಮ ಜೇಬಿಗೆ  ತುಂಬಿಸಿಕೊಂಡಿದ್ದಾರೆ ಎಂದರು. 

ಇಂತಹ ಲೂಟಿಕೋರ, ಭ್ರಷ್ಟ, ಜನವಿರೋಧಿ ಬಿಜೆಪಿ ನಾಯಕರಿಗೆ ಜನಕಲ್ಯಾಣಕ್ಕಾಗಿ ಸ್ಪಲ್ಪ ಪ್ರಮಾಣದ ತೆರಿಗೆ ಹೆಚ್ಚಿಸಿದ್ದನ್ನು ಪ್ರಶ್ನಿಸುವ ಯೋಗ್ಯತೆ ಎಲ್ಲಿದೆ ಎಂದು ಪ್ರಶ್ನಿಸಿದರು. 

ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 60 ಸಾವಿರ ಕೋಟಿ ರೂಪಾಯಿಗಳನ್ನು ವ್ಯಯ ಮಾಡುತ್ತಿದೆ. ಇಷ್ಟೂ ಹಣ ರಾಜ್ಯದ  ಎಲ್ಲಾ ಜಾತಿ-ಸಮುದಾಯಗಳ ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೋಗುತ್ತದೆ. ಸದ್ಯದ ಅಲ್ಪ ಪ್ರಮಾಣದ ಡೀಸೆಲ್-ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ನಮಗೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3 ಸಾವಿರ ಕೋಟಿ ರೂಪಾಯಿ ಮಾತ್ರ. ಆದರೆ ಗ್ಯಾರಂಟಿಗಳಿಗೆ ನಾವು ಕೊಡುತ್ತಿರುವುದು 60 ಸಾವಿರ ಕೋಟಿ ರೂಪಾಯಿ. ಹೀಗಾಗಿ ಆರ್.ಅಶೋಕ್ ಅವರ ಪೆದ್ದುತನದ ಮಾತುಗಳಿಗೆ ಅರ್ಥವಿಲ್ಲ. ಆರ್.ಅಶೋಕ್ ಗೆ ಇದೆಲ್ಲಾ ಅರ್ಥ ಆಗಲ್ಲ , ಅರ್ಥ ಮಾಡಿಕೊಳ್ಳುವ ಸಾಮರ್ಥ್ಯವೂ ಇಲ್ಲ ಎಂದು ವ್ಯಂಗ್ಯವಾಡಿದರು.

ಸುದ್ದಿಗೋಷ್ಠಿಯ ಇತರೆ ಹೈಲೈಟ್ಸ್; ಜನರಿಗೆ ಹೆಚ್ಚಿನ ಹೊರೆಯಾಗದ ರೀತಿಯಲ್ಲಿ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲ ಕ್ರೋಢೀಕರಣದ ಉದ್ದೇಶದೊಂದಿಗೆ ಪೆಟ್ರೋಲ್‌, ಡೀಸೆಲ್‌ ಮಾರಾಟ ತೆರಿಗೆಯಲ್ಲಿ 3 ರೂ. ಗಳಷ್ಟು ಹೆಚ್ಚಿಸಲಾಗಿದೆ

ಅವರು ಇಂದು ಗೃಹ  ರಾಜ್ಯ ಸರ್ಕಾರ 3 ರೂ. ಗಳಷ್ಟು ಪೆಟ್ರೋಲ್‌ ಡೀಸೆಲ್‌ ದರ ಏರಿಕೆ ಮಾಡಿದ್ದರೂ, ದಕ್ಷಿಣದ ಇತರ ರಾಜ್ಯಗಳು ಹಾಗೂ ಬಿಜೆಪಿ ಆಡಳಿತ ಇರುವ ರಾಜ್ಯಗಳಿಗಿಂತ ಕಡಿಮೆ ಇದೆ ಎಂದು ಅಂಕಿ-ಅಂಶಗಳೊಂದಿಗೆ ಸ್ಪಷ್ಟ ಪಡಿಸಿದರು.

ಕೇಂದ್ರ ಸರ್ಕಾರ ಜಿ.ಎಸ್.ಟಿ. ವ್ಯವಸ್ಥೆ ಜಾರಿಗೊಳಿಸಿದ ನಂತರ ರಾಜ್ಯ ಸರ್ಕಾರಗಳ ಸಂಪನ್ಮೂಲ ಕ್ರೋಢೀಕರಣಕ್ಕೆ ಇರುವ ಅವಕಾಶ ಸೀಮಿತಗೊಂಡಿದೆ. ಕೇಂದ್ರ ಸರ್ಕಾರ ಜಿ.ಎಸ್.ಟಿ. , ಆದಾಯ ತೆರಿಗೆ, ಕೇಂದ್ರ ಅಬಕಾರಿ ಸುಂಕ ಮೊದಲಾದ ಮೂಲಗಳಿಂದ ತೆರಿಗೆ ಸಂಗ್ರಹಿಸುತ್ತದೆ. ರಾಜ್ಯ ಸರ್ಕಾರಕ್ಕೆ ಕೇವಲ ನೋಂದಣಿ ಮತ್ತು ಮುದ್ರಾಂಕ ಶುಲ್ಕ, ವಾಹನ ತೆರಿಗೆ, ಪೆಟ್ರೋಲ್‌, ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಹಾಗೂ ಮದ್ಯದ ಮೇಲಿನ ಮಾರಾಟ ತೆರಿಗೆ ಹೊರತು ಪಡಿಸಿ ಯಾವುದೇ ಮೂಲಗಳಿಲ್ಲ. 

ಈ ಹಿನ್ನೆಲೆಯಲ್ಲಿ ಇತರ ರಾಜ್ಯಗಳ ಪೆಟ್ರೋಲ್‌ ಡೀಸೆಲ್‌ ಬೆಲೆಗೆ ಹೋಲಿಸಿದರೆ ರಾಜ್ಯದ ದರಗಳು ಕಡಿಮೆ ಇರುವುದು ಗಮನಿಸಿ, ರಾಜ್ಯ ಸರ್ಕಾರ ಅಲ್ಪ ಪ್ರಮಾಣದ ತೆರಿಗೆ ಹೆಚ್ಚಳ ಮಾಡಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟ ಪಡಿಸಿದರು.

ಈ ಬಗ್ಗೆ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಅವರಿಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕು ಎಲ್ಲಿದೆ ಎಂದು ಪ್ರಶ್ನಿಸಿದರು. ಡಾ. ಮನಮೋಹನ್‌ ಸಿಂಗ್‌ ಅವರ ಅವಧಿಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ 113 ಡಾಲರ್‌ ಇತ್ತು. 2015 ರಲ್ಲಿ ಈ ಬೆಲೆ ಅರ್ಧಕ್ಕರ್ಧ ಕಡಿಮೆಯಾದರೂ, ಬೆಲೆ ಇಳಿಸಿ, ಜನರ ಹೊರೆ ಕಡಿಮೆ ಮಾಡುವ ಕಾಳಜಿಯನ್ನು ನರೇಂದ್ರ ಮೋದಿಯವರು ತೋರಲಿಲ್ಲ. ಬಿಜೆಪಿಯವರು ಯಾರ ವಿರುದ್ಧ ಹೋರಾಡಬೇಕು ಎಂದು ಪ್ರಶ್ನಿಸಿದರು?

ಕರ್ನಾಟಕ ರಾಜ್ಯಕ್ಕೆ ಬಿಜೆಪಿ ಸರ್ಕಾರದಿಂದ ನಿರಂತರ ಅನ್ಯಾಯವಾಗುತ್ತ ಬಂದಿದ್ದರೂ, ಬಿಜೆಪಿಯವರು ದನಿ ಎತ್ತಿಲ್ಲ? ತೆರಿಗೆ ಅನ್ಯಾಯವಾದಾಗ ಸಂಸದರು ಈ ವಿಷಯದ ಕುರಿತು ಮಾತನಾಡಿಲ್ಲ; ರಾಜ್ಯಕ್ಕೆ 15ನೇ ಹಣಕಾಸು ಆಯೋಗವು ವಿಶೇಷ ಅನುದಾನ ನೀಡುವಂತ ಶಿಫಾರಸು ಮಾಡಿದ್ದರೂ, ಕೇಂದ್ರ ಸರ್ಕಾರ ನೀಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಆಯವ್ಯಯದಲ್ಲಿ ನಿರ್ಮಲಾ ಸೀತಾರಾಮನ್‌ ಅವರು 5,000 ಕೋಟಿ ರೂ. ಒದಗಿಸುವುದಾಗಿ ಘೋಷಿಸಿದರೂ, ಬಿಡಿಗಾಸೂ ನೀಡಿಲ್ಲ. ಈ ವಿಷಯಗಳ ಕುರಿತು ಬಿಜೆಪಿಯವರು ದನಿ ಎತ್ತಿದ್ದಾರೆಯೇ? ಬಿಜೆಪಿಯು ಬಡವರು, ದಲಿತರ ವಿರೋಧಿ ಧೋರಣೆ ಹೊಂದಿದೆ ಎಂದು ಅವರು ನುಡಿದರು.

ಬರಗಾಲದ ಬಗ್ಗೆ ಪರಿಹಾರ ತೆಗೆದುಕೊಳ್ಳಲು ಕೋರ್ಟಿಗೆ ಹೋಗಬೇಕಾಗಿ ಬಂತು. ಕೋರ್ಟು ಸೂಚನೆ ನೀಡಿದ ನಂತರ 18 ಸಾವಿರ ಕೋಟಿ ಕೇಳಿದರೆ 3454 ಕೋಟಿ ರೂ. ಪರಿಹಾರ ನೀಡಿದ್ದಾರೆ.

ಬಿಜೆಪಿಯವರು ಬಡವರು, ದಲಿತರು, ಜನಸಾಮಾನ್ಯರ ಕಾರ್ಯಕ್ರಮಗಳ ಕಲ್ಯಾಣ ಕಾರ್ಯಕ್ರಮಗಳಿಗೆ ವಿರುದ್ಧವಿದ್ದಾರೆ. ಬಸ್‌ನಲ್ಲಿ ಉಚಿತ ಪ್ರಯಾಣ, ತಿಂಗಳಿಗೆ ಎರಡು ಸಾವಿರ ನೀಡಿದರೆ ಅವರ ಆರ್ಥಿಕ ಶಕ್ತಿ ಹೆಚ್ಚಾಗುವುದಿಲ್ಲವೇ? ಉಚಿತ ವಿದ್ಯುತ್‌ ನೀಡಿದರೆ ಅವರಿಗೆ ಉಳಿತಾಯವಾಗುವುದಿಲ್ಲವೇ? ಹೆಚ್ಚುವರಿ ಅಕ್ಕಿ ಕೇಳಿದರೆ, ಕೊಟ್ಟಿಲ್ಲ. ಯಾರಾದರೂ ಮಾತಾಡಿದರೇ? ಎಂದು ಪ್ರಶ್ನಿಸಿದರು.

ಈ ಬೆಲೆ ಏರಿಕೆಯಿಂದ ಸುಮಾರು 3,000  ಕೋಟಿ ರೂ. ಸಂಪನ್ಮೂಲ ದೊರೆಯಲಿದೆ. ಗ್ಯಾರಂಟಿ ಯೋಜನೆಗಳಿಗೆ 60000 ಕೋಟಿ ರೂ. ಅಗತ್ಯವಿದೆ. ಸರ್ಕಾರ ಪಾಪರ್‌ ಆಗಿದೆ ಎಂದು ವಿರೋಧ ಪಕ್ಷದ ನಾಯಕರು ಹೇಗೆ ಹೇಳುತ್ತಾರೆ? ನಾವು ಯಾರದ್ದಾದರೂ ಸಂಬಳ ನಿಲ್ಲಿಸಿದ್ದೇವೆಯೇ? ಆಯವ್ಯಯದಲ್ಲಿ ಘೋಷಿಸಿದ ಕಾರ್ಯಕ್ರಮಗಳಿಗೆ ಅನುದಾನ ಒದಗಿಸದೇ ಸ್ಥಗಿತ ಗೊಳಿಸಿದ್ದೇವೆಯೇ ಎಂದು ಅವರು ಪ್ರಶ್ನಿಸಿದರು.

ತೈಲ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿಯವರು, ಬೆಲೆ ಏರಿಕೆಯ ಹೊರತಾಗಿಯೂ ರಾಜ್ಯದ ಪೆಟ್ರೋಲ್‌, ಡೀಸೆಲ್‌ ಬೆಲೆ ನೆರೆಯ ರಾಜ್ಯಗಳು ಹಾಗೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ ಕಡಿಮೆ ಎಂದು ವಿವರಿಸಿದರು.

ಈ ಬೆಲೆ ಏರಿಕೆಯಿಂದ 3000 ಕೋಟಿ ಆದಾಯ ಬರಬಹುದು. ಗ್ಯಾರಂಟಿ ಯೋಜನೆಗಳಿಗೆ 60000 ಕೋಟಿ ಬೇಕು. ಯಾರಿಗೆ ಕೊಡುತ್ತಾ ಇದ್ದೇವೆ? ಶ್ರೀಮಂತರಿಗೆ ಕೊಡುತ್ತಾ ಇದ್ದೀವಾ?

ಅಂಬಾನಿ, ಅದಾನಿಗಳಿಗೆ ಸಾಲ ಮನ್ನಾ ಮಾಡ್ತಾ ಇದ್ದೀವಾ? ರೈತರ ಸಾಲ ಮನ್ನ ಮಾಡಿ ಎಂದರೆ ಒಂದು ರೂಪಾಯಿ ಸಾಲ ಮನ್ನಾ ಮಾಡಿಲ್ಲ. ಇವರಿಗೆ ನಮ್ಮನ್ನು ಪ್ರಶ್ನಿಸುವ ನೈತಿಕತೆ ಇದೆಯೇ ಎಂದು ಟೀಕಿಸಿದರು.

ಸರ್ಕಾರ ಪಾಪರ್‌ ಆಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಗೆ ಹೇಳುತ್ತಾರೆ? ನಾವು ಯಾರದ್ದಾದರೂ ಸಂಬಳ ನಿಲ್ಲಿಸಿದ್ದೇವೆಯೇ? ಆಯವ್ಯಯದಲ್ಲಿ ಘೋಷಿಸಿದ ಕಾರ್ಯಕ್ರಮಗಳಿಗೆ ಅನುದಾನ ಒದಗಿಸದೇ ಸ್ಥಗಿತ ಗೊಳಿಸಿದ್ದೇವೆಯೇ ಎಂದು ಅವರು ಪ್ರಶ್ನಿಸಿದರು.

ತೈಲ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿಯವರು, ಬೆಲೆ ಏರಿಕೆಯ ಹೊರತಾಗಿಯೂ ರಾಜ್ಯದ ಪೆಟ್ರೋಲ್‌, ಡೀಸೆಲ್‌ ಬೆಲೆ ನೆರೆಯ ರಾಜ್ಯಗಳು ಹಾಗೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ ಕಡಿಮೆ ಎಂದು ವಿವರಿಸಿದರು.

ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದಾಗ ಪೆಟ್ರೋಲ್‌ ಮೇಲೆ ಕೇಂದ್ರ ಅಬಕಾರಿ ಸುಂಕ 9.48 ರೂಗಳಷ್ಟಿತ್ತು. 2020ರ ಮೇ ನಲ್ಲಿ 32.98 ರೂ.ಗಳಿಗೆ ಹೆಚ್ಚಾಗಿದೆ. ಈ ಮಟ್ಟದ ಏರಿಕೆ ವಿರುದ್ಧ ಬಿಜೆಪಿಯವರಾಗಲೀ, ಆರ್.ಅಶೋಕ್ ಆಗಲಿ ಬಾಯಿ ಬಿಟ್ಟಿಲ್ಲ. ಅವರಿಗೆ ಅರ್ಥ ಆಗಿದ್ದರೆ ತಾನೆ ಎಂದು ಛೇಡಿಸಿದರು.

ಗೋಷ್ಠಿಯಲ್ಲಿ ಸಚಿವರಾದ ಚಲುವರಾಯಸ್ವಾಮಿ, ಬೈರತಿ ಸುರೇಶ್, ಶಾಸಕರಾದ ನರೇಂದ್ರಸ್ವಾಮಿ, ಗೋಪಾಲಕೃಷ್ಣ ಬೇಳೂರು ಸೇರಿ ಹಲವರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುರಿತು ಸಿಟಿ ರವಿ ಅಶ್ಲೀಲ ಹೇಳಿಕೆ: ಮಹಿಳಾ ಕಾಂಗ್ರೆಸ್ ಪ್ರತಿಭಟನೆ| CT Ravi

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುರಿತು ಸಿಟಿ ರವಿ ಅಶ್ಲೀಲ ಹೇಳಿಕೆ: ಮಹಿಳಾ ಕಾಂಗ್ರೆಸ್

ಬಿಜೆಪಿ ನಾಯಕರು ಬಾಯಿ ಬಿಟ್ಟರೆ ಸಾಕು, ಅವರ ಸಂಸ್ಕೃತಿ ತಿಳಿಯುತ್ತದೆ. CT Ravi

[ccc_my_favorite_select_button post_id="99100"]
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮನೆ ನಿರ್ಮಾಣ..!| House construction

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮನೆ ನಿರ್ಮಾಣ..!| House construction

ವಾಸಿಸಲು ಮನೆ ಇಲ್ಲದ ಕಾರಣ ಧರ್ಮಸ್ಥಳದಿಂದ ಮನೆ ನಿರ್ಮಿಸಿಕೊಡಲಾಗುತ್ತಿದೆ House construction

[ccc_my_favorite_select_button post_id="99191"]
ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್ – VIDEO ನೋಡಿ

ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್

ಇತ್ತೀಚೆಗೆ ನೀತಾ ಅಂಬಾನಿ ಅವರು ತಮ್ಮ ಮರ್ಸಿಡೀಸ್ ಬೆಂಜ್ ಬುಲೆಟ್ ಪ್ರೊಫ್ ಕಾರ್‌ನಲ್ಲಿ ಹೈ ಸೆಕ್ಯೂರಿಯಲ್ಲಿ ಆಗಮಿಸಿದ್ದರು. Video

[ccc_my_favorite_select_button post_id="99152"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World Chess Championship

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World

18 ವರ್ಷ ವಯಸ್ಸಿನ ಗ್ರಾ ಟ್ರ್ಯಂಡ್ ಮಾಸ್ಟರ್ ಗುಕೇಶ್ World Chess Championship

[ccc_my_favorite_select_button post_id="98503"]
ನಂದಿನಿ ಲೇಔಟ್ ನಿಂದ ಬಂದು ಮಧುರೆ ಕೆರೆಯಲ್ಲಿ ಆತ್ಮಹತ್ಯೆ..!| Suicide

ನಂದಿನಿ ಲೇಔಟ್ ನಿಂದ ಬಂದು ಮಧುರೆ ಕೆರೆಯಲ್ಲಿ ಆತ್ಮಹತ್ಯೆ..!| Suicide

ಭದ್ರಾಪುರ ಗ್ರಾಮದ ಸಂಬಂಧಿಕರ‌ ಮನೆಗೆ ಬರುತ್ತಿದ್ದ ಯುವಕನ ಮಧುರೆ ಕೆರೆ ಬಳಿ ಚೆಪ್ಪಲಿ, ಬನಿಯನ್ ಹಾಗೂ ಟೆತ್ ನೋಟ್ Suicide

[ccc_my_favorite_select_button post_id="99178"]
Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಈ ಸರಣಿ ಅಪಘಾತ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. Accident

[ccc_my_favorite_select_button post_id="99186"]

ಆರೋಗ್ಯ

ಸಿನಿಮಾ

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಬಂಧನಕ್ಕೊಳಗಾಗಿದ್ದ ಅಲ್ಲು ಅರ್ಜುನ್ ಅವರು ಇಂದು ಬೆಳಿಗ್ಗೆಯಷ್ಟೇ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. Allu arjun

[ccc_my_favorite_select_button post_id="98682"]