ದೊಡ್ಡಬಳ್ಳಾಪುರ, (ಜೂ.25); ಪೊಲೀಸ್ ಇಲಾಖೆ ವತಿಯಿಂದ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜುಲೈ 01ರಿಂದ ಉಚಿತ ನಾಗರೀಕ ಬಂದೂಕು ತರಬೇತಿ ಶಿಬಿರವನ್ನು ನಡೆಸಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆ ನೀಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಆದೇಶದಂತೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ನಾಗರೀಕ ಬಂದೂಕು ತರಬೇತಿಯನ್ನು ಜುಲೈ.01ರಿಂದ ಜುಲೈ 07 ರ ವರೆಗೆ ಆಯೋಜಿಸಲು ತೀರ್ಮಾನಿಸಲಾಗಿದೆ.
ತೋಟಗಳ ರಕ್ಷಣೆ, ಆತ್ಮ ರಕ್ಷಣೆಗಾಗಿ ಬಂದೂಕು ತರಬೇತಿ ಪಡೆಯಲು ಇಚ್ಚಿಸುವವರಿಗೆ ಅರ್ಜಿಗಳನ್ನು ಪೊಲೀಸ್ ಠಾಣೆಯಲ್ಲಿ ವಿತರಿಸಲಾಗುತ್ತದೆ.
ಭರ್ತಿ ಮಾಡಿದಂತಹ ಅರ್ಜಿಗಳನ್ನು ಜೂ.29ರ ಒಳಗಾಗಿ ಸಲ್ಲಿಸಬೇಕೆಂದು ಪೊಲೀಸ್ ಸಿಬ್ಬಂದಿ ರೇಣುಕಾಯಾದವ್ ತಿಳಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….