ಬೆಂಗಳೂರು, (ಜೂ.19): ರಾಜ್ಯದಲ್ಲಿ ದಿಢೀರ್ ತೈಲ ಬೆಲೆ ಏರಿಕೆ ನೀತಿ ಖಂಡಿಸಿ ಗುರುವಾರ (ಜೂನ್ 20) ಬೆಂಗಳೂರಿನಲ್ಲಿ ಬೃಹತ್ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಬಿಜೆಪಿ ಕರ್ನಾಟಕ ಟ್ವಿಟ್ ಮಾಡಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಿಂದಾಗಿ ರಾಜ್ಯದ ಜನ ಹೈರಾಣಾಗಿದ್ದಾರೆ. ಹೀಗಾಗಿ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿದೆ.
ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬೆಳಗ್ಗೆ 9 ಗಂಟೆಗೆ ಬಿಜೆಪಿ ಕಚೇರಿ ಜಗನ್ನಾಥ ಭವನದಿಂದ ವಿಧಾನಸೌಧದವರೆಗೆ ಸೈಕಲ್ ತುಳಿಯುವ ಮೂಲಕ ಈ ಪ್ರತಿಭಟನೆ ನಡೆಯಲಿದೆ.
ಈಗಾಗಲೇ ತೈಲ ಬೆಲೆ ಏರಿಕೆಗೆ ಸಂಬಂಧಪಟ್ಟಂತೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ನಾಳೆಯ ಪ್ರತಿಭಟನೆಗೆ ಎಲ್ಲರೂ ಕೈಜೋಡಿಸಿ ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಬಿಜೆಪಿ ತಿಳಿಸಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….