ದೊಡ್ಡಬಳ್ಳಾಪುರ, (ಜೂ.19); ನಗರದ ಸೌಂದರ್ಯ ಮಹಲ್ ಚಿತ್ರಮಂದಿರದ ಸಮೀಪದಲ್ಲಿರುವ ಲಾಡ್ಜ್‌ನಲ್ಲಿ ವ್ಯಕ್ತಿಯೋರ್ವನ ಶವ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಹಿಂದೂಪುರ ಮೂಲದ ಮುಸ್ತಾನ್ ಸಾಬ್ (55 ವರ್ಷ) ಎಂದು ಗುರುತಿಸಲಾಗಿದ್ದು, ಹೃದಯಾಘಾತದಿಂದ ಸಾವನಪ್ಪಿರಬಹುದು ಎಂದು ಶಂಕಿಸಲಾಗಿದೆ.
ಸೋಮವಾರ ಮಧ್ಯಾಹ್ನ ರೂಮನ್ನು ಬಾಡಿಗೆಗೆ ಪಡೆದಿದ್ದ ವ್ಯಕ್ತಿ ಇಂದು ಬಾಗಿಲು ತೆಗೆಯದೆ ಇರುವ ಕಾರಣ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಬಾಗಿಲು ತೆಗೆಸಿ ನೋಡಿದಾಗ, ವ್ಯಕ್ತಿ ಮಲಗಿದ್ದ ಸ್ಥಿತಿಯಲ್ಲಿಯೇ ಸಾವನಪ್ಪಿರುವುದು ಬೆಳಕಿಗೆ ಬಂದಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….