ಅಯೋಧ್ಯೆ, (ಜೂ.25): ಕಳೆದ ವರ್ಷ 22ನೇ ಜನವರಿಯಂದು ಅದ್ಧೂರಿ ಉದ್ಘಾಟನೆ ಕಂಡ ಬಾಲರಾಮ ಮಂದಿರ ಸೋರುತಿದೆ. ಅಯೋಧ್ಯೆಯಲ್ಲಿ ಸುರಿದ ಮೊದಲ ಮಳೆಗೆ ನೀರು ಛಾವಣೆಯಿಂದ ಕೆಳಗೆ ಇಳಿಯುತ್ತಿದೆಯೆಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಈ ಕುರಿತು ಬಾಲರಾಮಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ ಅವರು ಮಾಧ್ಯಮಗಳಿಗೆ ನೀಡಿರುವ ಹೇಳಿಕೆ ಪ್ರಕಾರ, ಬಾಲರಾಮನನ್ನು ಪ್ರತಿಷ್ಠಾಪನೆ ಮಾಡಲಾಗಿರುವ ಗರ್ಭಗುಡಿಯಲ್ಲಿ ಮಳೆ ನೀರು ಸೋರಿಕೆಯಾಗಿದೆ. ಅಲ್ಲದೇ ಇಲ್ಲಿ ಒಳಚರಂಡಿಯ ವ್ಯವಸ್ಥೆಯನ್ನು ಸಹ ಮಾಡಿಲ್ಲ. ಜುಲೈ 2025ರೊಳಗೆ ರಾಮಮಂದಿರದ ಸಂಪೂರ್ಣ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಆದ್ರೆ ಅದು ಅಸಾಧ್ಯ ಎಂಬುವುದು ನನ್ನ ಅನಿಸಿಕೆಯಾಗಿದೆ ಎಂದಿದ್ದಾರೆ.
ಈಗಾಗಲೇ ಬಂದ ಮೊದಲ ಮಳೆಗೆ ರಾಮಲಲ್ಲಾನ ಜಾಗಕ್ಕೆ ನೀರು ಬಂದಿದೆ. ಹೇಗೆ ಸೋರಿಕೆ ಆಯ್ತು? ಮಳೆನೀರು ಒಳಗೆ ಬರಲು ಕಾರಣ ಏನು ಎಂಬ ಪ್ರಶ್ನೆಗೆ ಸಂಬಂಧಿಸಿದವರು ಉತ್ತರ ನೀಡಬೇಕು. ಹಾಗೆ ಕಾಮಗಾರಿಯ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಪ್ರಧಾನ ಅರ್ಚಕರಾದ ಸತ್ಯೇಂದ್ರ ದಾಸ್ ಆಗ್ರಹಿಸಿದ್ದಾರೆ.
ಇನ್ನೂ ಈ ವಿಷಯ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಲೋಕಸಭೆ ಚುನಾವಣೆಯಲ್ಲಿ ರಾಜಕೀಯ ಲಾಭಕೋಸ್ಕರ ತರಾತುರಿಯಲ್ಲಿ ನಿರ್ಮಾಣಗೊಂಡ ಬಾಲ ರಾಮ ಮಂದಿರದ ಕಾಮಗಾರಿ ಕಳಪೆಯಾಗಿದೆಯೇ ಎನ್ನುವ ಆರೋಪಿಸಿದರೆ, ಮಳೆ ಹೆಚ್ಚಾದ ಕಾರಣ ಈ ರೀತಿ ಸಮಸ್ಯೆಯಾಗಿದೆ ಎಂದು ಬಿಜೆಪಿ ಬೆಂಬಲಿಗರು ಸಮರ್ಥನೆ ಮಾಡುತ್ತಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….