ಫಸಲ್ ವಿಮೆಗೆ ಹಣ ಕಟ್ಟಿದ ದೊಡ್ಡಬಳ್ಳಾಪುರದ ರೈತರಿಗೆ ಭಾರೀ ಮೋಸ..!?; ಕೇಳೋರ್ ಯಾರು ಅನ್ನದಾತರ ಗೋಳು

ದೊಡ್ಡಬಳ್ಳಾಪುರ, (ಜೂ.15); ತೀವ್ರವಾಗಿ ಕಾಡಿದ ಬರದ ನಡುವೆಯೂ ಕೇಂದ್ರ ಬಿಜೆಪಿ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಫಸಲ್‌ ವಿಮೆ ಯೋಜನೆಯು ತಾಲೂಕಿನ ರೈತರ ಕೈಹಿಡಿಯದೆ ಹೋಗಿದ್ದು, ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಿಮೆ ಕಟ್ಟಿದ ರೈತರ ಆಕ್ರೋಶ ವ್ಯಕ್ತವಾಗಿದೆ‌.

ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಮಪಾಲು ಭರಿಸುವ ಸದ್ಯದ ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆ ವಿಮಾ ಕಂಪನಿಗಳ ಪರವಾಗಿದ್ದು, ವಿಮೆ ಕಂಪನಿ ಮತ್ತು ಕೃಷಿ ಅಧಿಕಾರಿಗಳು ಷಾಮೀಲಾಗಿ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂಬ ಆರೋಪ ರೈತರದ್ದಾಗಿದೆ.

ಕಳೆದ ವರ್ಷ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 15545 ರೈತರು ಒಟ್ಟು ಫಸಲ್ ವಿಮೆಗೆ ಹಣ ಕಟ್ಟಿದ್ದು, ದೊಡ್ಡಬಳ್ಳಾಪುರ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಸರಕಾರ ಘೋಷಿಸಿದ್ದರೂ ಕೂಡ ಕೇವಲ 4111ಮಂದಿ ರೈತರಿಗೆ ಮಾತ್ರ ಪರಿಹಾರ ನೀಡಲಾಗಿದೆ.

ಇದರಲ್ಲಿ ರಾಗಿ ಬೆಳೆಗೆ ವಿಮೆ ಮಾಡಿಸಿದ ದೊಡ್ಡಬಳ್ಳಾಪುರ ತಾಲೂಕಿನ ರೈತರಿಗೆ ತೀವ್ರ ಅನ್ಯಾಯವಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, 2023-24 ನೇ ಸಾಲಿನಲ್ಲಿ 12966 ರೈತರು ರಾಗಿ ಬೆಳೆಗೆ ವಿಮೆ ಹಣ ಪಾವತಿಸಿದರೆ, ಬಂದಿರುವುದು ಕೇವಲ 2668 ಮಂದಿಗೆ ಮಾತ್ರ.

ಉಳಿದಂತೆ ಜೋಳದ ಬೆಳೆಗೆ 2008 ರೈತರು ವಿಮೆ ಮಾಡಿಸಿದ್ದು, 1428 ರೈತರಿಗೆ ಮಾತ್ರ ಪರಿಹಾರ ದೊರೆತಿದೆ‌. ಅನಾವೃಷ್ಟಿಯಿಂದ ವ್ಯಾಪಕ ಬೆಳೆ ನಷ್ಟ ಸಂಭವಿಸಿದರೂ ವಿಮಾ ಕಂಪನಿ ತಾಲೂಕಿನ ರೈತರಿಗೆ ಅನ್ಯಾಯ ಎಸಗಿದೆ ಎಂಬ ಆರೋಪ ರೈತರದ್ದು.

ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಮಪಾಲು ಭರಿಸುವ ಒಪ್ಪಂದದಂತೆ ಜಾರಿ ಮಾಡಲಾಗಿದೆ. ಆದರೆ, ವಿಮಾ ಕಂಪನಿ ಆಯ್ಕೆ, ನಿಯಮಾವಳಿ ರಚನೆ ಅಧಿಕಾರ ಕೇಂದ್ರ ಸರಕಾರಕ್ಕಿದ್ದು, ಅನುಷ್ಠಾನ ಮಾತ್ರ ರಾಜ್ಯ ಸರಕಾರದ್ದಾಗಿದೆ. ಇಷ್ಟಾದರೂ, ಯೋಜನೆಯಿಂದ ರೈತ ಸಮುದಾಯಕ್ಕೂ ಅನುಕೂಲವಾಗುತ್ತಿಲ್ಲ. ನಷ್ಟ ಪರಿಹಾರಕ್ಕೆ ನಿಯಮಾವಳಿ ತೊಡಕುಗಳು ರೈತ ಹಿತಾಸಕ್ತಿಗೆ ವಿರುದ್ಧವಾಗಿವೆ.

ಫಸಲ್‌ ಬಿಮಾ ಯೋಜನೆ ರೈತರ ಶ್ರಮದಲ್ಲಿ ವಿಮಾ ಕಂಪನಿಗಳು ಲಾಭ ಮಾಡಿಕೊಳ್ಳಲು ಪೂರಕವಾಗಿದೆ. ಕಂತು ಪಾವತಿಸಿ ಬೆಳೆ ವಿಮೆ ಮಾಡಿಸಿದ ರೈತರಿಗೆ, ಬೆಳೆ ನಷ್ಟವಾದರೂ ಪರಿಹಾರ ಮೊತ್ತ ಸಮರ್ಪಕವಾಗಿ ಸಿಗುತ್ತಿಲ್ಲ. ನಷ್ಟ ಪರಿಹಾರ ಬಯಸಿದ ಸಂದರ್ಭದಲ್ಲಿ ವಿಮಾ ಕಂಪನಿಗಳು ನಿಯಮಾವಳಿ ತೊಡಕು ಮುಂದಿಟ್ಟು ವಂಚಿಸುತ್ತಿವೆ ಎಂಬ ದೂರುಗಳಿವೆ. ಹೀಗಾಗಿ,ರೈತರಿಗೆ ಅನುಕೂಲವಾಗದ ಸದ್ಯದ ಯೋಜನೆ ಮುಂದುವರಿಸುವುದಕ್ಕೆ ಅರ್ಥವಿಲ್ಲ

ವಿಮಾ ಕಂಪನಿಗಳಿಂದ ರೈತರಿಗೆ ಆಗುತ್ತಿರುವ ಈ ಮೋಸದಲ್ಲಿ ಬ್ಯಾಂಕ್‌ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಪಿಡಿಒಗಳು ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಷಾಮೀಲಾಗುತ್ತಿದ್ದಾರೆ ಎಂಬ ಆರೋಪ ವ್ಯಾಪಕವಾಗಿದೆ.

ಅಲ್ಲದೆ ನಿರಂತರ ಅನಾವೃಷ್ಟಿಯಿಂದ ನೊಂದಿರುವ ರೈತರ ಗಾಯದ ಮೇಲೆ ವಿಮೆ ಕಂಪನಿಗಳು ಬರೆ ಎಳೆಯುತ್ತಿರುವುದು ಕಣ್ಣಿಗೆ ಕಾಣುತ್ತಿದ್ದರು ಯಾವುದೇ ರಾಜಕಾರಣಿಗಳು ತುಟಿ ಬಿಚ್ಚದೆ ಮೌನಕ್ಕೆ ಶರಣಾಗಿರುವುದು ಅನ್ನದಾತರಿಗೆ ಮಾಡುತ್ತಿರುವ ದ್ರೋಹ ಎಂಬ ಆಕ್ರೋಶ ರೈತರದ್ದಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ; ಬಿ. ಮುನೇಗೌಡ ನೇತೃತ್ವದಲ್ಲಿ 90 ಬಸ್ಸುಗಳಲ್ಲಿ ಕಾರ್ಯಕರ್ತರು ಭಾಗಿ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ; ಬಿ. ಮುನೇಗೌಡ ನೇತೃತ್ವದಲ್ಲಿ 90 ಬಸ್ಸುಗಳಲ್ಲಿ ಕಾರ್ಯಕರ್ತರು

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ (B.Munegowda) ನೇತೃತ್ವದಲ್ಲಿ 90 ಬಸ್ಸು

[ccc_my_favorite_select_button post_id="105238"]
ಕನಸವಾಡಿಯಲ್ಲಿ ಅಕ್ಷರ ಜಾತ್ರೆ; ಅಧ್ಯಕ್ಷರ ಮೆರವಣಿಗೆಗೆ ಚಾಲನೆ

ಕನಸವಾಡಿಯಲ್ಲಿ ಅಕ್ಷರ ಜಾತ್ರೆ; ಅಧ್ಯಕ್ಷರ ಮೆರವಣಿಗೆಗೆ ಚಾಲನೆ

ಸಮ್ಮೇಳಾಧ್ಯಕ್ಷರಾದ ಹಿರಿಯ ಛಾಯಾಗ್ರಾಹಕ, ಸಾಕ್ಷ್ಯಚಿತ್ರ ಕಲಾವಿದ ಟಿ.ಕೆಂಪಣ್ಣ ಅವರನ್ನು ಕಲಾ ತಂಡಗಳೊಂದಿಗೆ ಅದ್ಧೂರಿ ಮೆರವಣಿಗೆಯ ಮೂಲಕ ಸಮ್ಮೇಳನ Kanasavadi

[ccc_my_favorite_select_button post_id="105216"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಪವನ್ ತನ್ನ ತಂದೆಯ ಜೊತೆಯಲ್ಲಿ ಕೃಷಿಯಲ್ಲಿ ತೊಡಗಿದ್ದ, ಕಳೆದ ಮೂರು ವರ್ಷದಿಂದ ಸರಿಯಾಗಿ ಬೆಳೆ ಬಾರದೇ ಪವನ್ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದರು. Suicide

[ccc_my_favorite_select_button post_id="105172"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!