ಬೆಂಗಳೂರು, (ಜೂ.19); ಕಿಡ್ನಾಪ್ ಹಾಗೂ ಹತ್ಯೆ ಆರೋಪದಲ್ಲಿ ಬಂಧಿನಕ್ಕೆ ಒಳಗಾಗಿರುವ ಖ್ಯಾತ ನಟ ದರ್ಶನ್ ಹಾಗೂ ಅವರ ಕುಟುಂಬದ ವಿರುದ್ದ ಯಾವುದೇ ಸುದ್ದಿ ಪ್ರಕಟಿಸಿದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ತಡೆಯಾಜ್ಞೆ ತಂದಿದ್ದಾರೆ.
ಈ ಕುರಿತು ಇಂದು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪ್ರಕರಣದ ಕುರಿತು ಉಲ್ಲೇಖಿಸಿರುವ ಅವರು, ರೇಣುಕಾಸ್ವಾಮಿ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಈ ಘಟನೆಯಿಂದಾಗಿ ನನಗೆ ಹಾಗೂ ನನ್ನ ಹದಿಹರೆಯದ ಮಗನಿಗೆ, ದರ್ಶನ್ ಅವರ ಸ್ನೇಹಿತರಿಗೆ, ಅಭಿಮಾನಿಗಳಿಗೆ ತುಂಬ ದುಃಖವಾಗಿದೆ ಎಂದಿದ್ದಾರೆ.
ಇದೇ ವೇಳೆ ಮಾಧ್ಯಮಗಳ ವಿರುದ್ಧ ಅಸಮಾಧಾನ ಹೊರಹಾಕಿರುವ ಅವರು, ವಿವಿಧ ಮಾಧ್ಯಮಗಳು ಹಾಗೂ ಸೋಷಿಯಲ್ ಮೀಡಿಯಾಗಳಲ್ಲಿ ಸತ್ಯಕ್ಕೆ ದೂರವಾದ ಸುದ್ದಿಗಳು ಪ್ರಸಾರವಾಗುತ್ತಿವೆ. ದಯವಿಟ್ಟು ತನಿಖಾಧಿಕಾರಿಗಳು ನೀಡುವ ಮಾಹಿತಿ ಮಾತ್ರವನ್ನೇ ಪ್ರಕಟಿಸಿ ಎಂದು ಮನವಿ ಮಾಡಿದ್ದಾರೆ.
ತಾಯಿ ಚಾಮುಂಡೇಶ್ವರಿ ಹಾಗೂ ನಮ್ಮ ಕಾನೂನು ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ನ್ಯಾಯಾಲಯವು ಮೇಲುಗೈ ಸಾಧಿಸಲಿದೆ. ನ್ಯಾಯಾಲದಿಂದ ಪ್ರಕರಟವಾಗಲಿರುವ ತೀರ್ಪು ದರ್ಶನ್ ಹಾಗೂ ಅಭಿಮಾನಿಗಳಿಗೆ ನೆಮ್ಮದಿಯ ಭಾವ ಮೂಡಿಸಲಿದೆ ಎಂದು ನಾನು ಭಾವಿಸುತ್ತೇನೆ. ಸತ್ಯ ಮೇವ ಜಯತೆ ಎಂದು ಬರೆದಿದ್ದಾರೆ.
ಅಷ್ಟೇ ಅಲ್ಲದೆ ತಮ್ಮ ಕುಟುಂಬದ ಕುರಿತು ಟಿವಿ ಮಾಧ್ಯಮಗಳು ಹಾಗೂ ಸೋಷಿಯಲ್ ಮೀಡಿಯಾಗಳು ಮಾನಹಾನಿಕರ ಸುದ್ದಿಗಳನ್ನು ಪ್ರಕಟಿಸುವಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….