ದೊಡ್ಡಬಳ್ಳಾಪುರ, (ಜೂ.25); ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ನೇಮಕ ಮಾಡಿಕೊಳ್ಳುತ್ತಿರುವ ಅತಿಥಿ ಶಿಕ್ಷಕರ ದಾಖಲೆಗಳನ್ನು ಪರಿಶೀಲನೆ ನಡೆಸಬೇಕೆಂದು ಕರವೇ ಪ್ರವೀಣ್ ಶೆಟ್ಟಿಬಣ ಒತ್ತಾಯಿಸಿದೆ.
ಈ ಕುರಿತು ನಗರದ ಕ್ಷೇತ್ರಶಿಕ್ಷಣಾಧಿಕಾರಿ ಕಚೇರಿಯಲ್ಲಿ ಬಿಇಒ ಸಯದ್ ಅನಿಸಾ ಮುಜಾವರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಕರವೇ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ ಅವರು ಈ ಕುರಿತು ಮಾಹಿತಿ ನೀಡಿ, ಶಿಕ್ಷಕರ ಕೊರತೆ ಹಿನ್ನೆಲೆಯಲ್ಲಿ ತಾಲೂಕಿನ ಸರ್ಕಾರಿ ಶಾಲೆಗಳಿಗೆ ನೂರಕ್ಕೂ ಹೆಚ್ಚು ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ಆದರೆ ಕೆಲ ಶಾಲೆಗಳಲ್ಲಿ ಅರ್ಹತೆ ಇಲ್ಲದವರನ್ನು, ನಕಲಿ ದಾಖಲೆ ಸೃಷ್ಟಿಸಿ ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಈ ಹಿನ್ನೆಲೆಯಲ್ಲಿ ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಪಾರದರ್ಶಕತೆಯ ಜೊತೆಗೆ, ವಿದ್ಯಾರ್ಹತೆ ಅನುಭವವನ್ನು ಪರಿಗಣಿಸಿ ಅರ್ಹ ಅತಿಥಿ ಶಿಕ್ಷಕರಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದ ಅವರು, ಶಿಕ್ಷಣಾಧಿಕಾರಿಗಳು ಶಾಲೆಗಳ ಭೇಟಿ ನೀಡಿ, ಅತಿಥಿ ಶಿಕ್ಷಕರ ದಾಖಲೆಗಳನ್ನು ಪರಿಪೂರ್ಣವಾಗಿ ಪರಿಶೀಲಿಸಿ, ನಂತರ ನೇಮಕಾತಿ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದ ಮುಖಂಡರಾದ ಮಣಿ ರೋಜಿಪುರ, ಶಂಕರ್, ಗಂಗರಾಜ್ ಶಿರವಾರ, ಹಮೀದ್, ಮುರುಳಿ, ನವೀನ್ ಮತ್ತಿತರರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….