ದೊಡ್ಡಬಳ್ಳಾಪುರ, (ಜೂ.25); ತಾಲೂಕಿನ ದೊಡ್ಡಬೆಳವಂಗಲ ಪೊಲೀಸರಿಂದ, ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಸಲುವಾಗಿ ವಿಶೇಷ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಇನ್ಸ್ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್ ಅವರು, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ, ವಿದ್ಯಾರ್ಥಿಗಳಿಗೆ ಪೊಕ್ಸೋ ಕಾಯ್ದೆ, ಸೈಬರ್ ಅಪರಾಧ, ಮಾಧಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ, ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ನಡೆಸಿದರು.
ಈ ಕುರಿತು ಮಾಹಿತಿ ನೀಡಿದ ಅವರು, ಅಪರಾಧಗಳು ನಡೆದ ಮೇಲೆ ತನಿಖೆ ನಡೆಸುವುದಕ್ಕಿಂತ ಅಪರಾಧಗಳು ಆಗದಂತೆ ಎಚ್ಚರಿಕೆ ವಹಿಸುವುದು ಉತ್ತಮ. ಈ ನಿಟ್ಟಿನಲ್ಲಿ ಶಾಲಾ– ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಲಾಗುತ್ತಿದೆ ಎಂದರು.
ಪೊಲೀಸರಿಂದ ಮಾತ್ರ ಅಪರಾಧಗಳ ತಡೆ ಸಾಧ್ಯವಿಲ್ಲ. ಸಾರ್ವಜನಿಕರ ಸಹಕಾರವೂ ಮುಖ್ಯ. ಶಾಲಾ ಕಾಲೇಜು ಹಂತದಲ್ಲಿ ವಿದ್ಯಾರ್ಥಿ ಸಮೂಹ ಹೆಜ್ಜೆ ತಪ್ಪುವುದು ಸಹಜ. ಸಮಾಜದಲ್ಲಿ ಚಿಕ್ಕ ಮಕ್ಕಳು ತಪ್ಪುದಾರಿಯಲ್ಲಿ ಹೋಗುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಮಕ್ಕಳು ತಾತ್ಕಾಲಿಕ ಆಕರ್ಷಣೆಗೆ ಬಲಿಯಾಗದೇ ತಮ್ಮ ತಂದೆ ತಾಯಿಗಳ ಆಶಯದಂತೆ ಚೆನ್ನಾಗಿ ಓದಿ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಪಿಯು ಕಾಲೇಜಿನ ಪ್ರಾಂಶುಪಾಲರಾದ ಸುನಿತಾ, ಪೊಲೀಸ್ ಸಿಬ್ಬಂದಿ ತೀರ್ಥೇಶ್, ಪಿಯು ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರುಗಳಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….