ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸಚಿವ ಕೆ.ಹೆಚ್ ಮುನಿಯಪ್ಪ ಸೂಚನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಜೂನ್ 19): ಜೂನ್ 27 ರಂದು ಜಿಲ್ಲೆಯ ಮೂರು ಪ್ರಮುಖ ಸ್ಥಳಗಳಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದ್ದು ಇದಕ್ಕಾಗಿ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ಟೌನ್ ನಲ್ಲಿರುವ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ ಕೆಂಪೇಗೌಡ ಜಯಂತಿ ಆಚರಣೆಯ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ದೇವನಹಳ್ಳಿಯ ಪ್ರಮುಖ ಮೂರು ಸ್ಥಳಗಳಾದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ನಾಡಪ್ರಭು ಕೆಂಪೇಗೌಡರ ಬೃಹತ್ ಪುತ್ಥಳಿಗೆ ಬೆಳಗ್ಗೆ 07.30 ಕ್ಕೆ ಮಾಲಾರ್ಪಣೆ ಮಾಡಲಾಗುವುದು. ನಂತರ ನಾಡಪ್ರಭು ಕೆಂಪೇಗೌಡರ ಹುಟ್ಟೂರಾದ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದಲ್ಲಿ ಬೆಳಿಗ್ಗೆ 08:00 ಗಂಟೆಗೆ ಜ್ಯೋತಿ ಬೆಳಗಿಸಿ ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಕಳುಹಿಸಿಕೊಡಲಾಗುವುದು. ಬೆಳಗ್ಗೆ 09.00 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮ ಹಾಗೂ ಜಿಲ್ಲಾಡಳಿತ ಭವನದಲ್ಲಿರುವ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.

ನಾಡಪ್ರಭು ಕೆಂಪೇಗೌಡರು ಎಲ್ಲಾ ವರ್ಗದವರನ್ನು ಒಳಗೊಂಡು ಬೆಂಗಳೂರು ನಿರ್ಮಿಸಿದ್ದಾರೆ. ಹಾಗಾಗಿ ಎಲ್ಲಾ ವರ್ಗದ ಜನರನ್ನು ಒಳಗೊಂಡಂತೆ ಪಕ್ಷಾತೀತವಾಗಿ, ಜಾತ್ಯತೀತವಾಗಿ ಆಚರಣೆ ಮಾಡಬೇಕಿದೆ. ಸಂಘ ಸಂಸ್ಥೆಗಳು, ಸ್ತ್ರೀ ಶಕ್ತಿ ಸಂಘಗಳು, ಸ್ತಳೀಯ ಜನಪ್ರತಿನಿಧಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಮುಖಂಡರು ಸಾರ್ವಜನಿಕರನ್ನು ಕರೆ ತರಲು ಬಸ್ ವ್ಯವಸ್ಥೆ ಕಲ್ಪಿಸಿ. ಜಿಲ್ಲೆಯ ಎಲ್ಲಾ ಸರ್ಕಾರಿ ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿಗೆ ಸೂಚಿಸಿದರು.

ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ವೇದಿಕೆ ವ್ಯವಸ್ಥೆ, ಮೂಲಭೂತ ಸೌಕರ್ಯ, ಸಾಂಸ್ಕೃತಿಕ ಕಾರ್ಯಕ್ರಮಕ್ಕಾಗಿ ಕಲಾ ತಂಡಗಳ ವ್ಯವಸ್ಥೆಯನ್ನು ಮಾಡುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ರಾಜಣ್ಣ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ(ಬಯಪ) ಅಧ್ಯಕ್ಷ ಶಾಂತಕುಮಾರ್ , ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ವಕ್ಫ್ ಮಸೂದೆ ಅಂಗಿಕಾರಕ್ಕೆ ವೆಲ್ಫೇರ್ ಪಾರ್ಟಿ ತೀವ್ರ ವಿರೋಧ.. ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ವಕ್ಫ್ ಮಸೂದೆ ಅಂಗಿಕಾರಕ್ಕೆ ವೆಲ್ಫೇರ್ ಪಾರ್ಟಿ ತೀವ್ರ ವಿರೋಧ.. ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ (Wakf Bill) ಅಂಗಿಕಾರವಾಗಿದ್ದು ಇದು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ Harithalekhani

[ccc_my_favorite_select_button post_id="105525"]
ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ Cmsiddaramaiah

[ccc_my_favorite_select_button post_id="105544"]
ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಕರ್ತವ್ಯದಲ್ಲಿದ್ದ ಪೊಲೀಸ್ (Police) ಪೇದೆಯೊಬ್ಬ ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲಿ ಬಿದ್ದು ಒದ್ದಾಡಿದ ಘಟನೆ ಉತ್ತರ ಪ್ರದೇಶದ (UP) ಬಿಜೋರ್‌ನಲ್ಲಿ ನಡೆದಿದೆ.

[ccc_my_favorite_select_button post_id="105530"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ದೊಡ್ಡಬಳ್ಳಾಪುರ: ಹೊಸಹಳ್ಳಿ ಬ್ಯಾಂಕ್ ಲೂಟಿ ಪ್ರಕರಣ.. ಮತ್ತೆ ನಾಲ್ವರ ಬಂಧನ| KGB

ದೊಡ್ಡಬಳ್ಳಾಪುರ: ಹೊಸಹಳ್ಳಿ ಬ್ಯಾಂಕ್ ಲೂಟಿ ಪ್ರಕರಣ.. ಮತ್ತೆ ನಾಲ್ವರ ಬಂಧನ| KGB

ಪೊಲೀಸ್ ಇಲಾಖೆಗೆ ಸವಾಲಾಗಿ ಪರಿಣಮಿಸಿರುವ ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕಿನ (KGB) ಕಳವು Harithalekhani

[ccc_my_favorite_select_button post_id="105553"]
NH 44ರಲ್ಲಿ ಭೀಕರ ಅಪಘಾತ‌: ತಂದೆ ಮಗಳ ದುರ್ಮರಣ.. ತಾಯಿಯ ಸ್ಥಿತಿ ಚಿಂತಾಜನಕ

NH 44ರಲ್ಲಿ ಭೀಕರ ಅಪಘಾತ‌: ತಂದೆ ಮಗಳ ದುರ್ಮರಣ.. ತಾಯಿಯ ಸ್ಥಿತಿ ಚಿಂತಾಜನಕ

ಕ್ಯಾಂಟರ್ ಪಲ್ಟಿಯಾಗಿ ಬೈಕ್ ಮೇಲೆ ಬಿದ್ದ ಪರಿಣಾಮ ಬೈಕ್ ನಲ್ಲಿದ್ದ ತಂದೆ ಮತ್ತು ಮಗು ಸ್ಥಳದಲ್ಲೇ ಸಾವನ್ನಪ್ಪಿ, ಗೃಹಿಣಿ ಸ್ಥಿತಿ ರಾಷ್ಟ್ರೀಯ ಹೆದ್ದಾರಿ 44ರ (NH 44)

[ccc_my_favorite_select_button post_id="105548"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!